English Bible Languages

Indian Language Bible Word Collections

Bible Versions

English

Tamil

Hebrew

Greek

Malayalam

Hindi

Telugu

Kannada

Gujarati

Punjabi

Urdu

Bengali

Oriya

Marathi

Assamese

Books

Proverbs Chapters

Proverbs 3 Verses

1 ನನ್ನ ಮಗನೇ, ನನ್ನ ಕಟ್ಟಳೆಯನ್ನು ಮರೆಯಬೇಡ. ನಿನ್ನ ಹೃದಯವು ನನ್ನ ಆಜ್ಞೆ ಗಳನ್ನು ಕಾಪಾಡಲಿ:
2 ಆಗ ಹೆಚ್ಚಾದ ದಿನಗಳೂ ದೀರ್ಘಾಯುಷ್ಯವೂ ಸಮಾಧಾನವೂ ನಿನಗೆ ಕೂಡಿಸ ಲ್ಪಡುವವು.
3 ಕರುಣೆಯೂ ಸತ್ಯವೂ ನಿನ್ನನ್ನು ಬಿಡದಿರಲಿ. ನಿನ್ನ ಕೊರಳಿನ ಸುತ್ತಲೂ ಅವುಗಳನ್ನು ಕಟ್ಟಿಕೋ; ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.
4 ಹೀಗೆ ನೀನು ದೇವರ ಮುಂದೆಯೂ ಮನುಷ್ಯನ ಮುಂದೆಯೂ ದಯೆಯನ್ನೂ ಒಳ್ಳೆಯ ವಿವೇಕವನ್ನೂ ಪಡೆದುಕೊಳ್ಳುವಿ.
5 ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ.
6 ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.
7 ನಿನ್ನ ದೃಷ್ಟಿಯಲ್ಲಿ ಜ್ಞಾನಿಯಂತೆ ನೀನು ಇರಬೇಡ; ಕರ್ತನಿಗೆ ಭಯಪಟ್ಟು ಕೆಟ್ಟತನದಿಂದ ನೀನು ತೊಲಗಿಹೋಗು.
8 ಅದು ನಿನ್ನ ದೇಹಕ್ಕೆ ಆರೋಗ್ಯವೂ ಎಲುಬುಗಳಿಗೆ ಸಾರವೂ ಆಗಿರುವದು.
9 ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು.
10 ಹೀಗೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬಲ್ಪಡುವವು, ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿ ತುಳುಕುವವು.
11 ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಮಾತ್ರವಲ್ಲದೆ ಆತನ ತಿದ್ದುವಿಕೆಗೆ ಬೇಸರ ಗೊಳ್ಳಬೇಡ;
12 ತಾನು ಮೆಚ್ಚುವ ಮಗನನ್ನು ತಂದೆಯು ಶಿಕ್ಷಿಸುವಂತೆ ಕರ್ತನು ಯಾರನ್ನು ಪ್ರೀತಿಸುತ್ತಾನೋ ಅವನನ್ನು ಆತನು ತಿದ್ದುವನು.
13 ಜ್ಞಾನವನ್ನು ಕಂಡು ಕೊಳ್ಳುವವನೂ ವಿವೇಕವನ್ನು ಸಂಪಾದಿಸಿಕೊಳ್ಳುವವನೂ ಧನ್ಯನು.
14 ಅದರ ವ್ಯಾಪಾರವೂ ಬೆಳ್ಳಿಯ ವ್ಯಾಪಾರಕ್ಕಿಂತಲೂ ಅದರ ಲಾಭವು ಸೋಸಿದ ಬಂಗಾರಕ್ಕಿಂತಲೂ ಉತ್ತಮವಾಗಿದೆ.
15 ಅದು ಮಾಣಿಕ್ಯಗಳಿಗಿಂತಲೂ ಬಹು ಅಮೂಲ್ಯವುಳ್ಳದ್ದಾಗಿದ್ದು ನಿನ್ನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಾಗುವದಿಲ್ಲ.
16 ಆಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ ಎಡಗೈಯಲ್ಲಿ ಐಶ್ವರ್ಯವೂ ಘನತೆಯೂ ಇವೆ.
