1
|
ಶಿಕ್ಷಣವನ್ನು ಪ್ರೀತಿಸುವವನು ತಿಳುವಳಿಕೆಯನ್ನು ಪ್ರೀತಿಸುವವನಾಗಿದ್ದಾನೆ; ಗದರಿಕೆ ಯನ್ನು ಹಗೆಮಾಡುವವನು ಪಶುಪ್ರಾಯನು. |
2
|
ಒಳ್ಳೆ ಯವನು ಕರ್ತನ ದಯೆಯನ್ನು ಹೊಂದುತ್ತಾನೆ; ಕುಯುಕ್ತಿ ಮಾಡುವವನನ್ನು ಆತನು ದುಷ್ಟನೆಂದು ಖಂಡಿಸುತ್ತಾನೆ. |
3
|
ಯಾವನೂ ದುಷ್ಟತನದಿಂದ ಸ್ಥಿರವಾಗುವದಿಲ್ಲ; ನೀತಿವಂತರ ಬೇರು ಕದಲುವದಿಲ್ಲ. |
4
|
ಗುಣವತಿಯಾದ ಸ್ತ್ರೀಯು ತನ್ನ ಪತಿಗೆ ಕಿರೀಟ; ನಾಚಿಕೆಪಡಿಸುವವಳು ಅವನ ಎಲುಬುಗಳಿಗೆ ಕೊಳೆ ಯುವಿಕೆಯಂತೆ ಇರುವಳು. |
5
|
ನೀತಿವಂತರ ಆಲೋ ಚನೆಗಳು ನ್ಯಾಯವಾಗಿವೆ; ದುಷ್ಟರ ಆಲೋಚನೆಗಳು ಮೋಸ. |
6
|
ದುಷ್ಟರ ಮಾತುಗಳು ರಕ್ತಕ್ಕಾಗಿ ಹೊಂಚು ಹಾಕುತ್ತವೆ; ಯಥಾರ್ಥವಂತರ ಬಾಯಿಯು ಅವರನ್ನು ಬಿಡಿಸುವದು. |
7
|
ದುಷ್ಟರು ಕೆಡವಲ್ಪಟ್ಟು ಇಲ್ಲದೇ ಹೋಗುವರು; ನೀತಿವಂತರ ಮನೆಯು ನಿಲ್ಲುವದು. |
8
|
ತನ್ನ ಜ್ಞಾನಕ್ಕನುಸಾರವಾಗಿ ಒಬ್ಬ ಮನುಷ್ಯನು ಹೊಗ ಳಲ್ಪಡುವನು; ವಕ್ರಹೃದಯವುಳ್ಳವನು ತಿರಸ್ಕರಿಸಲ್ಪಡು ವನು. |
9
|
ರೊಟ್ಟಿಯ ಕೊರತೆ ಇದ್ದು ತನ್ನನ್ನು ತಾನೇ ಘನಪಡಿಸಿಕೊಳ್ಳುವವನಿಗಿಂತಲೂ ಸೇವಕನುಳ್ಳವನಾಗಿ ತಿರಸ್ಕರಿಸಲ್ಪಡುವವನೇ ಲೇಸು. |
10
|
ನೀತಿವಂತನು ತನ್ನ ಪಶುವಿನ ಪ್ರಾಣವನ್ನು ರಕ್ಷಿಸುತ್ತಾನೆ. ಆದರೆ ದುಷ್ಟರ ಅಂತಃಕರುಣೆಯು ಕ್ರೂರತನವೇ. |
11
|
ತನ್ನ ಹೊಲವನ್ನು ವ್ಯವಸಾಯ ಮಾಡುವವನು ರೊಟ್ಟಿಯಿಂದ ತೃಪ್ತಿ ಹೊಂದುವನು; ನಿಷ್ಪ್ರಯೋಜಕರನ್ನು ಹಿಂಬಾಲಿಸುವ ವನು ವಿವೇಕ ಶೂನ್ಯನು. |
12
|
ದುಷ್ಟರು ಕೆಟ್ಟವರ ಬಲೆಯನ್ನು ಅಪೇಕ್ಷಿಸುತ್ತಾರೆ; ನೀತಿವಂತರ ಬೇರು ಫಲವನ್ನು ಕೊಡುತ್ತದೆ. |
13
|
ತನ್ನ ತುಟಿಗಳ ದೋಷದಿಂದ ದುಷ್ಟನು ಉರ್ಲಿಗೆ ಬೀಳುವನು; ನೀತಿವಂತರು ಇಕ್ಕಟ್ಟಿ ನೊಳಗಿಂದ ತಪ್ಪಿಸಿಕೊಳ್ಳುವರು. |
14
|
ತನ್ನ ಬಾಯಿಯ ಫಲದ ಮುಖಾಂತರ ಒಬ್ಬ ಮನುಷ್ಯನು ಒಳ್ಳೆಯದ ರಿಂದ ತೃಪ್ತನಾಗುವನು; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು. |
