Indian Language Bible Word Collections
Proverbs 14:33
Proverbs Chapters
Proverbs 14 Verses
Books
Old Testament
New Testament
Bible Versions
English
Tamil
Hebrew
Greek
Malayalam
Hindi
Telugu
Kannada
Gujarati
Punjabi
Urdu
Bengali
Oriya
Marathi
Assamese
Books
Old Testament
New Testament
Proverbs Chapters
Proverbs 14 Verses
1
|
ಜ್ಞಾನಿಯಾದ ಪ್ರತಿ ಸ್ತ್ರೀಯು ತನ್ನ ಮನೆಯನ್ನು ಕಟ್ಟುತ್ತಾಳೆ; ಬುದ್ಧಿಹೀನಳೋ ತನ್ನ ಕೈಗಳಿಂದಲೇ ಅದನ್ನು ಕಿತ್ತುಹಾಕುತ್ತಾಳೆ. |
2
|
ತನ್ನ ಯಥಾರ್ಥತೆಯಲ್ಲಿ ನಡೆಯುವವನು ಕರ್ತನಿಗೆ ಭಯಪಡುತ್ತಾನೆ; ತನ್ನ ಮಾರ್ಗಗಳಲ್ಲಿ ವಕ್ರತೆಯುಳ್ಳವನು ಆತನನ್ನು ಅಸಡ್ಡೆಮಾಡುತ್ತಾನೆ. |
3
|
ಬುದ್ಧಿಹೀನನ ಬಾಯಿ ಯಲ್ಲಿ ಗರ್ವದ ಅಂಕುರವಿದೆ; ಜ್ಞಾನವಂತರ ತುಟಿಗಳು ಅವುಗಳನ್ನು ಕಾಯುವವು. |
4
|
ಎತ್ತುಗಳು ಇಲ್ಲದೆ ಇರು ವಲ್ಲಿ ಗೋದಲಿಯು ಶುದ್ಧಿಯಾಗಿದೆ; ಎತ್ತಿನ ಬಲದಿಂದ ಬಹಳ ವೃದ್ಧಿಯು ಉಂಟಾಗುತ್ತದೆ. |
5
|
ನಂಬತಕ್ಕ ಸಾಕ್ಷಿಯು ಸುಳ್ಳಾಡನು; ಅಬದ್ದಸಾಕ್ಷಿಯು ಸುಳ್ಳುಗಳನ್ನೇ ಉಚ್ಚರಿ ಸುತ್ತಾನೆ. |
6
|
ಹಾಸ್ಯ ಮಾಡುವವನು ಜ್ಞಾನವನ್ನು ಹುಡು ಕಿದರೂ ಅದನ್ನು ಕಂಡುಕೊಳ್ಳುವದಿಲ್ಲ; ವಿವೇಚಿಸುವವನಿಗೆ ತಿಳುವಳಿಕೆಯು ಸುಲಭವಾಗಿದೆ. |
7
|
ನೀನು ಬುದ್ಧಿಹೀನನಲ್ಲಿ ತಿಳುವಳಿಕೆಯ ತುಟಿಗಳನ್ನು ಕಾಣದೆ ಹೋದರೆ ಅವನ ಬಳಿಯಿಂದ ನೀನು ಹೋಗು. |
8
|
ಜಾಣನ ಜ್ಞಾನವು ತನ್ನ ಮಾರ್ಗವನ್ನು ಗ್ರಹಿಸುವಂತ ದ್ದಾಗಿದೆ; ಮೂಢರ ಬುದ್ಧಿಹೀನತೆಯು ಮೋಸಕರ. |
9
|
