1
|
ಇದಲ್ಲದೆ ಐಶ್ವರ್ಯವಂತರು ತಮ್ಮ ಕಾಣಿಕೆಗಳನ್ನು ಬೊಕ್ಕಸದಲ್ಲಿ ಹಾಕುವದನ್ನು ಆತನು ಕಣ್ಣೆತ್ತಿ ನೋಡಿದನು. |
2
|
ಒಬ್ಬ ಬಡ ವಿಧವೆಯು ಸಹ ಎರಡು ಕಾಸುಗಳನ್ನು ಅದರಲ್ಲಿ ಹಾಕುವದನ್ನು ಆತನು ನೋಡಿದನು. |
3
|
ಆತನು--ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಈ ಬಡ ವಿಧವೆಯು ಅವರೆಲ್ಲರಿಗಿಂತಲೂ ಹೆಚ್ಚು ಹಾಕಿದ್ದಾಳೆ; |
4
|
ಯಾಕಂದರೆ ಇವರೆಲ್ಲರೂ ತಮಗಿರುವ ಸಮೃದ್ಧಿಯಲ್ಲಿ ದೇವರಿಗೆ ಕಾಣಿಕೆಗಳನ್ನು ಹಾಕಿದ್ದಾರೆ; ಆದರೆ ಈಕೆಯು ತನ್ನ ಬಡತನದಲ್ಲಿ ತನ್ನ ಜೀವನಕ್ಕೆ ಇದ್ದದ್ದನ್ನೆಲ್ಲಾ ಹಾಕಿದ್ದಾಳೆ ಅಂದನು. |
5
|
ತರುವಾಯ ಕೆಲವರು ದೇವಾಲಯದ ವಿಷಯ ವಾಗಿ ಅದು ಎಂಥಾ ಒಳ್ಳೇ ಕಲ್ಲುಗಳಿಂದಲೂ ದಾನಗ ಳಿಂದಲೂ ಅಲಂಕೃತವಾಗಿದೆ ಎಂದು ಮಾತನಾಡು ತ್ತಿರುವಾಗ ಆತನು-- |
6
|
ನೀವು ನೋಡುತ್ತಿರುವ ಇವುಗ ಳಾದರೋ ಕೆಡವಲ್ಪಟ್ಟು ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಬಿಡಲ್ಪಡದ ದಿವಸಗಳು ಬರುವವು ಅಂದನು. |
7
|
ಆಗ ಅವರು ಆತನಿಗೆ--ಬೋಧಕನೇ, ಇವುಗಳು ಯಾವಾಗ ಆಗುವವು? ಇವುಗಳು ಸಂಭವಿ ಸುವದಕ್ಕಿರುವಾಗ ಯಾವ ಸೂಚನೆ ಇರುವದು ಎಂದು ಕೇಳಿದರು. |
8
|
ಅದಕ್ಕೆ ಆತನು--ನೀವು ಮೋಸ ಹೋಗ ದಂತೆ ಎಚ್ಚರಿಕೆ ತಂದುಕೊಳ್ಳಿರಿ; ಯಾಕಂದರೆ ಅನೇಕರು ನನ್ನ ಹೆಸರಿನಲ್ಲಿ ಬಂದು--ನಾನೇ ಕ್ರಿಸ್ತನು ಎಂದು ಹೇಳುವರು; ಸಮಯವು ಸವಿಾಪಿಸಿದೆ, ಆದಕಾರಣ ನೀವು ಅವರ ಹಿಂದೆ ಹೋಗಬೇಡಿರಿ. |
9
|
ನೀವು ಯುದ್ಧಗಳ ಮತ್ತು ಕಲಹಗಳ ವಿಷಯವಾಗಿ ಕೇಳುವಾಗ ದಿಗಿಲುಪಡಬೇಡಿರಿ; ಯಾಕಂದರೆ ಇವುಗಳು ಮೊದಲು ಆಗುವದು ಅಗತ್ಯ; ಆದರೂ ಕೂಡಲೆ ಅಂತ್ಯ ಬರುವದಿಲ್ಲ ಅಂದನು. |
10
|
ಆತನು ಅವರಿಗೆ--ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳು ವವು. |
11
|
ಬೇರೆ ಬೇರೆ ಸ್ಥಳಗಳಲ್ಲಿ ಮಹಾಭೂಕಂಪಗಳೂ ಬರಗಳೂ ವ್ಯಾಧಿಗಳೂ ಇರುವವು; ಭಯಹುಟ್ಟಿ ಸುವ ದೃಶ್ಯಗಳೂ ಮಹಾಸೂಚನೆಗಳೂ ಆಕಾಶದಿಂದ ಆಗುವವು. |
