1 | ಸಮಸ್ತ ಭೂಮಿಯೇ, ಕರ್ತನಿಗೆ ಜಯಧ್ವನಿ ಮಾಡಿರಿ, |
---|
2 | ಸಂತೋಷ ದಿಂದ ಕರ್ತನನ್ನು ಸೇವಿಸಿರಿ; ಹಾಡುತ್ತಾ ಆತನ ಮುಂದೆ ಬನ್ನಿರಿ. |
---|
3 | ಕರ್ತನೇ ದೇವರೆಂದು ತಿಳುಕೊಳ್ಳಿರಿ; ನಾವಲ್ಲ, ಆತನೇ ನಮ್ಮನ್ನು ಉಂಟು ಮಾಡಿದ್ದಾನೆ; ನಾವು ಆತನ ಜನರೂ ಆತನ ಹುಲ್ಲುಗಾವಲಿನ ಮಂದೆಯೂ ಆಗಿದ್ದೇವೆ. |
---|
4 | ಕೃತಜ್ಞತೆಯಿಂದ ಆತನ ಬಾಗಿಲುಗಳಿಗೂ ಸ್ತೋತ್ರದಿಂದ ಆತನ ಅಂಗಳಗಳಿಗೂ ಬನ್ನಿರಿ; ಆತನನ್ನು ಕೊಂಡಾಡಿರಿ, ಆತನ ಹೆಸರನ್ನು ಸ್ತುತಿಸಿರಿ. |
---|
5 | ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು. |
---|