1
|
ಕರ್ತನು ಹೇಳುವದನ್ನು ಈಗ ಕೇಳಿರಿ--ಎದ್ದೇಳು,ಬೆಟ್ಟಗಳ ಮುಂದೆ ವ್ಯಾಜ್ಯವಾಡು; ಗುಡ್ಡಗಳು ನಿನ್ನ ಶಬ್ದವನ್ನು ಕೇಳಲಿ. |
2
|
ಓ ಬೆಟ್ಟಗಳೇ, ಭೂಮಿಯ ಬಲವಾದ ಅಸ್ತಿವಾರಗಳಾದ ಬಂಡೆಗಳೇ, ಕರ್ತನ ವ್ಯಾಜ್ಯವನ್ನು ಕೇಳಿರಿ; ಕರ್ತನಿಗೆ ತನ್ನ ಜನರ ಸಂಗಡ ವ್ಯಾಜ್ಯ ಉಂಟು, ಇಸ್ರಾಯೇಲಿನ ಸಂಗಡ ಆತನು ತರ್ಕಿಸುತ್ತಾನೆ. |
3
|
ನನ್ನ ಜನರೇ, ನಾನು ನಿನಗೆ ಏನು ಮಾಡಿದ್ದೇನೆ? ಯಾವದರಿಂದ ನಿನಗೆ ಬೇಸರ ಮಾಡಿದ್ದೇನೆ? ನನಗೆ ವಿರೋಧವಾಗಿ ಸಾಕ್ಷಿಕೊಡು. |
4
|
ನಾನು ಐಗುಪ್ತದೇಶದೊಳಗಿಂದ ನಿನ್ನನ್ನು ಮೇಲೆ ಬರಮಾಡಿ, ದಾಸರ ಮನೆಯೊಳಗಿಂದ ನಿನ್ನನ್ನು ವಿಮೋ ಚಿಸಿ, ಮೋಶೆಯನ್ನೂ ಆರೋನನನ್ನೂ ಮಿರಿಯಾಮ ಳನ್ನೂ ನಿನ್ನ ಮುಂದೆ ಕಳುಹಿಸಿದೆನು. |
5
|
ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿ ದ್ದನ್ನೂ ಬೆಯೋರನ ಮಗನಾದ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲು ಗೊಂಡು ಗಿಲ್ಗಾಲಿನ ವರೆಗೂ ಆದದ್ದನ್ನೂ ಈಗ ಜ್ಞಾಪಕ ಮಾಡಿಕೊಳ್ಳಿರಿ. ಆಗ ಕರ್ತನ ನೀತಿಯನ್ನು ತಿಳುಕೊಳ್ಳು ವಿರಿ. |
6
|
ನಾನು ಯಾವದರೊಂದಿಗೆ ಕರ್ತನ ಮುಂದೆ ಬರಲಿ? ಯಾವದರೊಂದಿಗೆ ಉನ್ನತವಾದ ದೇವರ ಮುಂದೆ ಅಡ್ಡಬೀಳಲಿ? ದಹನಬಲಿಗಳ ಸಂಗಡವೂ ಒಂದು ವರುಷದ ಕರುಗಳ ಸಂಗಡವೂ ಆತನ ಮುಂದೆ ಬರಲೋ? |
7
|
ಸಾವಿರ ಟಗರುಗಳಿಗಾದರೂ ಎಣ್ಣೆಯ ಹತ್ತು ಸಾವಿರ ನದಿಗಳಿಗಾದರೂ ಕರ್ತನು ಮೆಚ್ಚು ವನೋ? ನನ್ನ ದ್ರೋಹಕ್ಕಾಗಿ ನನ್ನ ಚೊಚ್ಚಲ ಮಗ ನನ್ನೂ ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲ ವನ್ನೂ ಕೊಡಲೋ? |
8
|
