ಈ ಕೆಟ್ಟ ಸ್ಥಳಕ್ಕೆ ನಮ್ಮನ್ನು ತರುವದಕ್ಕೆ ಯಾಕೆ ನಮ್ಮನ್ನು ಐಗುಪ್ತ ದೇಶದೊಳ ಗಿಂದ ಕರಕೊಂಡು ಬಂದಿರಿ? ಈ ಸ್ಥಳದಲ್ಲಿ ಬೀಜ ವಾದರೂ ಅಂಜೂರವಾದರೂ ದ್ರಾಕ್ಷೇತೋಟವಾ ದರೂ ದಾಳಿಂಬರ ಹಣ್ಣಾದರೂ ಇಲ್ಲ; ಕುಡಿಯುವದಕ್ಕೆ ನೀರು ಸಹ ಇಲ್ಲ ಅಂದರು.
ಕೋಲನ್ನು ತಕ್ಕೊಂಡು ನೀನು ನಿನ್ನ ಸಹೋದರನಾದ ಆರೋನನು ಸಭೆಯನ್ನು ಕೂಡಿಸಿ ಕೊಂಡು ಅವರ ಕಣ್ಣುಗಳ ಮುಂದೆ ಬಂಡೆಯ ಸಂಗಡ ಮಾತನಾಡಿರಿ; ಅದು ತನ್ನ ನೀರನ್ನು ಕೊಡುವದು; ನೀನು ಅವರಿಗೋಸ್ಕರ ಬಂಡೆಯೊಳಗಿಂದ ನೀರನ್ನು ಹೊರಗೆ ತರುವಿ; ಸಭೆಗೂ ಅವರ ಪಶುಗಳಿಗೂ ನೀನು ಕುಡಿಯಲು ಕೊಡುವಿ ಎಂದು ಹೇಳಿದನು.
ಆಗ ಕರ್ತನು ಮೋಶೆ ಆರೋನನ ಸಂಗಡ ಮಾತನಾಡಿ--ನೀವು ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧಮಾಡುವದಕ್ಕೆ ನನ್ನಲ್ಲಿ ವಿಶ್ವಾಸಿ ಸದೆ ಇದ್ದ ಕಾರಣ ನಾನು ಅವರಿಗೆ ಕೊಟ್ಟ ದೇಶದಲ್ಲಿ ನೀವು ಸಮೂಹವನ್ನು ಸೇರಿಸುವದಿಲ್ಲ ಅಂದನು.
ಇದಲ್ಲದೆ ಮೋಶೆಯು ಕಾದೇಶಿನಿಂದ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--ನಿನ್ನ ಸಹೋದರನಾದ ಇಸ್ರಾಯೇ ಲನು ಹೇಳುವದೇನಂದರೆ--ನಮಗೆ ಉಂಟಾದ ಸಕಲ ಆಯಾಸವನ್ನು ನೀನು ಅರಿತಿದ್ದೀ.
ಆದಕಾರಣ ನಾವು ಕರ್ತನಿಗೆ ಕೂಗಿದೆವು; ಆತನು ನಮ್ಮ ಧ್ವನಿಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ತಂದನು; ಇಗೋ, ನಾವು ನಿನ್ನ ಮೇರೆಯ ಕಡೇ ಊರಾದ ಕಾದೇಶಿನ ಲ್ಲಿದ್ದೇವೆ.
ನಮ್ಮನ್ನು ನಿನ್ನ ದೇಶದಿಂದ ದಾಟಿ ಹೋಗ ಗೊಡಿಸು; ನಾವು ಹೊಲವನ್ನಾದರೂ ದ್ರಾಕ್ಷೇತೋಟ ವನ್ನಾದರೂ ದಾಟಿಹೋಗುವದಿಲ್ಲ, ಬಾವಿಗಳ ನೀರನ್ನೂ ಕುಡಿಯುವದಿಲ್ಲ, ರಾಜ ಮಾರ್ಗದಲ್ಲಿ ಮಾತ್ರ ಹೋಗುತ್ತೇವೆ. ನಾವು ನಿನ್ನ ಮೇರೆಯನ್ನು ದಾಟುವ ವರೆಗೆ ಬಲಗಡೆಗಾದರೂ ಎಡಗಡೆಗಾದರೂ ತಿರುಗುವದಿಲ್ಲ.
ಆಗ ಇಸ್ರಾಯೇಲ್ ಮಕ್ಕಳು ಅವನಿಗೆ ಹೇಳಿದ್ದೇ ನಂದರೆ--ನಾವು ರಾಜ ಮಾರ್ಗದಲ್ಲಿ ಹೋಗುತ್ತೇವೆ; ನಾನಾಗಲಿ ನನ್ನ ಪಶುಗಳಾಗಲಿ ನಿನ್ನ ನೀರನ್ನು ಕುಡಿದರೆ ಅದರ ಕ್ರಯವನ್ನು ಕೊಡುತ್ತೇನೆ; ನನ್ನ ಕಾಲ್ನಡೆಯಾಗಿ ದಾಟಿಹೋಗುವದೇ ಹೊರತು ಮತ್ತೇನು ಮಾಡು ವದಿಲ್ಲ.
ಆರೋನನು ತನ್ನ ಜನರ ಸಂಗಡ ಕೂಡಿಸಲ್ಪಡುವನು; ನೀವು ಮೆರೀಬಾದ ನೀರಿನ ಹತ್ತಿರ ನನ್ನ ಮಾತಿಗೆ ತಿರುಗಿ ಬಿದ್ದದರಿಂದ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ದೇಶಕ್ಕೆ ಅವನು ಪ್ರವೇಶಿಸುವದಿಲ್ಲ.
ಆಗ ಮೋಶೆಯು ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಿದನು; ಆಗ ಆರೋನನು ಅಲ್ಲೆ ಬೆಟ್ಟದ ತುದಿಯಲ್ಲಿ ಸತ್ತನು. ಮೋಶೆಯೂ ಎಲ್ಲಾಜಾರನೂ ಬೆಟ್ಟದಿಂದ ಇಳಿದು ಬಂದರು.