Bible Languages

Indian Language Bible Word Collections

Bible Versions

Books

Proverbs Chapters

Proverbs 20 Verses

Bible Versions

Books

Proverbs Chapters

Proverbs 20 Verses

1 ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ. ಇದ ರಿಂದ ಮೋಸಹೋದವನು ಜ್ಞಾನಿಯಲ್ಲ.
2 ಅರಸನ ಭಯವು ಸಿಂಹದ ಗರ್ಜನೆಯಂತಿದೆ; ಅವನಿಗೆ ಕೋಪ ವನ್ನೆಬ್ಬಿಸುವವನು ತನ್ನ ಪ್ರಾಣಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.
3 ಕಲಹವನ್ನು ತಡೆಯುವವನು ಮಾನಕ್ಕೆ ಯೋಗ್ಯನು; ಪ್ರತಿಯೊಬ್ಬ ಬುದ್ಧಿಹೀನನು ತಲೆಹಾಕು ತ್ತಾನೆ.
4 ಮೈಗಳ್ಳನು ಚಳಿಯ ನಿಮಿತ್ತವಾಗಿ ಉಳುವದಿಲ್ಲ; ಆದಕಾರಣ ಸುಗ್ಗಿಯಲ್ಲಿ ಅವನು ಬೇಡಿಕೊಂಡರೂ ಏನೂ ಸಿಕ್ಕುವದಿಲ್ಲ.
5 ಮನುಷ್ಯನ ಹೃದಯದ ಆಲೋ ಚನೆಯು ಆಳವಾದ (ಬಾವಿಯ) ನೀರಿನಂತಿದೆ; ವಿವೇ ಕಿಯು ಅದನ್ನು ಸೇದುವನು.
6 ಅನೇಕರಲ್ಲಿ ಪ್ರತಿಯೊ ಬ್ಬನು ತಮ್ಮ ಸ್ವಂತ ಸೌಜನ್ಯವನ್ನು ಸಾರುವನು; ನಂಬಿ ಗಸ್ತನಾದ ಮನುಷ್ಯನನ್ನು ಯಾರು ಕಂಡುಕೊಳ್ಳಬಲ್ಲರು?
7 ನೀತಿವಂತನು ತನ್ನ ಯಥಾರ್ಥತೆಯಲ್ಲಿ ನಡೆಯುತ್ತಾನೆ; ಅವನು ಗತಿಸಿದ ಮೇಲೆ ಅವನ ಮಕ್ಕಳು ಆಶೀರ್ವದಿ ಸಲ್ಪಡುವರು.
8 ನ್ಯಾಯತೀರ್ಪಿನ ಸಿಂಹಾಸನದ ಮೇಲೆ ಕೂತಿರುವ ಅರಸನು ತನ್ನ ಕಣ್ಣು ದೃಷ್ಟಿಯಿಂದ ಸಕಲ ಕೆಟ್ಟತನವನ್ನು ಚದರಿಸುವನು.
9 ನನ್ನ ಹೃದಯವನ್ನು ಶುದ್ಧಿಮಾಡಿಕೊಂಡಿದ್ದೇನೆ, ನನ್ನ ಪಾಪದಿಂದ ನಾನು ಶುದ್ಧನು ಎಂದು ಯಾರು ಹೇಳಬಲ್ಲರು?
10 ವಿಧ ವಿಧವಾದ ತೂಕಗಳೂ ತರತರವಾದ ಅಳತೆಗಳೂ ಇವೆರಡೂ ಸಮವಾಗಿಯೇ ಕರ್ತನಿಗೆ ಅಸಹ್ಯ.
11 ತನ್ನ ಕೆಲಸವು ಶುದ್ಧವೋ ಇಲ್ಲವೆ ನ್ಯಾಯವೋ ಎಂಬದು ತನ್ನ ಕ್ರಿಯೆಗಳಿಂದಲೇ ಹುಡುಗನು ತೋರ್ಪಡಿಸಿ ಕೊಳ್ಳುತ್ತಾನೆ.
12 ಕೇಳುವ ಕಿವಿ ನೋಡುವ ಕಣ್ಣು, ಇವೆರಡನ್ನು ಕರ್ತನು ಮಾಡಿದ್ದಾನೆ.
13 ನೀನು ಬಡ ತನಕ್ಕೆ ಬಾರದಂತೆ ನಿದ್ರೆಯಲ್ಲಿ ಆಸಕ್ತಿಯುಳ್ಳವನಾಗಿರ ಬೇಡ; ನಿನ್ನ ಕಣ್ಣುಗಳನ್ನು ತೆರೆದರೆ ನೀನು ರೊಟ್ಟಿ ಯಿಂದ ತೃಪ್ತನಾಗುವಿ.
14 ಇದು ನಿಷ್ಪ್ರಯೋಜಕವಾದದ್ದು, ಇದು ನಿಷ್ಪ್ರಯೋಜಕವಾದದ್ದು ಎಂದು ಕೊಳ್ಳು ವವನು ಹೇಳುತ್ತಾನೆ. ಅವನು ಹೋದ ಮೇಲೆ ಹೊಗ ಳುತ್ತಾನೆ.
