1
|
ಸಂಸೋನನು ತಿಮ್ನಾಗೆ ಹೋಗಿ ತಿಮ್ನಾ ದೊಳಗೆ ಪಿಲಿಷ್ಟಿಯರ ಕುಮಾರ್ತೆಯರಲ್ಲಿ ಒಬ್ಬ ಸ್ತ್ರೀಯನ್ನು ನೋಡಿ |
2
|
ತನ್ನ ತಂದೆತಾಯಿಗಳ ಬಳಿಗೆ ಬಂದು ಅವರಿಗೆ--ನಾನು ತಿಮ್ನಾದಲ್ಲಿ ಫಿಲಿಷ್ಟಿಯರ ಕುರ್ಮಾತೆಯರೊಳಗೆ ಒಬ್ಬ ಸ್ತ್ರೀಯನ್ನು ನೋಡಿದೆನು. ಈಗ ಅವಳನ್ನು ಹೆಂಡತಿಯಾಗುವದಕ್ಕೆ ನನಗೆ ತಕ್ಕೊಳ್ಳಿರಿ ಅಂದನು. |
3
|
ಆಗ ಅವನ ತಂದೆ ತಾಯಿಯೂ ಅವನಿಗೆ--ನಿನಗೆ ಸುನ್ನತಿ ಇಲ್ಲದ ಫಿಲಿಷ್ಟಿ ಯರಲ್ಲಿ ಹೆಂಡತಿಯನ್ನು ತಕ್ಕೊಳ್ಳುವದಕ್ಕೆ ನಿನ್ನ ಸಹೋ ದರರ ಕುಮಾರ್ತೆಯರಲ್ಲಿಯೂ ನಮ್ಮ ಎಲ್ಲಾ ಜನರ ಲ್ಲಿಯೂ ಸ್ತ್ರೀ ಇಲ್ಲವೋ ಅಂದರು. ಆದರೆ ಸಂಸೋನನು ತನ್ನ ತಂದೆಗೆ--ಅವಳನ್ನು ನನಗೆ ತೆಗೆದುಕೋ; ಅವಳು ನನ್ನ ಮನಸ್ಸಿಗೆ ಒಪ್ಪಿದ್ದಾಳೆ ಅಂದನು. |
4
|
ಇದು ಕರ್ತನಿಂದ ಉಂಟಾಯಿತೆಂದು ಅವನ ತಂದೆ ತಾಯಂದಿರು ಅರಿ ಯದೆ ಇದ್ದರು. ಏನಂದರೆ ಫಿಲಿಷ್ಟಿಯರಿಗೆ ವಿರೋಧ ವಾಗಿ ಅವನು ಕಾರಣವನ್ನು ಹುಡುಕಿದನು. ಆ ಕಾಲ ದಲ್ಲಿ ಫಿಲಿಷ್ಟಿಯರು ಇಸ್ರಾಯೇಲ್ಯರನ್ನೂ ಆಳುತ್ತಿದ್ದರು. |
5
|
ಆಗ ಸಂಸೋನನೂ ಅವನ ತಂದೆತಾಯಿಯೂ ತಿಮ್ನಾಗೆ ಹೋಗುತ್ತಿದ್ದರು. ಅವರು ತಿಮ್ನಾದ ದ್ರಾಕ್ಷೇ ತೋಟಗಳ ಬಳಿಗೆ ಬಂದಾಗ ಇಗೋ, ಪ್ರಾಯದ ಸಿಂಹವು ಅವನ ಎದುರಿಗೆ ಬಂದು ಗರ್ಜಿಸಿತು. |
6
|
ಆಗ ಅವನು ತನ್ನ ಕೈಯಲ್ಲಿ ಏನೂ ಇಲ್ಲದಿದ್ದರೂ ಕರ್ತನ ಆತ್ಮವು ಅವನ ಮೇಲೆ ಬಂದದ್ದರಿಂದ ಅದನ್ನು ಒಂದು ಮೇಕೆ ಮರಿಯ ಹಾಗೆ ಸೀಳಿಬಿಟ್ಟನು. ಆದರೆ ಅವನು ತಾನು ಮಾಡಿದ್ದನ್ನು ತನ್ನ ತಂದೆತಾಯಿಗಳಿಗೆ ತಿಳಿಸಲಿಲ್ಲ. |
7
|
ಅವನು ಹೋಗಿ ಆ ಸ್ತ್ರೀಯ ಸಂಗಡ ಮಾತನಾ ಡಿದನು. ಅವಳು ಸಂಸೋನನ ಕಣ್ಣಿಗೆ ಒಪ್ಪುವವಳಾ ಗಿದ್ದಳು. |
8
|
