ಸಬ್ಬತ್ ದಿನ ಬಂದಾಗ ಆತನು ಸಭಾಮಂದಿರದಲ್ಲಿ ಬೋಧಿಸುವದಕ್ಕೆ ಪ್ರಾರಂಭಿ ಸಿದನು; ಇದನ್ನು ಅನೇಕರು ಕೇಳುತ್ತಾ ಆಶ್ಚರ್ಯ ಪಟ್ಟು--ಇವುಗಳು ಈತನಿಗೆ ಎಲ್ಲಿಂದ ಬಂದಿದ್ದಾವು? ಮತ್ತು ಈತನ ಕೈಗಳಿಂದ ಇಂಥ ಮಹತ್ಕಾರ್ಯಗಳು ಸಹ ಆಗುವಂತೆ ಈತನಿಗೆ ಕೊಡಲ್ಪಟ್ಟ ಜ್ಞಾನವು ಎಂಥದ್ದು?
ಮರಿಯಳ ಮಗನೂ ಯಾಕೋಬ, ಯೋಸೆ ಯೂದ ಸೀಮೋನ ಇವರ ಸಹೋದರನೂ ಆದ ಈತನು ಬಡಗಿಯಲ್ಲವೇ? ಈತನ ಸಹೋದರಿ ಯರು ಇಲ್ಲಿಯೇ ನಮ್ಮ ಜೊತೆಯಲ್ಲಿ ಇದ್ದಾರಲ್ಲವೇ ಎಂದು ಹೇಳಿ ಆತನ ವಿಷಯದಲ್ಲಿ ಅಭ್ಯಂತರಪಟ್ಟರು.
ಯಾರಾದರೂ ನಿಮ್ಮನ್ನು ಅಂಗೀಕರಿಸದೆಯೂ ಇಲ್ಲವೆ ನಿಮ್ಮ ಮಾತನ್ನು ಕೇಳ ದೆಯೂ ಇದ್ದರೆ ನೀವು ಅಲ್ಲಿಂದ ಹೊರಡುವಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಢಿಸಿಬಿಡಿರಿ. ಮತ್ತು ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ
ಅರಸನಾದ ಹೆರೋದನು ಆತನ ವಿಷಯವಾಗಿ ಕೇಳಿದನು. (ಯಾಕಂದರೆ ಆತನ ಹೆಸರು ಎಲ್ಲಾ ಕಡೆಗೂ ಹರಡಿತು); ಮತ್ತು ಅವನು--ಬಾಪ್ತಿಸ್ಮ ಮಾಡಿಸುವ ಯೋಹಾನನು ಸತ್ತವರೊಳಗಿಂದ ಎದ್ದು ಬಂದಿದ್ದಾನೆ; ಆದದರಿಂದ ಮಹತ್ಕಾರ್ಯಗಳು ಅವನಲ್ಲಿ ತೋರಿ ಬರುತ್ತವೆ ಅಂದನು.
ಯಾಕಂ ದರೆ ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿ ಹೆರೋದನು ತಾನೇ ಯೋಹಾನನನ್ನು ಕರೇ ಕಳುಹಿಸಿ ಹಿಡಿದು ಕಟ್ಟಿ ಅವನನ್ನು ಸೆರೆಯಲ್ಲಿ ಹಾಕಿದ್ದನು; ಯಾಕಂದರೆ ಅವನು ಅವಳನ್ನು ವಿವಾಹ ಮಾಡಿಕೊಂಡಿದ್ದನು.
ಯಾಕಂದರೆ ಯೋಹಾನನು ನೀತಿವಂತನೂ ಪರಿಶುದ್ಧನೂ ಆದ ಮನುಷ್ಯನೆಂದು ಹೆರೋದನು ತಿಳಿದವನಾಗಿ ಅವನಿಗೆ ಭಯಪಟ್ಟು ಅವನನ್ನು ಕಾಪಾಡುತ್ತಿದ್ದನು; ಮತ್ತು ಅವನು ಹೇಳಿದ್ದನ್ನು ಕೇಳಿ ಆನೇಕ ಕಾರ್ಯಗಳನ್ನು ಮಾಡಿದ್ದಲ್ಲದೆ ಅವನು ಹೇಳುವದನ್ನು ಸಂತೋಷದಿಂದ ಕೇಳಿದನು.