15 ಬಂಗಾರವೂ ಮಾಣಿಕ್ಯಗಳ ರಾಶಿಯೂ ಇವೆ. ತಿಳುವಳಿಕೆಯ ತುಟಿಗಳು ಅಮೂಲ್ಯವಾದ ರತ್ನ ವಾಗಿವೆ.
16 ಪರರ ಹೊಣೆಯಾಗಿರುವ ಬಟ್ಟೆಯನ್ನು ತೆಗೆದುಕೋ; ಪರಸ್ತ್ರೀಗೋಸ್ಕರ ಅವನಿಂದ ಒತ್ತೆ ತೆಗೆ ದುಕೋ.
17 ಮೋಸದಿಂದ ಸಿಕ್ಕಿದ ರೊಟ್ಟಿಯು ಮನು ಷ್ಯನಿಗೆ ರುಚಿ; ಆಮೇಲೆ ಅವನ ಬಾಯಿಯು ಮರಳಿ ನಿಂದ ತುಂಬುವದು.
18 ಪ್ರತಿಯೊಂದು ಉದ್ದೇಶವು ಆಲೋಚನೆಯಿಂದ ಸಫಲವಾಗುವದು; ಹಿತವಾದ ಸಲಹೆಯಿಂದ ಯುದ್ಧಮಾಡು.
19 ತಿರುಗುವ ಚಾಡಿ ಕೋರನು ಗುಟ್ಟುಗಳನ್ನು ರಟ್ಟುಮಾಡುತ್ತಾನೆ. ಆದ ಕಾರಣ ತನ್ನ ತುಟಿಗಳಿಂದ ಮುಖಸ್ತುತಿ ಮಾಡುವವನ ಗೊಡವೆಗೆ ಹೋಗಬೇಡ.
20 ತನ್ನ ತಂದೆ ತಾಯಿಯನ್ನಾ ಗಲಿ ಶಪಿಸುವವನ ದೀಪವು ಮಂಕಾದ ಕತ್ತಲೆಯಲ್ಲಿ ಆರಿಹೋಗುವದು.
21 ಮೊದಲು ಸ್ವಾಸ್ತ್ಯವನ್ನೂ ತ್ವರೆ ಯಾಗಿ ಹೊಂದಬಹುದು; ಅದರ ಕೊನೆಯು ಆಶೀ ರ್ವದಿಸಲ್ಪಡುವದಿಲ್ಲ.
22 ನೀನು--ಕೇಡಿಗೆ ಮುಯ್ಯಿ ತೀರಿಸುವೆನು ಅನ್ನಬೇಡ; ಕರ್ತನನ್ನು ನಿರೀಕ್ಷಿಸು; ಆಗ ಆತನು ನಿನ್ನನ್ನು ರಕ್ಷಿಸುವನು.
23 ವಿಧವಿಧವಾದ ತೂಕ ಗಳು ಕರ್ತನಿಗೆ ಅಸಹ್ಯವಾಗಿವೆ; ಮೋಸದ ತಕ್ಕಡಿಯು ಒಳ್ಳೇದಲ್ಲ.
24 ಮನುಷ್ಯನ ನಡೆಗಳು ಕರ್ತನಿಂದಲೇ; ಹಾಗಾದರೆ ಒಬ್ಬ ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳುಕೊಳ್ಳಬಲ್ಲನು?
25 ಪರಿಶುದ್ಧವಾದದ್ದನ್ನು ನುಂಗಿದವನಾಗಿ ತರುವಾಯ ವಿಚಾರಿಸುವದಕ್ಕಾಗಿ ಆಣೆಯಿಟ್ಟು ಕೊಳ್ಳುವದು ಒಬ್ಬ ಮನುಷ್ಯನಿಗೆ ಉರ್ಲಾ ಗಿದೆ.
26 ಜ್ಞಾನಿಯಾದ ಅರಸನು ದುಷ್ಟರನ್ನು ಚದರಿಸಿ ಅವರ ಮೇಲೆ ಚಕ್ರವನ್ನು ಎಳೆಯುತ್ತಾನೆ.
27 ಮನುಷ್ಯನ ಆತ್ಮವು ಹೊಟ್ಟೆಯ ಒಳಭಾಗಗಳನ್ನು ಶೋಧಿಸುವಂಥ ಕರ್ತನ ದೀಪವಾಗಿವೆ.
28 ಕರುಣೆಯೂ ಸತ್ಯವೂ ಅರಸನನ್ನು ಕಾಯುತ್ತದೆ; ಕರುಣೆಯಿಂದಲೇ ಅವನ ಸಿಂಹಾಸನವು ಸ್ಥಿರಗೊಳ್ಳುತ್ತದೆ.
29 ಯೌವನಸ್ಥರ ಘನತೆಯು ಅವರ ಬಲವೇ; ಮುದುಕರ ಅಲಂಕಾರವು ನರೆತ ತಲೆಯೇ.
30 ನೀಲಿಯಾದ ಗಾಯವು ದುಷ್ಟ ತ್ವವನ್ನು ತೊಳೆಯುತ್ತದೆ; ಹಾಗೆಯೇ ಏಟುಗಳು ಹೊಟ್ಟೆಯ ಒಳಭಾಗಗಳನ್ನು ಶುದ್ಧಮಾಡುತ್ತವೆ.

Proverbs 20:16 Kannada Language Bible Words basic statistical display

COMING SOON ...

×

Alert

×