1
|
ತರುವಾಯ ಯೇಸು ದೇವಾಲಯದಿಂದ ಹೊರಟುಹೋದ ಮೇಲೆ ಆತನ ಶಿಷ್ಯರು ಆ ದೇವಾಲಯದ ಕಟ್ಟಡಗಳನ್ನು ತೋರಿಸುವದಕ್ಕಾಗಿ ಆತನ ಬಳಿಗೆ ಬಂದರು. |
2
|
ಆಗ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ನೋಡುತ್ತೀರಲ್ಲಾ. ಎಲ್ಲಾ ಕೆಡವ ಲ್ಪಡದು ಕಲ್ಲಿನ ಮೇಲೆ ಕಲ್ಲು ಒಂದು ಇಲ್ಲಿ ಬಿಡಲ್ಪ ಡುವದಿಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳು ತ್ತೇನೆ ಅಂದನು. |
3
|
ಆತನು ಎಣ್ಣೇಮರಗಳ ಗುಡ್ಡದ ಮೇಲೆ ಕೂತುಕೊಂಡಾಗ ಶಿಷ್ಯರು ಪ್ರತ್ಯೇಕವಾಗಿ ಆತನ ಬಳಿಗೆ ಬಂದು--ಇವು ಯಾವಾಗ ಆಗುವವು? ಮತ್ತು ನಿನ್ನ ಬರೋಣಕ್ಕೂ ಲೋಕವು ಅಂತ್ಯವಾಗುವದಕ್ಕೂ ಸೂಚನೆ ಏನು? ನಮಗೆ ಹೇಳು ಎಂದು ಕೇಳಿದರು. |
4
|
ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಯಾವನಾ ದರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆ ಯಿಂದಿರ್ರಿ. |
5
|
ಯಾಕಂದರೆ ನನ್ನ ಹೆಸರಿನಲ್ಲಿ ಅನೇಕರು ಬಂದು--ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು. |
6
|
ಯುದ್ಧಗಳನ್ನೂ ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಿರಿ. ಕಳವಳಗೊಳ್ಳದಂತೆ ನೀವು ನೋಡಿಕೊಳ್ಳಿರಿ; ಯಾಕಂದರೆ ಇವೆಲ್ಲವುಗಳು ಸಂಭವಿಸುವದು ಅಗತ್ಯ; ಆದರೆ ಇದು ಇನ್ನೂ ಅಂತ್ಯವಲ್ಲ. |
7
|
ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಅಲ್ಲಲ್ಲಿ ಬರಗಳು, ಘೋರವ್ಯಾಧಿಗಳು ಮತ್ತು ಭೂಕಂಪಗಳು ಆಗುವವು. |
8
|
ಇವೆಲ್ಲವುಗಳು ಸಂಕಟಗಳ ಆರಂಭವು. |
9
|
ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು. |
10
|
ಆಗ ಅನೇಕರು ಅಭ್ಯಂತರಪಟ್ಟು ಒಬ್ಬರನ್ನೊಬ್ಬರು ಹಿಡುಕೊಡುವರು ಮತ್ತು ಒಬ್ಬರನ್ನೊಬ್ಬರು ಹಗೆಮಾಡು ವರು. |
11
|
ಇದಲ್ಲದೆ ಬಹುಮಂದಿ ಸುಳ್ಳು ಪ್ರವಾದಿಗಳು ಎದ್ದು ಅನೇಕರನ್ನು ಮೋಸಗೊಳಿ ಸುವರು. |
12
|
ದುಷ್ಟತನ ಹೆಚ್ಚಾಗುವದರಿಂದ ಬಹಳ ಜನರ ಪ್ರೀತಿಯು ತಣ್ಣಗಾಗುವದು. |
13
|
ಆದರೆ ಕಡೇವರೆಗೆ ತಾಳುವವನೇ ರಕ್ಷಿಸಲ್ಪಡುವನು. |
14
|
ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವದು; ತರುವಾಯ ಅಂತ್ಯಬರುವದು. |
15
|
ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ) |
16
|
ಯೂದಾಯದಲ್ಲಿ ದ್ದವರು ಬೆಟ್ಟಗಳಿಗೆ ಓಡಿ ಹೋಗಲಿ; |
17
|
ಮಾಳಿಗೆಯ ಮೇಲಿರುವವನು ತನ್ನ ಮನೆಯೊಳಗಿಂದ ಏನಾದರೂ ತಕ್ಕೊಳ್ಳುವದಕ್ಕಾಗಿ ಕೆಳಗೆ ಇಳಿಯದಿರಲಿ; |
18
|
ಇಲ್ಲವೆ ಹೊಲದಲ್ಲಿರುವವನು ತನ್ನ ಬಟ್ಟೆಗಳನ್ನು ತಕ್ಕೊಳ್ಳುವ ದಕ್ಕಾಗಿ ಹಿಂತಿರುಗದೆ ಇರಲಿ. |