ಸ್ವಲ್ಪ ಸಮಯವಾದ ಮೇಲೆ ಅವನು ಅವಳನ್ನು ತಕ್ಕೊಳ್ಳುವದಕ್ಕೆ ತಿರಿಗಿ ಬರುವಾಗ ಸಿಂಹದ ಹೆಣವನ್ನು ನೋಡಲು ಪಕ್ಕಕ್ಕೆ ಹೋದನು. ಇಗೋ, ಸಿಂಹದ ಹೆಣದಲ್ಲಿ ಜೇನು ಹುಳಗಳೂ ಜೇನೂ ಇದ್ದವು. |
9
|
ಅದನ್ನು ಅವನು ತನ್ನ ಕೈಗಳಲ್ಲಿ ತೆಗೆದುಕೊಂಡು ತಿನ್ನುತ್ತಾ ತನ್ನ ತಂದೆ ತಾಯಿಗಳ ಬಳಿಗೆ ಹೋಗಿ ಅವರಿಗೂ ಕೊಟ್ಟನು; ಅವರೂ ತಿಂದರು. ಆದರೆ ಸಿಂಹದ ಹೆಣದಲ್ಲಿ ತಾನು ಜೇನು ತೆಗೆದುಕೊಂಡೆನೆಂದು ಅವರಿಗೆ ತಿಳಿಸಲಿಲ್ಲ. |
10
|
ಅವನ ತಂದೆಯು ಆ ಸ್ತ್ರೀ ಇರುವ ಸ್ಥಳಕ್ಕೆ ಬಂದಾಗ ಯೌವನಸ್ಥರು ಮಾಡುವ ಮರ್ಯಾದೆಯ ಹಾಗೆ, ಸಂಸೋನನು ಅಲ್ಲಿ ಔತಣಮಾಡಿಸಿದನು. |
11
|
ತರು ವಾಯ ಅವರು ಅವನನ್ನು ನೋಡಲಾಗಿ ಅವನ ಸಂಗಡ ಇರುವದಕ್ಕೆ ಮೂವತ್ತು ಮಂದಿ ಸಂಗಡಿಗರನ್ನು ಕೊಟ್ಟರು. |
12
|
ಅವರಿಗೆ ಸಂಸೋನನು--ನಾನು ನಿಮಗೆ ಒಂದು ಒಗಟನ್ನು ಹೇಳುವೆನು; ನೀವು ಅದನ್ನು ಔತಣದ ಈ ಏಳು ದಿವಸಗಳಲ್ಲಿ ಗ್ರಹಿಸಿಕೊಂಡು ನನಗೆ ಅದರ ಅರ್ಥವನ್ನು ನಿಜವಾಗಿ ಹೇಳಿದರೆ ನಾನು ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ದುಸ್ತು ವಸ್ತ್ರಗಳನ್ನೂ ಕೊಡುವೆನು. |
13
|
ಅದರ ಅರ್ಥವನ್ನು ನೀವು ನನಗೆ ಹೇಳದೆ ಹೋದರೆ ನೀವು ನನಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ದುಸ್ತುವಸ್ತ್ರ ಗಳನ್ನೂ ಕೊಡಬೇಕು ಅಂದನು. ಅವರು ಅವನಿಗೆನೀನು ನಿನ್ನ ಒಗಟನ್ನು ಹೇಳು, ಅದನ್ನು ಕೇಳೋಣ ಅಂದರು. |
14
|
ಆಗ ಅವನು ಅವರಿಗೆ--ತಿನ್ನುವಂಥದ್ದರಿಂದ ತಿನ್ನ ತಕ್ಕದ್ದು ಹೊರಟಿತು, ಬಲವಾದದ್ದರಿಂದ ಸಿಹಿಯು ಹೊರಟಿತು ಅಂದನು. |
15
|