ಬುದ್ಧಿಹೀನರು ಪಾಪಕ್ಕೆ ಹಾಸ್ಯಮಾಡುತ್ತಾರೆ; ನೀತಿ ವಂತರಲ್ಲಿ ದಯೆ ಇದೆ. |
10
|
ಹೃದಯಕ್ಕೆ ತನ್ನ ವ್ಯಾಕುಲ ತೆಯು ತಿಳಿಯುತ್ತದೆ; ಪರನು ತನ್ನ ಸಂತೋಷದಲ್ಲಿ ಸೇರುವದಿಲ್ಲ. |
11
|
ದುಷ್ಟರ ಮನೆಯು ಕೆಡವಲ್ಪಡುವದು; ಯಥಾರ್ಥವಂತರ ಗುಡಾರವು ಏಳಿಗೆಯಾಗುವದು. |
12
|
ಒಬ್ಬ ಮನುಷ್ಯನಿಗೆ ಸರಿಯೆಂದು ತೋರುವ ಮಾರ್ಗ ವಿದೆ. ಅದರ ಅಂತ್ಯವು ಮರಣದ ಮಾರ್ಗಗಳೇ. |
13
|
ನಗೆಯಲ್ಲಿಯೂ ಹೃದಯವು ದುಃಖದಿಂದ ಇರು ವದು; ಅದರ ಉಲ್ಲಾಸದ ಅಂತ್ಯವು ವ್ಯಾಕುಲವೇ. |
14
|
ಹೃದಯದಲ್ಲಿ ಹಿಂಜರಿಯುವವನು ತನ್ನ ಸ್ವಂತ ಮಾರ್ಗಗಳಿಂದ ತುಂಬಿಕೊಳ್ಳುವನು; ಒಳ್ಳೆಯವನು ತನ್ನಲ್ಲಿ ತಾನೇ ತೃಪ್ತಿಹೊಂದುವನು. |
15
|
ಮೂಢರು ಪ್ರತಿಯೊಂದು ಮಾತನ್ನು ನಂಬುತ್ತಾರೆ; ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು. |
16
|
ಜ್ಞಾನಿ ಯು ಭಯಪಟ್ಟು ಕೆಟ್ಟತನದಿಂದ ಹೊರಟುಹೋಗು ವನು; ಬುದ್ಧಿಹೀನನು ಕೋಪಿಸಿಕೊಂಡು ಧೈರ್ಯದಿಂದ ಇರುತ್ತಾನೆ. |
17
|
ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುತ್ತಾನೆ; ಕುಯುಕ್ತಿಯುಳ್ಳವನು ಹಗೆಮಾಡು ತ್ತಾನೆ. |
18
|
ಮೂಢರು ಮೂರ್ಖತನಕ್ಕೆ ಬಾಧ್ಯರಾಗು ತ್ತಾರೆ; ಜಾಣರು ತಿಳುವಳಿಕೆಯ ಕಿರೀಟವನ್ನು ಪಡೆದು ಕೊಳ್ಳುತ್ತಾರೆ. |
19
|
ಒಳ್ಳೆಯವರಿಗೆ ದುಷ್ಟರು ಬಾಗುತ್ತಾರೆ; ದುಷ್ಟರು ನೀತಿವಂತರ ದ್ವಾರಗಳಲ್ಲಿ ಬಗ್ಗಿಕೊಳ್ಳುತ್ತಾರೆ. |
20
|
ಬಡವನು ತನ್ನ ನೆರೆಯವನಿಂದ ಹಗೆಮಾಡಲ್ಪಡುವನು; ಐಶ್ವರ್ಯವಂತನಿಗೆ ಬಹು ಜನ ಮಿತ್ರರು. |
21
|
ತನ್ನ ನೆರೆಯವನನ್ನು ಅವಮಾನ ಮಾಡುವವನು ಪಾಪ ಮಾಡುತ್ತಾನೆ; ಬಡವರ ಮೇಲೆ ಕನಿಕರ ತೋರಿ ಸುವವನು ಧನ್ಯನು. |
22
|