ಮನುಷ್ಯನೇ, ಉತ್ತಮವಾದ ದ್ದನ್ನು ನಿನಗೆ ಆತನು ತಿಳಿಸಿದ್ದಾನೆ; ಹೌದು, ನ್ಯಾಯ ವನ್ನು ಮಾಡುವದೂ ಕರುಣೆಯನ್ನು ಪ್ರೀತಿಮಾಡು ವದೂ ನಿನ್ನ ದೇವರ ಸಂಗಡ ವಿನಯವಾಗಿ ನಡ ಕೊಳ್ಳುವದೂ ಇದನ್ನೇ ಹೊರತು ಕರ್ತನು ಇನ್ನೇನು ನಿನ್ನಿಂದ ಕೇಳುತ್ತಾನೆ. |
9
|
ಕರ್ತನ ಸ್ವರವು ಪಟ್ಟಣಕ್ಕೆ ಕೂಗುತ್ತದೆ, ಮತ್ತು ಬುದ್ಧಿವಂತನು ನಿನ್ನ ಹೆಸರನ್ನು ನೋಡುವನು; ಬೆತ್ತ ವನ್ನೂ ಅದನ್ನು ನೇಮಿಸಿದವನನ್ನೂ ಕೇಳಿರಿ. |
10
|
ದುಷ್ಟರ ಮನೆಯಲ್ಲಿ ದುಷ್ಟತ್ವದ ಬೊಕ್ಕಸಗಳೂ ಅಸಹ್ಯವಾದಂಥ ಕಡಿಮೆಯಾದ ಅಳತೆಯೂ ಉಂಟೋ? |
11
|
ನಾನು ದುಷ್ಟತ್ವದ ತ್ರಾಸುಗಳುಳ್ಳವರನ್ನು ಮೋಸವಾದ ಕಲ್ಲು ಗಳ ಚೀಲವುಳ್ಳವರನ್ನು ನಿರ್ಮಲರೆಂದೆಣಿಸುವೆನೋ? |
12
|
ಅದರ ಐಶ್ವರ್ಯವಂತರು ಬಲಾತ್ಕಾರದಿಂದ ತುಂಬಿ ದ್ದಾರೆ, ಅದರ ನಿವಾಸಿಗಳು ಸುಳ್ಳುಗಳನ್ನು ಹೇಳುವವ ರಾಗಿದ್ದಾರೆ; ಅವರ ನಾಲಿಗೆ ಅವರ ಬಾಯಿಯಲ್ಲಿ ಕಪಟವುಳ್ಳದ್ದೇ. |
13
|
ಆದದರಿಂದ ನಾನು ಸಹ ನಿನ್ನನ್ನು ಹೊಡೆದು ನಿನಗೆ ರೋಗವನ್ನು ಬರಮಾಡುವೆನು; ನಿನ್ನ ಪಾಪಗಳ ನಿಮಿತ್ತ ನಿನ್ನನ್ನು ಹಾಳುಮಾಡುವೆನು. |
14
|
ನೀನು ಉಂಡು ತೃಪ್ತಿಯಾಗದೆ ಇರುವಿ; ನಿನ್ನೊಳಗೆ ನಿನ್ನ ಬೀಳ್ವಿಕೆಯು ಇರುವದು; ನೀನು ಹಿಡಿದು ತಪ್ಪಿಸದೆ ಇರುವಿ; ನೀನು ತಪ್ಪಿಸುವಂಥದ್ದನ್ನು ನಾನು ಕತ್ತಿಗೆ ಒಪ್ಪಿಸುವೆನು. |
15
|
ನೀನು ಬೀಜ ಬಿತ್ತಿ ಕೊಯ್ಯದೆ ಇರುವಿ; ಇಪ್ಪೆಗಳನ್ನು ತುಳಿದು ಎಣ್ಣೆ ಹಚ್ಚಿಕೊಳ್ಳದೆ ಇರುವಿ; ದ್ರಾಕ್ಷಾರಸ ಮಾಡಿ ಕುಡಿಯದೆ ಇರುವಿ. |
16
|
ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ. |
Micah 6:1 Kannada Language Bible Words basic statistical display
COMING SOON ...