ಆಗ ಅವುಗಳಲ್ಲಿ ಸೀಮೋನನದಾಗಿದ್ದ ದೋಣಿಯನ್ನು ಆತನು ಹತ್ತಿದ ಮೇಲೆ ಅದನ್ನು ಭೂಮಿಯಿಂದ ಸ್ವಲ್ಪ ನೂಕ ಬೇಕೆಂದು ಅವನನ್ನು ಕೇಳಿಕೊಂಡನು. ಆತನು ಕೂತುಕೊಂಡು ದೋಣಿಯೊಳಗಿಂದ ಜನರಿಗೆ ಬೋಧಿಸಿದನು.
ಅದಕ್ಕೆ ಪ್ರತ್ಯುತ್ತರವಾಗಿ ಸೀಮೋನನು ಆತನಿಗೆ--ಗುರುವೇ, ನಾವು ರಾತ್ರಿ ಯೆಲ್ಲಾ ಪ್ರಯಾಸಪಟ್ಟೆವು. ಆದರೆ ಏನೂ ಸಿಕ್ಕಲಿಲ್ಲ; ಆದಾಗ್ಯೂ ನಿನ್ನ ಮಾತಿನಂತೆ ನಾನು ಬಲೆಯನ್ನು ಬೀಸುತ್ತೇನೆ ಎಂದು ಹೇಳಿದನು.
ತರುವಾಯ ಆತನು ಒಂದಾನೊಂದು ಪಟ್ಟಣ ದಲ್ಲಿದ್ದಾಗ ಇಗೋ, ತುಂಬಾ ಕುಷ್ಠವಿದ್ದ ಒಬ್ಬ ಮನುಷ್ಯನು ಯೇಸುವನ್ನು ನೋಡಿ ಬೋರಲ ಬಿದ್ದು ಆತನಿಗೆ--ಕರ್ತನೇ, ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಎಂದು ಆತನನ್ನು ಬೇಡಿಕೊಂಡನು.
ಆತನು ಅವನಿಗೆ--ನೀನು ಯಾರಿಗೂ ಹೇಳಬಾರದು; ಆದರೆ ಹೋಗಿ ಜನರಿಗೆ ಸಾಕ್ಷಿಯಾಗಿರುವಂತೆ ಯಾಜಕನಿಗೆ ನಿನ್ನನ್ನು ತೋರಿಸಿ ಕೊಂಡು ನಿನ್ನ ಶುದ್ಧಾಚಾರಕ್ಕಾಗಿ ಮೋಶೆಯು ಅಪ್ಪಣೆ ಕೊಟ್ಟಂತೆ ಅರ್ಪಿಸು ಎಂದು ಆಜ್ಞಾಪಿಸಿದನು.
ಇದಾದ ಮೇಲೆ ಒಂದಾನೊಂದು ದಿನ ಆತನು ಬೋಧಿಸುತ್ತಿದ್ದಾಗ ಗಲಿಲಾಯ ಯೂದಾಯ ಮತ್ತು ಯೆರೂಸಲೇಮಿನ ಪ್ರತಿಯೊಂದು ಊರಿನಿಂದ ಬಂದಿದ್ದ ಫರಿಸಾಯರೂ ನ್ಯಾಯಪ್ರಮಾಣದ ಪಂಡಿತರೂ ಅಲ್ಲಿ ಕೂತುಕೊಂಡಿದ್ದರು. ಕರ್ತನ ಶಕ್ತಿಯು ಅವರನ್ನು ಸ್ವಸ್ಥ ಮಾಡುವದಕ್ಕೆ ಸಿದ್ಧವಿತ್ತು.
ಆದರೆ ಅಲ್ಲಿದ್ದ ಜನಸಮೂಹದವರ ನಿಮಿತ್ತ ಅವರು ಅವನನ್ನು ಒಳಗೆ ತರುವ ಯಾವ ವಿಧಾನವನ್ನೂ ಕಾಣದೆ ಮನೆಯಮೇಲೆ ಹೋಗಿ ಹಂಚುಗಳನ್ನು ತೆಗೆದು ಅವನನ್ನು ಹಾಸಿಗೆಯೊಂದಿಗೆ ನಡುವೆ ಯೇಸುವಿನ ಮುಂದೆ ಇಳಿಸಿದರು.
ಆದರೆ ಮನುಷ್ಯಕುಮಾರನಿಗೆ ಪಾಪಗಳನ್ನು ಕ್ಷಮಿಸುವದಕ್ಕೆ ಭೂಮಿಯ ಮೇಲೆ ಅಧಿಕಾರವುಂಟೆಂದು ನೀವು ತಿಳಿಯಬೇಕು (ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ)--ಎದ್ದು ನಿನ್ನ ಹಾಸಿಗೆಯನ್ನು ತಕ್ಕೊಂಡು ನಿನ್ನ ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.
ಅವರು ಆತನಿಗೆ--ಯೋಹಾನನ ಶಿಷ್ಯರು ಪದೇ ಪದೇ ಉಪವಾಸವಿದ್ದು ಪ್ರಾರ್ಥನೆಗಳನ್ನು ಮಾಡುತ್ತಾರೆ; ಅದರಂತೆಯೇ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನವರು ಯಾಕೆ ತಿಂದು ಕುಡಿಯುತ್ತಾರೆ ಎಂದು ಹೇಳಿದರು.
ಆತನು ಅವರಿಗೆ ಒಂದು ಸಾಮ್ಯವನ್ನು ಸಹ ಹೇಳಿದ್ದೇನಂದರೆ--ಹಳೇ ವಸ್ತ್ರಕ್ಕೆ ಹೊಸ ಬಟ್ಟೆಯ ತುಂಡನ್ನು ಯಾರೂ ಹಚ್ಚುವದಿಲ್ಲ; ಹಚ್ಚಿದರೆ ಹೊಸದು ಹರಿದು ಹೋಗುವದು ಮತ್ತು ಹೊಸದರಿಂದ ತೆಗೆದ ತುಂಡು ಹಳೇದರೊಂದಿಗೆ ಸರಿಬೀಳುವದಿಲ್ಲ.
ಯಾರೂ ಹಳೇಬುದ್ದಲಿಗಳಲ್ಲಿ ಹೊಸದ್ರಾಕ್ಷಾರಸವನ್ನು ಹಾಕುವದಿಲ್ಲ; ಹಾಕಿದರೆ ಹೊಸದ್ರಾಕ್ಷಾರಸವು ಬುದ್ದಲಿಗಳನ್ನು ಒಡೆಯುವದ ರಿಂದ ಅದು ಚೆಲ್ಲಿ ಹೋಗುವದು ಮತ್ತು ಬುದ್ದಲಿಗಳು ಹಾಳಾಗಿ ಹೋಗುವವು.