12
|
ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು ಹಿಂಸಿಸಿ ಸಭಾಮಂದಿರ ಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು. |
13
|
ಇದು ಸಾಕ್ಷಿಗೋಸ್ಕರ ನಿಮಗೆ ಪರಿಣಮಿ ಸುವದು. |
14
|
ಹೀಗಿರುವದರಿಂದ ನೀವು ಏನು ಉತ್ತರ ಕೊಡಬೇಕೆಂದು ಮುಂದಾಗಿ ಯೋಚಿಸಬಾರದೆಂದು ನಿಮ್ಮ ಹೃದಯಗಳಲ್ಲಿ ನಿಶ್ಚಯಮಾಡಿಕೊಳ್ಳಿರಿ. |
15
|
ಯಾಕ ಂದರೆ ನಿಮ್ಮ ವಿರೋಧಿಗಳೆಲ್ಲರೂ ಪ್ರತಿವಾದ ಮಾಡ ದಂಥ ಇಲ್ಲವೆ ವಿರೋಧಿಸದಂಥ ಬಾಯನ್ನೂ ಜ್ಞಾನ ವನ್ನೂ ನಾನು ನಿಮಗೆ ಕೊಡುವೆನು. |
16
|
ಆದರೆ ತಂದೆ ತಾಯಿಗಳೂ ಸಹೋದರರೂ ಬಂಧುಗಳೂ ಸ್ನೇಹಿ ತರೂ ನಿಮ್ಮನ್ನು ಹಿಡಿದುಕೊಡುವರು; ನಿಮ್ಮಲ್ಲಿ ಕೆಲವ ರನ್ನು ಕೊಲ್ಲಿಸುವರು. |
17
|
ನನ್ನ ಹೆಸರಿನ ನಿಮಿತ್ತವಾಗಿ ನಿಮ್ಮನ್ನು ಎಲ್ಲರೂ ದ್ವೇಷಿಸುವರು. |
18
|
ಆದರೆ ನಿಮ್ಮ ತಲೆಯ ಒಂದು ಕೂದಲಾದರೂ ನಾಶವಾಗುವದಿಲ್ಲ. |
19
|
ನೀವು ನಿಮ್ಮ ಸಹನೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತೀರಿ. |
20
|
ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ. |
21
|
ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; ಅದರ ಮಧ್ಯದಲ್ಲಿ ರುವವರು ಹೊರಟುಹೋಗಲಿ; ಇದಲ್ಲದೆ ಹಳ್ಳಿಗಳಲ್ಲಿ ಇರುವವರು ಅವುಗಳಲ್ಲಿ ಪ್ರವೇಶಿಸದೆ ಇರಲಿ. |
22
|
ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ. |
23
|
ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆ ಕುಡಿಸುವ ವರಿಗೂ ಅಯ್ಯೊ! ಯಾಕಂದರೆ ದೇಶದಲ್ಲಿ ಮಹಾ ವಿಪತ್ತೂ ಈ ಜನರ ಮೇಲೆ ಕೋಪವೂ ಆಗ ಇರು ವದು. |
24
|
ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು. |
25
|
ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು. |
26
|
