ಯಾಜಕನು ಸ್ವಲ್ಪ ರಕ್ತವನ್ನು ಸಭೆಯ ಗುಡಾರ ದೊಳಗಿರುವ ಸುವಾಸನೆಯುಳ್ಳ ಧೂಪ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಮುಂದೆ ಹಚ್ಚಬೇಕು; ಅಲ್ಲದೆ ಆ ಹೋರಿಯ ಎಲ್ಲಾ ರಕ್ತವನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
ಇಡೀ ಹೋರಿಯನ್ನು ಪಾಳೆಯದ ಆಚೆಗಿರುವ ಶುದ್ಧವಾದ ಸ್ಥಳಕ್ಕೆ ಅಂದರೆ ಬೂದಿ ಚೆಲ್ಲುವ ಸ್ಥಳಕ್ಕೆ ತಂದು ಅದನ್ನು ಕಟ್ಟಿಗೆಯ ಮೇಲೆ ಬೆಂಕಿಯಿಂದ ಸುಡ ಬೇಕು. ಅದನ್ನು ಬೂದಿ ಚೆಲ್ಲುವ ಸ್ಥಳದಲ್ಲಿ ಸುಡಬೇಕು.
ಇದಲ್ಲದೆ ಅವನು ಸ್ವಲ್ಪ ರಕ್ತ ವನ್ನು ಸಭೆಯ ಗುಡಾರದೊಳಗಿರುವ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಎದುರಿನಲ್ಲಿ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಸಭೆಯ ಗುಡಾರದೊಳಗಿರುವ ದಹನ ಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
ಅವರು ಸಮಾಧಾನದ ಯಜ್ಞ ಸಮರ್ಪಣೆಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು. ಯಾಜ ಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು; ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
ಅವನು ಸಮಾಧಾನ ಯಜ್ಞ ಸಮರ್ಪಣೆಯ ಕೊಬ್ಬನ್ನು ತೆಗೆದಂತೆ ಅದರ ಎಲ್ಲಾ ಕೊಬ್ಬನ್ನು ತೆಗೆಯ ಬೇಕು; ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯನ್ನಾಗಿ ಸುಡಬೇಕು; ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತಮಾಡ ಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.