ಹೀಗೆ ಅವರು ಮೊದಲನೇ ತಿಂಗಳಿನ ಹದಿನಾಲ್ಕನೆಯ ದಿವಸದ ಸಾಯಂಕಾಲ ಸೀನಾಯಿ ಅರಣ್ಯದಲ್ಲಿ ಪಸ್ಕವನ್ನು ಆಚರಿಸಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಇಸ್ರಾಯೇಲ್ ಮಕ್ಕಳು ಮಾಡಿದರು.
ಆ ಮನುಷ್ಯರು ಅವನ ಸಂಗಡ ಮಾತನಾಡಿ--ನಾವು ಸತ್ತ ಮನುಷ್ಯನ ದೇಹವನ್ನು ಮುಟ್ಟಿದ್ದರಿಂದ ಅಶುದ್ಧರಾದೆವು; ಆದದರಿಂದ ನಾವು ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಕರ್ತನ ಅರ್ಪಣೆ ಯನ್ನು ಅದರ ಸಮಯದಲ್ಲಿ ಅರ್ಪಿಸದ ಹಾಗೆ ನಮಗೆ ಯಾಕೆ ಅಡ್ಡಿಯಾಗಬೇಕು ಅಂದರು.
ಆದರೆ ಶುದ್ಧನಾದ ಮನುಷ್ಯನೂ ಪ್ರಯಾಣಮಾಡದವನೂ ಪಸ್ಕವನ್ನು ಆಚರಿಸುವದಕ್ಕೆ ತಪ್ಪಿದರೆ ಅವನನ್ನು ಅವನ ಜನರೊಳಗಿಂದ ತೆಗೆದುಹಾಕಬೇಕು; ಅವನು ಕರ್ತನ ಅರ್ಪಣೆಯನ್ನು ಅದರ ಸಮಯದಲ್ಲಿ ತಾರದಿದ್ದ ಕಾರಣ ಆ ಮನುಷ್ಯನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.
ಪರದೇಶಿಯಾದವನು ನಿಮ್ಮ ಸಂಗಡ ವಾಸಮಾಡಿ ಕರ್ತನಿಗೆ ಹಬ್ಬವನ್ನು ಆಚರಿಸಿದರೆ ಪಸ್ಕದ ಆಜ್ಞಾವಿಧಿಯ ಪ್ರಕಾರವಾಗಿಯೂ ನ್ಯಾಯದ ಪ್ರಕಾರವಾಗಿಯೂ ಮಾಡಬೇಕು; ನಿಮಗೂ ಪರದೇಶಸ್ತನಿಗೂ ಒಂದೇ ಕಟ್ಟಳೆ ಇರಬೇಕು ಎಂದು ಹೇಳಿದನು.
ಕರ್ತನ ಆಜ್ಞೆಯ ಪ್ರಕಾರ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡಿ ದರು. ಕರ್ತನ ಆಜ್ಞೆಯ ಪ್ರಕಾರ ಗುಡಾರಗಳನ್ನು ಹಾಕಿದರು. ಮೇಘವು ಗುಡಾರದ ಮೇಲೆ ನೆಲೆಸಿರುವ ಕಾಲವೆಲ್ಲಾ ಅವರು ತಮ್ಮ ಗುಡಾರಗಳಲ್ಲಿ ವಾಸಿಸಿದರು.
ಮೇಘವು ಸಾಯಂಕಾಲ ದಿಂದ ಉದಯದ ವರೆಗೆ ಇದ್ದು ಬೆಳಿಗ್ಗೆ ಮೇಲಕ್ಕೆ ತೆಗೆಯಲ್ಪಟ್ಟರೆ ಆಗ ಅವರು ಪ್ರಯಾಣ ಮಾಡುತ್ತಿದ್ದರು; ಇಲ್ಲವೆ ಹಗಲು ರಾತ್ರಿ ಇದ್ದು ಮೇಘವು ಮೇಲಕ್ಕೆ ಎತ್ತಲ್ಪಟ್ಟರೆ ಅವರು ಪ್ರಯಾಣ ಮಾಡುತ್ತಿದ್ದರು.
ಇಲ್ಲವೆ ಆ ಮೇಘವು ಎರಡು ದಿವಸಗಳಾದರೂ ಒಂದು ತಿಂಗಳಾದರೂ ಒಂದು ವರ್ಷವಾದರೂ ಗುಡಾರದ ಮೇಲೆ ನೆಲೆಸಿ ತಡಮಾಡಿದರೆ ಇಸ್ರಾ ಯೇಲ್ ಮಕ್ಕಳು ಪ್ರಯಾಣಮಾಡದೆ ಇಳುಕೊಂಡಿ ದ್ದರು. ಅದು ಮೇಲಕ್ಕೆತ್ತಲ್ಪಟ್ಟಾಗಲೇ ಅವರು ಪ್ರಯಾಣ ಮಾಡುತ್ತಿದ್ದರು.