17 ಅವಳ ಮಾರ್ಗ ಗಳು ಸಂತೋಷಕರವೂ ಎಲ್ಲಾ ದಾರಿಗಳು ಸಮಾ ಧಾನಕರವೂ ಆಗಿವೆ.
18 ತನ್ನನ್ನು ಹಿಡಿದುಕೊಳ್ಳುವ ವರಿಗೆ ಆಕೆಯು ಜೀವದ ವೃಕ್ಷವಾಗಿದ್ದಾಳೆ; ಆಕೆಯನ್ನು ಭದ್ರವಾಗಿ ಇಟ್ಟುಕೊಳ್ಳುವ ಪ್ರತಿಯೊಬ್ಬನೂ ಧನ್ಯನು.
19 ಕರ್ತನು ಜ್ಞಾನದಿಂದ ಭೂಮಿಯನ್ನು ಸ್ಥಾಪಿಸಿದನು; ವಿವೇಕದ ಮೂಲಕ ಆತನು ಆಕಾಶಗಳನ್ನು ಸ್ಥಿರಪಡಿಸಿ ದನು.
20 ಆತನ ತಿಳುವಳಿಕೆಯಿಂದ ಅಗಾಧಗಳು ಒಡೆದು ಮೇಘಗಳು ಇಬ್ಬನಿಯನ್ನು ಸುರಿಸುತ್ತವೆ.
21 ನನ್ನ ಮಗನೇ, ನಿನ್ನ ಕಣ್ಣುಗಳಿಂದ ಅವುಗಳು ತಪ್ಪಿಸಿಕೊಳ್ಳದೆ ಇರಲಿ. ಸುಜ್ಞಾನವನ್ನೂ ವಿವೇಕವನ್ನೂ ಇಟ್ಟುಕೋ.
22 ಅವು ನಿನ್ನ ಪ್ರಾಣಕ್ಕೆ ಜೀವವೂ ಕೊರ ಳಿಗೆ ಸೊಬಗೂ ಆಗಿರುವವು.
23 ನಿನ್ನ ಮಾರ್ಗದಲ್ಲಿ ನೀನು ನಿರ್ಭಯವಾಗಿ ನಡೆಯುವಿ, ನಿನ್ನ ಪಾದವು ಎಡವುವದಿಲ್ಲ.
24 ನೀನು ಮಲಗುವಾಗ ನಿನಗೆ ಹೆದರಿಕೆ ಇರುವದಿಲ್ಲ, ಹೌದು, ನೀನು ಮಲಗಿಕೊಳ್ಳುವಿ. ನಿನ್ನ ನಿದ್ರೆಯು ಸುಖವಾಗಿರುವದು.
25 ಆಕಸ್ಮತ್ತಾದ ಭಯ ಕ್ಕಾಗಲಿ ಇಲ್ಲವೆ ಅವರ ಮೇಲೆ ಬರುವ ದುಷ್ಟರ ನಾಶನಕ್ಕಾಗಲಿ ನೀನು ಭಯಪಡದಿರು.
26 ಕರ್ತನೇ ನಿನಗೆ ಭರವಸನಾಗಿದ್ದು ನಿನ್ನ ಪಾದವು ತೆಗೆಯಲ್ಪಡ ದಂತೆ ಆತನು ಕಾಪಾಡುವನು.
27 ನಿನಗೆ ಸಾಧ್ಯವಿರುವಾಗ ಹೊಂದತಕ್ಕವರಿಗೆ ಒಳ್ಳೆ ಯದು ಮಾಡುವದನ್ನು ತಪ್ಪಿಸಬೇಡ.
28 ಕೊಡತಕ್ಕದ್ದು ನಿನ್ನಲ್ಲಿರುವಾಗ--ಹೋಗಿ ಬಾ, ನಾಳೆ ನಿನಗೆ ಕೊಡು ವೆನು ಎಂದು ನಿನ್ನ ನೆರೆಯವನಿಗೆ ಹೇಳಬೇಡ.
29 ನಿನ್ನ ನೆರೆಯವನು ಭದ್ರತೆಯಿಂದ ನಿನ್ನ ಪಕ್ಕದಲ್ಲಿ ಜೀವಿ ಸುತ್ತಿರುವಾಗ ಅವನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸ ಬೇಡ.
30 ಒಬ್ಬನು ನಿನಗೆ ಯಾವ ಕೇಡನ್ನೂ ಮಾಡ ದಿದ್ದರೆ ಅವನೊಂದಿಗೆ ಯಾವ ಕಾರಣವಿಲ್ಲದೆ ಜಗಳ ವಾಡಬೇಡ.
31 ಬಲಾತ್ಕಾರಿಯ ವಿಷಯದಲ್ಲಿ ನೀನು ಹೊಟ್ಟೇಕಿಚ್ಚುಪಡಬೇಡ, ಅವನ ಮಾರ್ಗಗಳಲ್ಲಿ ಯಾವದನ್ನೂ ನೀನು ಆರಿಸಿಕೊಳ್ಳಬೇಡ.
32 ವಕ್ರ ಬುದ್ಧಿಯವನು ಕರ್ತನಿಗೆ ಅಸಹ್ಯನಾಗಿದ್ದಾನೆ; ಆದರೆ ಆತನ ಗುಟ್ಟು ನೀತಿವಂತರೊಂದಿಗೆ ಇದೆ.
33 ಕರ್ತನ ಶಾಪವು ದುಷ್ಟರ ಮನೆಯಲ್ಲಿದೆ; ಆದರೆ ನ್ಯಾಯಸ್ಥರ ನಿವಾಸವನ್ನು ಆತನು ಆಶೀರ್ವದಿಸುತ್ತಾನೆ.
34 ಆತನು ನಿಶ್ಚಯವಾಗಿಯೂ ಪರಿಹಾಸ್ಯಕರನ್ನು ತಿರಸ್ಕರಿಸುತ್ತಾನೆ; ಆದರೆ ದೀನರಿಗೆ ಆತನು ಕೃಪೆಯನ್ನು ಕೊಡುತ್ತಾನೆ.
35 ಜ್ಞಾನಿಯು ಮಹಿಮೆಗೆ ಬಾಧ್ಯನಾಗುವನು, ಜ್ಞಾನ ಹೀನರ ಏಳಿಗೆಯು ಅವಮಾನವಾಗುವದು.
×

Alert

×