Bible Languages

Indian Language Bible Word Collections

Bible Versions

Books

Proverbs Chapters

Proverbs 27 Verses

Bible Versions

Books

Proverbs Chapters

Proverbs 27 Verses

1 ನಾಳೆಯ ವಿಷಯವಾಗಿ ಕೊಚ್ಚಿಕೊಳ್ಳಬೇಡ; ಒಂದು ದಿನವು ಯಾವದನ್ನು ಸಂಭವಿಸುವಂತೆ ಮಾಡುತ್ತದೋ ಅದು ನಿನಗೆ ತಿಳಿ ಯದು.
2 ನಿನ್ನ ಸ್ವಂತ ಬಾಯಲ್ಲ, ಮತ್ತೊಬ್ಬನು ನಿನ್ನನ್ನು ಹೊಗಳಲಿ; ನಿನ್ನ ಸ್ವಂತ ತುಟಿಗಳಲ್ಲ, ಪರನೇ ನಿನ್ನನ್ನು ಹೊಗಳಲಿ.
3 ಕಲ್ಲು ಭಾರ, ಮರಳು ಭಾರ; ಇವೆರಡ ಕ್ಕಿಂತ ಮೂಢನ ಕೋಪವು ಬಹಳ ಭಾರ.
4 ಕ್ರೋಧವು ಕ್ರೂರ. ಕೋಪವು ಘೋರ; ಮತ್ಸರದ ಮುಂದೆ ಯಾವನು ನಿಂತಾನು?
5 ರಹಸ್ಯವಾದ ಪ್ರೀತಿಗಿಂತಲೂ ಬಹಿರಂಗವಾದ ಗದರಿಕೆಯೇ ಲೇಸು.
6 ಸ್ನೇಹಿತನು ಮಾಡುವ ಗಾಯಗಳು ನಂಬಿಕೆಯುಳ್ಳವುಗಳಾಗಿವೆ; ಶತ್ರುವಿನ ಮುದ್ದುಗಳು ಮೋಸಕರವಾಗಿವೆ.
7 ತೃಪ್ತಿ ಹೊಂದಿದವನು ಜೇನು ತುಪ್ಪವನ್ನೂ ಅಸಹ್ಯಿಸಿಕೊಳ್ಳು ತ್ತಾನೆ; ಹಸಿದವನಿಗೆ ಕಹಿಯಾದ ಪ್ರತಿಯೊಂದು ವಸ್ತುವು ಸಿಹಿಯಾಗಿದೆ.
8 ತನ್ನ ಸ್ಥಳವನ್ನು ಬಿಟ್ಟು ಅಲೆಯುವ ಮನುಷ್ಯನು ತನ್ನ ಗೂಡನ್ನು ಬಿಟ್ಟು ಅಲೆಯುವ ಪಕ್ಷಿ ಯಂತೆ ಇದ್ದಾನೆ.
9 ತೈಲವೂ ಸುಗಂಧ ದ್ರವ್ಯವೂ ಹೃದಯವನ್ನು ಸಂತೋಷಪಡಿಸುತ್ತದೆ, ಹಾಗೆಯೇ ಆದರಣೆಯ ಸಲಹೆಯಿಂದ ಸ್ನೇಹಿತನ ಮಧುರತ್ವವು ಇರುತ್ತದೆ.
10 ನಿನ್ನ ಸ್ನೇಹಿತನನ್ನೂ ನಿನ್ನ ತಂದೆಯ ಸ್ನೇಹಿತನನ್ನೂ ತ್ಯಜಿಸಬೇಡ; ಅಲ್ಲದೆ ನಿನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನ ಸಹೋದರನ ಮನೆಗೆ ಹೋಗಬೇಡ; ದೂರವಾಗಿರುವ ಸಹೋದರನಿಗಿಂತ ಹತ್ತಿರವಾಗಿರುವ ನೆರೆಯವನೇ ಲೇಸು.
11 ನಿನ್ನನ್ನು ನಿಂದಿಸುವವರಿಗೆ ಉತ್ತರಿಸುವಂತೆ ನಿನ್ನ ಹೃದಯವನ್ನು ಸಂತೋಷಪಡಿಸುವ ಹಾಗೆ ನನ್ನ ಮಗನೇ, ಜ್ಞಾನಿಯಾಗಿರು.
12 ಜಾಣನು ಕೇಡನ್ನು ಮುಂದಾಗಿ ನೋಡಿ ಅಡಗಿಕೊಳ್ಳುತ್ತಾನೆ; ಬುದ್ಧಿಹೀನನು ಮುಂದೆ ಹೋಗಿ ಶಿಕ್ಷಿಸಲ್ಪಡುತ್ತಾನೆ.