15
|
ಅವಿವೇಕಿಯ ಮಾರ್ಗ ವು ತನ್ನ ಕಣ್ಣುಗಳಿಗೆ ನೆಟ್ಟಗಾಗಿದೆ; ಆಲೋಚನೆಗೆ ಕಿವಿಗೊಡುವವನು ಜ್ಞಾನಿಯಾಗಿದ್ದಾನೆ. |
16
|
ಅವಿವೇ ಕಿಯ ಕೋಪವು ತಟ್ಟನೆ ರಟ್ಟಾಗುವದು; ಜಾಣನು ಅವಮಾನವನ್ನು ಮರೆಮಾಡುತ್ತಾನೆ. |
17
|
ಸತ್ಯವನ್ನಾ ಡುವವನು ನ್ಯಾಯವನ್ನೂ ಸುಳ್ಳುಸಾಕ್ಷಿಯು ಮೋಸ ವನ್ನೂ ತೋರ್ಪಡಿಸುತ್ತಾನೆ. |
18
|
ಕತ್ತಿಯ ಇರಿತದ ಹಾಗೆ ಮಾತನಾಡುವದು ಉಂಟು. ಜ್ಞಾನವಂತರ ನಾಲಿಗೆಯು ಆರೋಗ್ಯ. |
19
|
ಸತ್ಯದ ತುಟಿಯು ಸದಾ ಸ್ಥಿರಗೊಳ್ಳು ವದು; ಸುಳ್ಳಾಡುವ ನಾಲಿಗೆಯು ಕ್ಷಣಿಕ. |
20
|
ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ; ಸಮಾಧಾನದ ಆಲೋಚನೆಯನ್ನು ಹೇಳುವವರಿಗೆ ಸಂತೋಷ. |
21
|
ನೀತಿವಂತನಿಗೆ ಯಾವ ಕೇಡೂ ಸಂಭವಿಸದು; ದುಷ್ಟರಾದರೋ ಕೇಡಿನಿಂದ ತುಂಬಿಕೊಳ್ಳುವರು. |
22
|
ಸುಳ್ಳಾ ಡುವ ತುಟಿಗಳು ಕರ್ತನಿಗೆ ಅಸಹ್ಯವಾಗಿವೆ. ಸತ್ಯದಿಂದ ನಡೆದುಕೊಳ್ಳುವವರು ಆತನ ಆನಂದವಾಗಿದ್ದಾರೆ. |
23
|
ಜಾಣನು ತಿಳಿದದ್ದನ್ನು ಗುಪ್ತಪಡಿಸುತ್ತಾನೆ. ಅವಿವೇಕಿ ಗಳ ಹೃದಯವು ಅವಿವೇಕತ್ವವನ್ನು ಪ್ರಕಟಿಸುತ್ತದೆ. |
24
|
ಚುರುಕು ಕೈಯುಳ್ಳವನು ಆಳುವನು, ಸೋಮಾರಿ ಗಳು ಕಪ್ಪಕೊಡುವವರಾಗುವರು. |
25
|
ಮನುಷ್ಯನ ಹೃದ ಯದಲ್ಲಿರುವ ಭಾರವು ಅದನ್ನು ಕುಗ್ಗಿಸುವದು; ಒಳ್ಳೆಯ ಮಾತು ಅದನ್ನು ಹಿಗ್ಗುವಂತೆ ಮಾಡುವದು. |
26
|
ನೀತಿ ವಂತನು ತನ್ನ ನೆರೆಯವನಿಗಿಂತ ಶ್ರೇಷ್ಠನಾಗಿದ್ದಾನೆ; ದುಷ್ಟರ ಮಾರ್ಗವು ಅವರನ್ನು ತಪ್ಪು ದಾರಿಗೆ ಎಳೆ ಯುತ್ತದೆ. |
27
|
ಸೋಮಾರಿಯು ಬೇಟೆಯಾಡಿದ್ದನ್ನು ಬೇಯಿಸುವದಿಲ್ಲ; ಆದರೆ ಶ್ರದ್ಧೆಯುಳ್ಳವನ ಆಸ್ತಿಯು ಅಮೂಲ್ಯವಾಗಿದೆ. |
28
|
ನೀತಿಯ ಮಾರ್ಗದಲ್ಲಿ ಜೀವ ವಿದೆ; ಅದರ ದಾರಿಯಲ್ಲಿ ಮರಣವೇ ಇಲ್ಲ. |
Proverbs 12:1 Kannada Language Bible Words basic statistical display
COMING SOON ...