Bible Languages

Indian Language Bible Word Collections

Bible Versions

Books

Proverbs Chapters

Proverbs 31 Verses

Bible Versions

Books

Proverbs Chapters

Proverbs 31 Verses

1 ಅರಸನಾದ ಲೆಮೂವೇಲನ ಮಾತುಗಳು, ಅಂದರೆ ಅವನ ತಾಯಿಯು ಅವನಿಗೆ ಉಪದೇಶಿಸಿದ ಪ್ರವಾದನೆಯು.
2 ನನ್ನ ಮಗನೇ ಏನು? ನನ್ನ ಗರ್ಭಪುತ್ರನೇ ಏನು? ನನ್ನ ಪ್ರತಿಜ್ಞೆಯ ಮಗನೇ ಏನು?
3 ನಿನ್ನ ತ್ರಾಣವನ್ನು ಸ್ತ್ರೀಯರಲ್ಲಿ ಒಪ್ಪಿಸದಿರು, ಇಲ್ಲವೆ ಅರಸರನ್ನು ನಾಶಪಡಿಸುವ ದಾರಿಗಳಿಗೆ ತಿರುಗಬೇಡ.
4 ದ್ರಾಕ್ಷಾರಸವನ್ನು ಕುಡಿ ಯುವದು ರಾಜರಿಗೆ ಯೋಗ್ಯವಲ್ಲ; ಓ ಲೆಮೂ ವೇಲನೇ, ಅದು ಅರಸರಿಗೆ ಬೇಡ; ಇಲ್ಲವೆ ಪ್ರಭುಗ ಳಿಗೆ ಕುಡಿಯುವದು ಹಿತವಲ್ಲ;
5 ಕುಡಿದರೆ ಅವರು ಕಟ್ಟಿಳೆಯನ್ನು ಮರೆತು ಬಾಧಿತರಲ್ಲಿ ಯಾವನಿಗಾದರೂ ನ್ಯಾಯತೀರ್ಪನ್ನು ವ್ಯತ್ಯಾಸಮಾಡುತ್ತಾರೆ.
6 ನಾಶ ವಾಗುವದಕ್ಕೆ ಸಿದ್ಧವಾಗಿರುವವನಿಗೆ ಮದ್ಯವನ್ನೂ ಮನೋವ್ಯಥೆಪಡುವವರಿಗೆ ದ್ರಾಕ್ಷಾರಸವನ್ನೂ ಕೊಡು.
7 ಅವನು ಕುಡಿದು ತನ್ನ ಬಡತನವನ್ನು ಮರೆತುಬಿಡಲಿ; ತನ್ನ ಶ್ರೆಮೆಯನ್ನು ಇನ್ನು ಜ್ಞಾಪಕಕ್ಕೆ ತಾರದಿರಲಿ;
8 ಮೂಕರಿಗಾಗಿಯೂ ನಾಶವಾಗುವದಕ್ಕೆ ನೇಮಿಸಲ್ಪಟ್ಟ ವರೆಲ್ಲರಿಗಾಗಿಯೂ ನಿನ್ನ ಬಾಯನ್ನು ತೆರೆ.
9 ನಿನ್ನ ಬಾಯಿ ತೆರೆದು ನೀತಿಯಿಂದ ನ್ಯಾಯತೀರಿಸು; ದರಿದ್ರ ರಿಗಾಗಿಯೂ ದಿಕ್ಕಿಲ್ಲದವರಿಗಾಗಿಯೂ ವ್ಯಾಜ್ಯಮಾಡು.
10 ಗುಣವತಿಯಾದ ಸ್ತ್ರೀಯನ್ನು ಯಾವನು ಕಂಡು ಕೊಂಡಾನು? ಅವಳ ಕ್ರಯ ಹವಳಕ್ಕಿಂತಲೂ ಅಮೂ ಲ್ಯವೇ.
11 ತನಗೆ ಯಾವ ನಷ್ಟವೂ ಇರದಂತೆ ಅವಳ ಪತಿಯ ಹೃದಯವು ತನ್ನಲ್ಲಿ ನಿರ್ಭಯವಾಗಿ ಭರವಸೆ ಇಡುತ್ತದೆ.
12 ತನ್ನ ಜೀವಮಾನದಲ್ಲೆಲ್ಲಾ ಆಕೆಯು ಅವನಿಗೆ ಕೆಟ್ಟದ್ದನ್ನಲ್ಲ, ಒಳ್ಳೇದನ್ನೇ ಮಾಡುವಳು.
13 ಆಕೆಯು ಉಣ್ಣೆಯನ್ನೂ ಸಣಬನ್ನೂ ಹುಡುಕು ವವಳಾಗಿ ತನ್ನ ಕೈಗಳಿಂದ ಮನಃಪೂರ್ವಕವಾಗಿ ಕೆಲಸ ಮಾಡುತ್ತಾಳೆ.
14 ಆಕೆಯು ವರ್ತಕರ ಹಡಗುಗಳಂತೆ ಇದ್ದಾಳೆ; ಆಕೆಯು ದೂರದಿಂದ ತನ್ನ ಆಹಾರವನ್ನು ತರುತ್ತಾಳೆ.
15 ಆಕೆಯು ಇನ್ನೂ ಕತ್ತಲಿರುವಾಗಲೇ ಎದ್ದು ತನ್ನ ಮನೆಯವರಿಗೆ ಆಹಾರವನ್ನು ಕೊಟ್ಟು ತನ್ನ ದಾಸಿಯರಿಗೆ ಭತ್ಯವನ್ನು ಹಂಚುತ್ತಾಳೆ.