ಒಗಟನ್ನು ಅವರು ಮೂರು ದಿವಸ ಬಿಡಿಸಲಾರದೆ ಹೋದರು. ಏಳನೇ ದಿವಸದಲ್ಲಿ ಆದದ್ದೇನಂದರೆ, ಅವರು ಸಂಸೋನನ ಹೆಂಡತಿಗೆ ನಾವು ನಿನ್ನನ್ನೂ ನಿನ್ನ ತಂದೆಯ ಮನೆಯನ್ನೂ ಬೆಂಕಿ ಯಿಂದ ಸುಟ್ಟು ಬಿಡದಹಾಗೆ ನೀನು ನಿನ್ನ ಗಂಡನ ಆ ಒಗಟನ್ನು ನಮಗೆ ತಿಳಿಸುವ ಹಾಗೆ ಅವನನ್ನು ಮರುಳುಗೊಳಿಸು. ನೀನು ನಮಗೆ ಉಂಟಾದದ್ದನ್ನು ಕಸಕೊಳ್ಳುವದಕ್ಕಲ್ಲವೇ ನಮ್ಮನ್ನು ಕರೆಸಿದಿ ಅಂದರು. |
16
|
ಆಗ ಸಂಸೋನನ ಹೆಂಡತಿ ಅವನ ಮುಂದೆ ಅತ್ತು--ನೀನು ನನ್ನನ್ನು ಪ್ರೀತಿಮಾಡದೆ ನನ್ನನ್ನು ಹಗೆ ಮಾಡುತ್ತೀ. ನೀನು ನನ್ನ ಜನರ ಮಕ್ಕಳಿಗೆ ಒಂದು ಒಗಟನ್ನು ಹೇಳಿ ಅದನ್ನು ನನಗೆ ತಿಳಿಸದೆ ಹೋದಿ ಅಂದಳು. ಅವನು ಅವಳಿಗೆ--ಇಗೋ, ನಾನು ನನ್ನ ತಂದೆ ತಾಯಿಗಳಿಗೆ ಅದನ್ನು ತಿಳಿಸಲಿಲ್ಲ; ನಿನಗೆ ತಿಳಿಸುವೆನೋ? ಅಂದನು. |
17
|
ಅವರಿಗೆ ಔತಣ ಇದ್ದ ಏಳು ದಿವಸಗಳಲ್ಲಿ ಅವನ ಮುಂದೆ ಅವಳು ಅತ್ತಳು. ಆದರೆ ಏಳನೇ ದಿನದಲ್ಲಿ ಅವಳು ಅವನನ್ನು ಬಹಳವಾಗಿ ಪೀಡಿಸಿದ್ದರಿಂದ ಅವಳಿಗೆ ತಿಳಿಸಿದನು. ಆಗ ಆಕೆ ತನ್ನ ಜನರ ಮಕ್ಕಳಿಗೆ ಆ ಒಗಟನ್ನು ತಿಳಿಸಿದಳು. |
18
|
ಆದದ ರಿಂದ ಏಳನೇ ದಿನದಲ್ಲಿ ಸೂರ್ಯನು ಮುಳುಗುವದ ಕ್ಕಿಂತ ಮುಂಚೆ ಆ ಊರಿನವರು ಅವನಿಗೆ--ಜೇನಿಗಿಂತ ಸಿಹಿಯಾದದ್ದೇನು? ಸಿಂಹಕ್ಕಿಂತ ಬಲವಾದದ್ದೇನು? ಎಂದು ಹೇಳಿದರು. ಅವನು ಅವರಿಗೆ--ನೀವು ನನ್ನ ಕಡಸಿನಿಂದ ಉಳದಿದ್ದರೆ ನನ್ನ ಒಗಟನ್ನು ಗ್ರಹಿಸಲಾರಿರಿ ಅಂದನು. |
19
|
ಕರ್ತನ ಆತ್ಮವು ಅವನ ಮೇಲೆ ಬಂದದ್ದ ರಿಂದ ಅವನು ಅಷ್ಕೆಲೋನಿಗೆ ಹೋಗಿ ಆ ಊರಿನಲ್ಲಿ ಮೂವತ್ತು ಜನರನ್ನು ವಧಿಸಿ ಸುಲುಕೊಂಡು ಒಗಟನ್ನು ತಿಳಿಸಿದವರಿಗೆ ದುಸ್ತುವಸ್ತ್ರಗಳನ್ನು ಕೊಟ್ಟನು. |
20
|
ಅವನು ಕೋಪಗೊಂಡು ತನ್ನ ತಂದೆಯ ಮನೆಗೆ ಹೊರಟು ಹೋದನು. ಆದರೆ ಸಂಸೋನನ ಹೆಂಡತಿಯು ಅವನ ಸ್ನೇಹಿತನಾಗಿದ್ದ ಒಬ್ಬನಿಗೆ ಕೊಡಲ್ಪಟ್ಟಳು. |
Judges 14:1 Kannada Language Bible Words basic statistical display
COMING SOON ...