ಆದರೆ ನಾವು ಗೋಡೆಯನ್ನು ಕಟ್ಟುವವರ್ತಮಾನ ಸನ್ಬಲ್ಲಟನು ಕೇಳಿದಾಗ ಏನಾ ಯಿತಂದರೆ, ಅವನು ಕೋಪಗೊಂಡು ಬಹಳ ಕೋಪ ದಿಂದ ರೇಗುತ್ತಾ ಯೆಹೂದ್ಯರಿಗೆ ಗೇಲಿ ಮಾಡಿ ತನ್ನ ಸಹೋದರರ ಮುಂದೆಯೂ ಸಮಾರ್ಯದಲ್ಲಿರುವ ಸೈನ್ಯದ ಮುಂದೆಯೂ--
ಈ ಬಲಹೀನರಾದ ಯೆಹೂ ದ್ಯರು ಮಾಡುವದೇನು? ತಮ್ಮನ್ನು ಬಲಪಡಿಸು ವರೋ? ಬಲಿಯನ್ನು ಅರ್ಪಿಸುವರೋ? ಒಂದೇ ದಿವಸದಲ್ಲಿ ತೀರಿಸುವರೋ? ಮಣ್ಣು ದಿಬ್ಬೆಗಳಲ್ಲಿರುವ ಸುಡಲ್ಪಟ್ಟ ಕಲ್ಲುಗಳನ್ನು ಉಜ್ಜೀವಿಸ ಮಾಡುವರೋ ಅಂದನು.
ನಮ್ಮ ದೇವರೇ, ಕೇಳು; ಯಾಕಂದರೆ ನಾವು ತಿರಸ್ಕರಿಸಲ್ಪಟ್ಟವರಾಗಿದ್ದೇವೆ. ನೀನು ಅವರ ನಿಂದೆಯನ್ನು ಅವರ ತಲೆಗಳ ಮೇಲೆ ತಿರುಗುವಂತೆ ಮಾಡಿ ಸೆರೆಯ ದೇಶದಲ್ಲಿ ಅವರನ್ನು ಕೊಳ್ಳೆಯಾಗಿ ಒಪ್ಪಿಸು.
ನಾನು ನೋಡಿದ ತರುವಾಯ ಎದ್ದು ಶ್ರೇಷ್ಠರಿಗೂ ಅಧಿಕಾರ ಸ್ಥರಿಗೂ ಇತರ ಜನರಿಗೂ--ನೀವು ಅವರಿಗೋಸ್ಕರ ಭಯಪಡಬೇಡಿರಿ; ದೊಡ್ಡವನಾಗಿಯೂ ಭಯಂಕರ ನಾಗಿಯೂ ಇರುವ ಕರ್ತನನ್ನು ಜ್ಞಾಪಕಮಾಡಿ ಕೊಂಡು ನಿಮ್ಮ ಸಹೋದರರಿಗೋಸ್ಕರ, ಕುಮಾರ, ಕುಮಾರ್ತೆಯರಿಗೋಸ್ಕರ, ಹೆಂಡತಿಯರಿಗೋಸ್ಕರ, ನಿಮ್ಮ ಮನೆಗಳಿಗೋಸ್ಕರ ಯುದ್ಧಮಾಡಿರಿ ಅಂದೆನು.
ಆ ವರ್ತಮಾನ ನಮಗೆ ತಿಳಿಯಿತೆಂದೂ ದೇವರು ತಮ್ಮ ಆಲೋಚನೆಯನ್ನು ವ್ಯರ್ಥಮಾಡಿದನೆಂದೂ ನಮ್ಮ ಶತ್ರುಗಳು ಕೇಳಿದಾಗ ನಾವೆಲ್ಲರೂ ಗೋಡೆಗೆ ತಿರುಗಿ ಬಂದೆವು; ಪ್ರತಿ ಮನುಷ್ಯನು ತನ್ನ ಕೆಲಸಕ್ಕೆ ಸೇರಿದನು.
ಅಂದಿನಿಂದ ಏನಾಯಿತಂದರೆ ನನ್ನ ಸೇವಕರಲ್ಲಿ ಅರ್ಧಜನರು ಕೆಲಸವನ್ನು ನಡಿಸಿದರು; ಮಿಕ್ಕಾದ ಅರ್ಧ ಜನರು ಈಟಿಗಳನ್ನೂ ಗುರಾಣಿಗಳನ್ನೂ ಬಿಲ್ಲುಗಳನ್ನೂ ಕವಚಗಳನ್ನೂ ಧರಿಸಿದರು. ಪ್ರಧಾನರು ಯೆಹೂದ ಮನೆಯವರ ಹಿಂದೆ ನಿಂತರು.
ಇದಲ್ಲದೆ ಆ ಕಾಲದಲ್ಲಿ ನಾನು ಜನರಿಗೆರಾತ್ರಿಯಲ್ಲಿ ಅವರು ನಮಗೆ ಕಾವಲಿಯಾಗಿರುವ ಹಾಗೆಯೂ ಹಗಲಲ್ಲಿ ಕೆಲಸಮಾಡುವ ಹಾಗೆಯೂ ಪ್ರತಿ ಮನುಷ್ಯನು ತನ್ನ ಸೇವಕನ ಸಂಗಡ ಯೆರೂಸಲೇ ಮಿನೊಳಗೆ ರಾತ್ರಿಯಲ್ಲಿ ಕಾವಲಾಗಿರಲಿ.
ಹೀಗೆಯೇ ನಾನಾದರೂ ನನ್ನ ಸಹೋದರರಾದರೂ ನನ್ನ ಸೇವಕ ರಾದರೂ ನನ್ನನ್ನು ಹಿಂಬಾಲಿಸಿದ ಕಾವಲುಗಾರರಾ ದರೂ ನಮ್ಮಲ್ಲಿ ಯಾವನಾದರೂ ತನ್ನ ವಸ್ತ್ರಗಳನ್ನು ಒಗೆಯುವದಕ್ಕೆ ಹೊರತು ಅವುಗಳನ್ನು ತೆಗೆದು ಹಾಕಲಿಲ್ಲ.