19
|
ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆಕುಡಿಸುವ ಕೂಸುಗಳಿದ್ದ ವರಿಗೂ ಅಯ್ಯೋ! |
20
|
ಆದರೆ ನಿಮ್ಮ ಪಲಾಯನವು ಚಳಿಗಾಲದಲ್ಲಾಗಲೀ ಸಬ್ಬತ್ತಿನ ದಿನದಲ್ಲಾಗಲೀ ಆಗದಂತೆ ಪ್ರಾರ್ಥಿಸಿರಿ. |
21
|
ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ, ಆಮೇಲೆ ಎಂದಿಗೂ ಆಗುವದಿಲ್ಲ. |
22
|
ಆ ದಿವಸಗಳು ಕಡಿಮೆ ಮಾಡಲ್ಪಡದಿದ್ದರೆ ಯಾವನೂ ಉಳಿಯು ವದಿಲ್ಲ; ಆದರೆ ಆಯಲ್ಪಟ್ಟವರಿಗಾಗಿ ಆ ದಿವಸಗಳು ಕಡಿಮೆ ಮಾಡಲ್ಪಡುವವು. |
23
|
ಆಗ ಯಾರಾದರೂ ನಿಮಗೆ--ಇಗೋ, ಕ್ರಿಸ್ತನು ಇಲ್ಲಿದ್ದಾನೆ ಇಲ್ಲವೆ ಅಲ್ಲಿದ್ದಾನೆ ಎಂದು ಹೇಳಿದರೆ ಅದನ್ನು ನಂಬಬೇಡಿರಿ. |
24
|
ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು. |
25
|
ಇಗೋ, ಮುಂದಾಗಿ ನಾನು ನಿಮಗೆ ಹೇಳಿದ್ದೇನೆ. |
26
|
ಆದಕಾರಣ ಅವರು ನಿಮಗೆ--ಇಗೋ, ಆತನು ಅಡವಿಯಲ್ಲಿದ್ದಾನೆಂದು ಹೇಳಿದರೆ ಹೋಗಬೇಡಿರಿ; ಇಗೋ, ಆತನು ಗುಪ್ತವಾದ ಕೋಣೆಗಳಲ್ಲಿದ್ದಾನೆಂದು ಹೇಳಿದರೆ ಅದನ್ನು ನಂಬ ಬೇಡಿರಿ. |
27
|
ಯಾಕಂದರೆ ಮಿಂಚು ಪೂರ್ವದಿಂದ ಹೊರಟು ಬಂದು ಪಶ್ಚಿಮದವರೆಗೆ ಹೊಳೆಯು ವಂತೆಯೇ ಮನುಷ್ಯಕುಮಾರನ ಬರೋಣವೂ ಇರು ವದು. |
28
|
ಯಾಕಂದರೆ ಹೆಣ ಇದ್ದಲ್ಲಿ ಹದ್ದುಗಳು ಕೂಡಿಕೊಳ್ಳುವವು. |
29
|
ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕು ಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು. |
30
|
ಆಗ ಮನುಷ್ಯಕುಮಾರನ ಸೂಚನೆಯು ಆಕಾಶದಲ್ಲಿ ಕಾಣುವದು; ಭೂಮಿಯ ಎಲ್ಲಾ ಗೋತ್ರದವರು ಗೋಳಾಡುವರು. ಮತ್ತು ಮನುಷ್ಯಕುಮಾರನು ಆಕಾಶದ ಮೇಘಗಳಲ್ಲಿ ಶಕ್ತಿಯೊಡನೆಯೂ ಮಹಾ ಪ್ರಭಾವದೊಂದಿಗೂ ಬರುವದನ್ನು ಅವರು ನೋಡು ವರು. |
31
|
ತರುವಾಯ ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು; ಆಗ ಅವರು ಆತನಿಂದ ಆಯಲ್ಪಟ್ಟವರನ್ನು ನಾಲ್ಕು ದಿಕ್ಕುಗಳಿಂದ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು. |
32
|
ಈಗ ಅಂಜೂರ ಮರದ ಸಾಮ್ಯದಿಂದ ಕಲಿ ಯಿರಿ; ಆದರ ಕೊಂಬೆಯು ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿ ತೆಂದು ನೀವು ತಿಳಿದುಕೊಳ್ಳುವಿರಿ; |
33
|
ಅದರಂತೆಯೇ ನೀವು ಇವುಗಳನ್ನೆಲ್ಲಾ ನೋಡುವಾಗ ಅದು ಸವಿಾಪ ದಲ್ಲಿ ಬಾಗಲುಗಳಲ್ಲಿಯೇ ಇದೆಯೆಂದು ತಿಳು ಕೊಳ್ಳಿರಿ. |
34
|
ಇವೆಲ್ಲವುಗಳು ನೇರವೇರುವ ವರೆಗೆ ಈ ಸಂತತಿಯು ಅಳಿದುಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. |
35
|
ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ. |