13 ಪರನಿಗಾಗಿ ಹೊಣೆಯಾದವನ ವಸ್ತ್ರವನ್ನು ತೆಗೆದು ಕೊಂಡು ಮತ್ತೊಬ್ಬನಿಗಾಗಿ ಅವನಿಂದ ಒತ್ತೆಯನ್ನು ತೆಗೆದುಕೋ.
14 ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನಿಗೆ ಅದು ಶಾಪವೆಂದು ಎಣಿಸಲ್ಪಡುವದು.
15 ದೊಡ್ಡ ಮಳೆಯ ದಿವಸದಲ್ಲಿ ಬಿಡದೆ ತೊಟ್ಟಿಕ್ಕುವಂತದ್ದೂ ಕಲಹ ಮಾಡುವ ಸ್ತ್ರೀಯೂ ಸಮಾನ.
16 ಅವಳನ್ನು ಅಡಗಿಸು ವವನು ಗಾಳಿಯನ್ನೂ ತನ್ನನ್ನು ರಟ್ಟುಮಾಡುವ ಅವನ ಬಲಗೈಯ ತೈಲವನ್ನೂ ಅಡಗಿಸುತ್ತಾನೆ.
17 ಕಬ್ಬಿಣವು ಕಬ್ಬಿಣವನ್ನು ಹದಮಾಡುತ್ತದೆ; ಹಾಗೆಯೇ ಒಬ್ಬನು ತನ್ನ ಸ್ನೇಹಿತನ ಬುದ್ಧಿಯನ್ನು ಚುರುಕು ಮಾಡುತ್ತಾನೆ.
18 ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು; ಹಾಗೆಯೇ ತನ್ನ ಯಜಮಾನ ನಿಗಾಗಿ ಕಾಯುವವನು ಸನ್ಮಾನ ಹೊಂದುವನು.
19 ನೀರಿನಲ್ಲಿ ಮುಖವು ಪ್ರತಿಬಿಂಬಿಸುವಂತೆ ಮನುಷ್ಯನ ಹೃದಯವು ಮಾಡುತ್ತದೆ.
20 ಪಾತಾಳಕ್ಕೂ ನಾಶನಕ್ಕೂ ತೃಪ್ತಿ ಇಲ್ಲವೇ ಇಲ್ಲ; ಹಾಗೆಯೇ ಮನುಷ್ಯ ಕಣ್ಣುಗಳು ಎಂದಿಗೂ ತೃಪ್ತಿಹೊಂದುವದಿಲ್ಲ.
21 ಬೆಳ್ಳಿ ಬಂಗಾರ ಗಳ ಪುಟಕ್ಕೆ ಕುಲುಮೆ ಹೇಗೆಯೋ ಹಾಗೆಯೇ ತನ್ನ ಹೊಗಳಿಕೆಗೆ ಮನುಷ್ಯನಿದ್ದಾನೆ.
22 ಬುದ್ಧಿಹೀನನನ್ನು ಒರಳಿನಲ್ಲಿ ಗೋಧಿಯೊಂದಿಗೆ ಒನಕೆಯಿಂದ ಕುಟ್ಟಿ ದರೂ ಅವನಿಂದ ಮೂರ್ಖತನವು ತೊಲಗುವದಿಲ್ಲ.
23 ನಿನ್ನ ಹಿಂಡುಗಳ ಸ್ಥಿತಿಯನ್ನು ತಿಳಿದುಕೊಳ್ಳುವಂತೆ ಶ್ರದ್ಧೆವಹಿಸು; ನಿನ್ನ ಮಂದೆಗಳನ್ನು ಚೆನ್ನಾಗಿ ನೋಡಿಕೋ.
24 ಐಶ್ವರ್ಯವು ಶಾಶ್ವತವಲ್ಲ; ಕಿರೀಟವು ಪ್ರತಿಯೊಂದು ವಂಶಾವಳಿಗೆ ಇರುತ್ತದೋ?
25 ಹುಲ್ಲು ಕಾಣುತ್ತದೆ; ಹಸಿ ಹುಲ್ಲು ತನ್ನನ್ನೇ ತೋರುತ್ತದೆ, ಬೆಟ್ಟಗಳ ಸೊಪ್ಪು ಕೂಡಿಸಲ್ಪಡುತ್ತದೆ.
26 ನಿನ್ನ ವಸ್ತ್ರಕ್ಕಾಗಿ ಕುರಿಮರಿಗಳು ಮತ್ತು ಹೊಲದ ಕ್ರಯಕ್ಕಾಗಿ ನಿನ್ನ ಆಡುಗಳು ಇವೆ.
27 ನಿನ್ನ ಊಟಕ್ಕಾಗಿಯೂ ನಿನ್ನ ಮನೆಯವರ ಆಹಾರ ಕ್ಕಾಗಿಯೂ ನಿನ್ನ ದಾಸಿಯರ ಜೀವನಕ್ಕಾಗಿಯೂ ಆಡುಗಳ ಹಾಲು ಸಾಕಾಗುತ್ತದೆ.

Proverbs 27:1 Kannada Language Bible Words basic statistical display

COMING SOON ...

×

Alert

×