ಕೆಟ್ಟದ್ದನ್ನು ಕಲ್ಪಿಸುವವರು ತಪ್ಪು ಮಾಡುತ್ತಾರಲ್ಲವೇ? ಒಳ್ಳೆಯದನ್ನು ಕಲ್ಪಿಸುವವರಿಗೆ ಕರುಣೆಯೂ ಸತ್ಯವೂ ಇರುವವು. |
23
|
ಎಲ್ಲಾ ಪ್ರಯಾಸ ದಲ್ಲಿ ಲಾಭವಿದೆ; ತುಟಿಗಳ ಮಾತು ಬಡತನಕ್ಕೆ ಮಾತ್ರ ದಾರಿ. |
24
|
ಜ್ಞಾನವಂತರ ಕಿರೀಟವು ಅದರ ಐಶ್ವ ರ್ಯವೇ; ಬುದ್ಧಿಹೀನರ ಬುದ್ಧಿಹೀನತೆಯು ಅವರ ಮೂರ್ಖತನವೇ. |
25
|
ಸತ್ಯ ಸಾಕ್ಷಿಯು ಪ್ರಾಣಗಳನ್ನು ತಪ್ಪಿಸುತ್ತಾನೆ; ಮೋಸದ ಸಾಕ್ಷಿಯು ಸುಳ್ಳುಗಳನ್ನು ಆಡು ತ್ತಾನೆ. |
26
|
ಕರ್ತನ ಭಯವೇ ಬಲವಾದ ಭರವಸವು; ಆತನ ಮಕ್ಕಳಿಗೆ ಆಶ್ರಯ ಸ್ಥಳವು ಇರುವದು. |
27
|
ಮರಣದ ಪಾಶಗಳಿಂದ ತೊಲಗುವದಕ್ಕೆ ಕರ್ತನ ಭಯವು ಜೀವದ ಬುಗ್ಗೆ. |
28
|
ಜನ ಸಮೂಹದಲ್ಲಿ ಅರಸನ ಘನತೆ ಇದೆ; ಜನರ ಕೊರತೆಯಲ್ಲಿ ರಾಜಪುತ್ರನ ನಾಶ. |
29
|
ಕೋಪಕ್ಕೆ ನಿಧಾನಿಸು. ದೀರ್ಘಶಾಂತನು ದೊಡ್ಡವಿವೇಕಿ; ಆತ್ಮದಲ್ಲಿ ಆತುರಪಡುವವನು ಮೂಢ ತೆಯನ್ನು ವೃದ್ಧಿಮಾಡುವನು. |
30
|
ಸ್ವಸ್ಥವಾದ ಹೃದಯವು ದೇಹಕ್ಕೆ ಜೀವ; ಮತ್ಸರವು ಎಲುಬುಗಳಿಗೆ ಕ್ಷಯವು. |
31
|
ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನು ಹೀನೈಸುವನು; ಆತನನ್ನು ಸನ್ಮಾನಿಸುವವನು ಬಡವರನ್ನು ಕನಿಕರಿಸುತ್ತಾನೆ. |
32
|
ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ. |
33
|
ತಿಳುವಳಿಕೆಯುಳ್ಳವನ ಹೃದಯದಲ್ಲಿ ಜ್ಞಾನವು ನೆಲೆ ಯಾಗಿದೆ; ಬುದ್ಧಿಹೀನರಲ್ಲಿರುವದು ಪ್ರಕಟವಾಗುತ್ತದೆ. |
34
|
ನೀತಿಯು ಜನಾಂಗವನ್ನು ವೃದ್ಧಿಮಾಡುತ್ತದೆ; ಯಾವ ಪ್ರಜೆಗಾದರೂ ಪಾಪವು ಅವಮಾನವಾಗಿದೆ. |
35
|
ಜ್ಞಾನ ವುಳ್ಳ ಸೇವಕನ ಕಡೆಗೆ ಅರಸನ ದಯೆ ಇದೆ; ನಾಚಿಕೆ ಪಡಿಸುವವನ ಕಡೆಗೆ ಅವನ ರೌದ್ರವಿದೆ. |