16 ಆಕೆಯು ಯೋಚಿಸಿ ಹೊಲವನ್ನು ಕೊಂಡುಕೊಳ್ಳುತ್ತಾಳೆ; ತನ್ನ ಕೈಕೆಲಸದ ಫಲದಿಂದ ಆಕೆಯು ದ್ರಾಕ್ಷಾಲತೆಗಳನ್ನು ನೆಡುತ್ತಾಳೆ.
17 ಆಕೆಯು ತನ್ನ ಬಲದಿಂದ ನಡುವನ್ನು ಕಟ್ಟಿಕೊಂಡು ತನ್ನ ತೋಳುಗಳನ್ನು ಶಕ್ತಿಗೊಳಿಸುತ್ತಾಳೆ.
18 ತನ್ನ ವ್ಯಾಪಾರದ ಸರಕು ಒಳ್ಳೇದೆಂದು ಆಕೆಯು ತಿಳು ಕೊಳ್ಳುತ್ತಾಳೆ; ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು.
19 ರಾಟೆಯ ಮೇಲೆ ಕೈಹಾಕಿ ತನ್ನ ಕೈಗಳು ಕದರನ್ನು ಹಿಡಿಯುತ್ತವೆ.
20 ಆಕೆಯು ಬಡವರಿಗಾಗಿ ಕೈ ಬಿಚ್ಚುತ್ತಾಳೆ; ಹೌದು, ದಿಕ್ಕಿಲ್ಲದವರಿಗೆ ಆಕೆಯು ಕೈ ನೀಡುತ್ತಾಳೆ.
21 ತನ್ನ ಮನೆಯವರಿಗಾಗಿ ಆಕೆಯು ಹಿಮಕ್ಕೆ ಭಯಪಡುವದಿಲ್ಲ; ಆಕೆಯ ಮನೆಯವ ರೆಲ್ಲರೂ ರಕ್ತಾಂಭರಗಳಿಂದ ಹೊದಿಸಲ್ಪಟ್ಟಿದ್ದಾರೆ.
22 ಆಕೆಯು ತನಗಾಗಿ ರತ್ನ ಕಂಬಳಿಗಳನ್ನು ಮಾಡು ತ್ತಾಳೆ; ಆಕೆಯ ಉಡುಪೋ ರೇಷ್ಮೆ ರಕ್ತಾಂಭರ.
23 ದೇಶದ ಹಿರಿಯರ ಮಧ್ಯದಲ್ಲಿ ತನ್ನ ಪತಿಯು ಕೂತಿ ರುವಾಗ ಅವನು ದ್ವಾರಗಳಲ್ಲಿ ಪ್ರಸಿದ್ಧನಾಗಿರುವನು.
24 ಆಕೆಯು ನಯವಾದ ನಾರುಮಡಿಯನ್ನು ನೇಯ್ದು ಮಾರಾಟ ಮಾಡುತ್ತಾಳೆ; ಆಕೆಯು ವರ್ತಕನಿಗೆ ನಡುಕಟ್ಟುಗಳನ್ನು ಒಪ್ಪಿಸುತ್ತಾಳೆ.
25 ಆಕೆಯ ಉಡುಪು ಬಲವೂ ಘನತೆಯೂ ಆಗಿವೆ; ಭವಿಷ್ಯತ್ತಿ ನಲ್ಲಿ ಆಕೆಯು ಸಂತೋಷಿಸುವಳು.
26 ಆಕೆಯು ಜ್ಞಾನದಿಂದ ತನ್ನ ಬಾಯಿ ತೆರೆಯುತ್ತಾಳೆ; ತನ್ನ ನಾಲಿಗೆಯಲ್ಲಿ ದಯೆಯ ಉಪದೇಶವಿರುವದು.
27 ಆಕೆಯು ತನ್ನ ಗೃಹಕೃತ್ಯಗಳ ನ್ನೆಲ್ಲಾ ಚೆನ್ನಾಗಿ ನೋಡಿಕೊಂಡವಳಾಗಿ ಸೋಮಾರಿ ತನದ ರೊಟ್ಟಿಯನ್ನು ತಿನ್ನುವದಿಲ್ಲ.
28 ಆಕೆಯ ಮಕ್ಕಳು ಎದ್ದು ಆಕೆಯನ್ನು ಧನ್ಯಳೆಂದು ಕರೆಯುತ್ತಾರೆ; ಆಕೆಯ ಪತಿಯು ಸಹ ಹೊಗಳುತ್ತಾನೆ.
29 ಅವನು--ಬಹು ಮಂದಿ ಕುಮಾರ್ತೆಯರು ಗುಣವತಿಯಾಗಿ ನಡೆದಿ ದ್ದಾರೆ; ಆದರೆ ನೀನು ಅವರೆಲ್ಲರಿಗಿಂತಲೂ ಶ್ರೇಷ್ಠಳು ಎಂದು ತನ್ನ ಪತಿಯು ಹೊಗಳುತ್ತಾನೆ.
30 ಸೌಂದ ರ್ಯವು ಮೋಸಕರ; ಲಾವಣ್ಯವು ವ್ಯರ್ಥ; ಕರ್ತನಿಗೆ ಭಯಪಡುವವಳು ಹೊಗಳಲ್ಪಡುವಳು.
31 ಆಕೆಯ ಕೈಕೆಲಸದ ಪ್ರತಿಫಲವನ್ನು ಸಲ್ಲಿಸಿರಿ; ದ್ವಾರಗಳಲ್ಲಿ ಆಕೆಯ ಕಾರ್ಯಗಳು ಆಕೆಯನ್ನು ಹೊಗಳಲಿ.

Proverbs 31:20 Kannada Language Bible Words basic statistical display

COMING SOON ...

×

Alert

×