ಆಗ ಆ ಹೆರೋದ್ಯಳ ಮಗಳು ಒಳಗೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಕೂತಿದ್ದವರನ್ನೂ ಮೆಚ್ಚಿಸಿದ್ದರಿಂದ ಅರಸನು ಆ ಹುಡುಗಿಗೆ--ನಿನಗೆ ಬೇಕಾದದ್ದನ್ನು ನನ್ನಿಂದ ಕೇಳಿಕೋ; ನಾನು ಅದನ್ನು ನಿನಗೆ ಕೊಡುತ್ತೇನೆ ಎಂದು ಹೇಳಿದನು.
ಆಗ ಆತನು ಅವರಿಗೆ--ನೀವು ಮಾತ್ರ ವಿಂಗಡವಾಗಿ ಅರಣ್ಯ ಸ್ಥಳಕ್ಕೆ ಬಂದು ಸ್ವಲ್ಪ ಸಮಯ ವಿಶ್ರಮಿಸಿಕೊಳ್ಳಿರಿ ಅಂದನು. ಯಾಕಂದರೆ ಅಲ್ಲಿ ಅನೇಕರು ಬರುತ್ತಾ ಹೋಗುತ್ತಾ ಇದ್ದದರಿಂದ ಊಟಮಾಡುವದಕ್ಕೂ ಅವರಿಗೆ ಸಮಯವಿರಲಿಲ್ಲ.
ಆತನು ಪ್ರತ್ಯುತ್ತರವಾಗಿ ಅವ ರಿಗೆ--ನೀವೇ ಅವರಿಗೆ ತಿನ್ನುವದಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು ಆತನಿಗೆ--ನಾವು ಹೋಗಿ ಎರಡು ನೂರು ಹಣದ (ಪೆನ್ನಿ: ಇಂಗ್ಲೀಷ್ಹಣ) ರೊಟಿಯನ್ನು ಕೊಂಡುಕೊಂಡು ಅವರಿಗೆ ತಿನ್ನುವದಕ್ಕೆ ಕೊಡೋಣವೋ ಅಂದರು.
ಆಗ ಆತನು ಐದು ರೊಟ್ಟಿ ಎರಡು ವಿಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಆ ರೊಟ್ಟಿಗಳನ್ನು ಮುರಿದು, ಅವರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಮತ್ತು ಎರಡು ವಿಾನುಗಳನ್ನು ಆತನು ಅವರೆಲ್ಲರಿಗೂ ಹಂಚಿದನು.
ಗಾಳಿಯು ಅವರಿಗೆ ಎದುರಾಗಿ ಇದ್ದದರಿಂದ ಅವರು ಕಷ್ಟಪಟ್ಟು ಹುಟ್ಟು ಹಾಕುತ್ತಿರು ವದನ್ನು ಆತನು ನೋಡಿ ಸುಮಾರು ರಾತ್ರಿಯ ನಾಲ್ಕನೇ ಜಾವದಲ್ಲಿ ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಬಂದು ಅವರನ್ನು ದಾಟಿ ಹೋಗಬೇಕೆಂದಿದ್ದನು.
ತರುವಾಯ ಆತನು ಯಾವ ಯಾವ ಹಳ್ಳಿಗಳಲ್ಲಿ, ಪಟ್ಟಣಗಳಲ್ಲಿ, ಸೀಮೆಯಲ್ಲಿ ಪ್ರವೇಶಿಸಿದನೋ ಅಲ್ಲೆಲ್ಲಾ ಅವರು ಅಸ್ವಸ್ಥ ವಾದವರನ್ನು ಬೀದಿಗಳಲ್ಲಿ ಮಲಗಿಸಿ ಆತನ ಉಡುಪಿನ ಅಂಚನ್ನಾದರೂ ಅವರು ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಯಾರಾರು ಆತನನ್ನು ಮುಟ್ಟಿದರೋ ಅವರು ಸ್ವಸ