36
|
ಆದರೆ ಆ ದಿನವಾಗಲೀ ಗಳಿಗೆಯಾಗಲೀ ನನ್ನ ತಂದೆಗೆ ಮಾತ್ರವೇ ಹೊರತು ಮತ್ತಾರಿಗೂ ಪರಲೋಕದ ದೂತರಿಗೂ ತಿಳಿಯದು. |
37
|
ಆದರೆ ನೋಹನ ದಿವಸಗಳು ಇದ್ದಂತೆಯೇ ಮನುಷ್ಯ ಕುಮಾರನ ಬರೋಣವೂ ಇರುವದು. |
38
|
ನೋಹನು ನಾವೆಯಲ್ಲಿ ಸೇರಿದ ದಿವಸದ ವರೆಗೆ ಪ್ರಳಯವು ಬರುವದಕ್ಕಿಂತ ಮುಂಚಿನ ಆ ದಿವಸಗಳಲ್ಲಿ ಜನರು ತಿನ್ನುತ್ತಾ ಕುಡಿಯುತ್ತಾ ಮದುವೆ ಮಾಡಿಕೊಳ್ಳುತ್ತಾ ಮದುವೆ ಮಾಡಿಕೊಡುತ್ತಾ ಇದ್ದರು. |
39
|
ಪ್ರಳಯವು ಬಂದು ಅವರನ್ನು ಬಡುಕೊಂಡು ಹೊಗುವವರೆಗೂ ಅವರಿಗೆ ತಿಳಿದಿರಲಿಲ್ಲ; ಹಾಗೆಯೇ ಮನುಷ್ಯ ಕುಮಾರನ ಬರೋಣವೂ ಇರುವದು. |
40
|
ಆಗ ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆಯಲ್ಪಡು ವನು; ಮತ್ತೊಬ್ಬನು ಬಿಡಲ್ಪಡುವನು. |
41
|
ಇಬ್ಬರು ಸ್ತ್ರೀಯರು ಬೀಸುತ್ತಿರುವಾಗ ಒಬ್ಬಳು ತೆಗೆಯಲ್ಪಡು ವಳು, ಮತ್ತೊಬ್ಬಳು ಬಿಡಲ್ಪಡುವಳು. |
42
|
ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರು ತ್ತಾನೋ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರ ವಾಗಿರ್ರಿ. |
43
|
ಕಳ್ಳನು ಯಾವ ಗಳಿಗೆಯಲ್ಲಿ ಬರುತ್ತಾ ನೆಂದು ಮನೇ ಯಜಮಾನನು ತಿಳಿದಿದ್ದರೆ ಅವನು ತನ್ನ ಮನೆಯು ಕನ್ನಾಕೊರೆಯದಂತೆ ಕಾಯುತ್ತಿದ್ದ ನೆಂದು ನೀವು ತಿಳಿದುಕೊಳ್ಳಿರಿ. |
44
|
ಆದಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ. |
45
|
ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲ ದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ಅಧಿಕಾರಿಯೂ ನಂಬಿಗಸ್ತನೂ ಜ್ಞಾನಿಯೂ ಆದ ಸೇವಕನು ಯಾರು? |
46
|
ಯಜಮಾನನು ಬಂದು ಯಾವ ಸೇವಕನು ಹಾಗೆ ಮಾಡುವದನ್ನು ನೋಡುವನೋ ಆ ಸೇವಕನೇ ಧನ್ಯನು. |
47
|
ಅವನನ್ನು ಆತನು ತನ್ನ ಎಲ್ಲಾ ಆಸ್ತಿಯ ಮೇಲೆ ನೇಮಿಸುವನೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. |
48
|
ಆದರೆ ಆ ಕೆಟ್ಟ ಸೇವಕನು ತನ್ನ ಹೃದಯದಲ್ಲಿ--ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ ಎಂದು ಅಂದುಕೊಂಡು |
49
|
ತನ್ನ ಜೊತೇ ಸೇವಕರನ್ನು ಹೊಡೆಯುತ್ತಾ ಕುಡುಕರ ಸಂಗಡ ತಿನ್ನುವದಕ್ಕೂ ಕುಡಿಯುವದಕ್ಕೂ ಪ್ರಾರಂಭಿಸು ವದಾದರೆ |
50
|
ಅವನು ನಿರೀಕ್ಷಿಸದೆ ಇರುವ ದಿನದಲ್ಲಿ ಇಲ್ಲವೆ ನೆನಸದ ಗಳಿಗೆಯಲ್ಲಿ ಆ ಸೇವಕನ ಯಜಮಾ ನನು ಬಂದು |
51
|
ಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು. |
Matthew 24:25 Kannada Language Bible Words basic statistical display
COMING SOON ...