ಆಕಾಶದ ಶಕ್ತಿಗಳು ಕದಲಿಸಲ್ಪಡುವದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಸಂಭವಿಸುವದೋ ಎಂದು ಎದುರುನೋಡುತ್ತಾ ಪ್ರಾಣಹೋದಂತಾಗುವರು. |
27
|
ಆಗ ಮನುಷ್ಯಕು ಮಾರನು ಬಲದಿಂದಲೂ ಮಹಾ ಮಹಿಮೆ ಯಿಂದಲೂ ಕೂಡಿದವನಾಗಿ ಮೇಘದಲ್ಲಿ ಬರುವದನ್ನು ಅವರು ಕಾಣುವರು; |
28
|
ಆದರೆ ಈ ಸಂಗತಿಗಳು ಸಂಭವಿಸುವದಕ್ಕೆ ಪ್ರಾರಂಭಿಸಿದಾಗ ಮೇಲಕ್ಕೆ ನೋಡಿರಿ; ನಿಮ್ಮ ತಲೆಗಳನ್ನು ಎತ್ತಿರಿ; ಯಾಕಂದರೆ ನಿಮ್ಮ ವಿಮೋಚನೆಯು ಸವಿಾಪವಾಗಿದೆ ಅಂದನು. |
29
|
ಆತನು ಅವರಿಗೆ ಒಂದು ಸಾಮ್ಯಕೊಟ್ಟು ಹೇಳಿದ್ದೇ ನಂದರೆ--ಅಂಜೂರದ ಮರವನ್ನು ಮತ್ತು ಎಲ್ಲಾ ಮರಗಳನ್ನು ನೋಡಿರಿ; |
30
|
ಅವು ಚಿಗುರಿದಾಗ ನೀವು ನೋಡಿ ಬೇಸಿಗೆಯು ಹತ್ತಿರವಾಯಿತೆಂದು ನೀವೇ ನೀವಾಗಿ ತಿಳಿದುಕೊಳ್ಳುವಿರಿ. |
31
|
ಅದೇ ಪ್ರಕಾರ ಇವೆಲ್ಲವುಗಳು ಸಂಭವಿಸುವದನ್ನು ನೀವು ನೋಡುವಾಗ ದೇವರ ರಾಜ್ಯವು ಹತ್ತಿರವಾಯಿತೆಂದು ತಿಳಿದುಕೊಳ್ಳಿರಿ. |
32
|
ಎಲ್ಲವುಗಳು ನೆರವೇರುವ ವರೆಗೆ ಈ ಸಂತತಿಯು ಅಳಿದು ಹೋಗುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. |
33
|
ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ. |
34
|
ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ. |
35
|
ಯಾಕಂದರೆ ಅದು ಭೂಮಿಯ ಮೇಲೆ ವಾಸವಾಗಿರುವವರೆಲ್ಲರ ಮೇಲೆ ಉರ್ಲಿನಂತೆ ಬರುವದು. |
36
|
ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು. |
37
|
ಆತನು ಹಗಲಿನಲ್ಲಿ ದೇವಾಲಯದೊಳಗೆ ಬೋಧಿಸುತ್ತಾ ಇದ್ದು ರಾತ್ರಿಯಲ್ಲಿ ಹೊರಗೆ ಹೋಗಿ ಎಣ್ಣೇ ಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡ ದಲ್ಲಿ ವಾಸಿಸುತ್ತಿದ್ದನು. |
38
|
ಜನರೆಲ್ಲರೂ ಬೆಳಗಿನ ಜಾವದಲ್ಲಿ ಆತನ ಬಳಿಗೆ ದೇವಾಲಯದಲ್ಲಿ ಆತನ ಉಪದೇಶವನ್ನು ಕೇಳುವದಕ್ಕಾಗಿ ಬರುತ್ತಿದ್ದರು. |
Luke 21:31 Kannada Language Bible Words basic statistical display
COMING SOON ...