Indian Language Bible Word Collections
Psalms 109:14
Psalms Chapters
Psalms 109 Verses
Books
Old Testament
New Testament
Bible Versions
English
Tamil
Hebrew
Greek
Malayalam
Hindi
Telugu
Kannada
Gujarati
Punjabi
Urdu
Bengali
Oriya
Marathi
Assamese
Books
Old Testament
New Testament
Psalms Chapters
Psalms 109 Verses
1
|
ನನ್ನ ಸ್ತೋತ್ರದ ದೇವರೇ, ಮೌನವಾಗಿರಬೇಡ. |
2
|
ದುಷ್ಟನ ಬಾಯಿ ಯನ್ನೂ ಮೋಸದ ಬಾಯಿಯನ್ನೂ ನನಗೆ ವಿರೋಧ ವಾಗಿ ತೆರೆದಿವೆ; ಸುಳ್ಳಿನ ನಾಲಿಗೆಯಿಂದ ನನಗೆ ವಿರೋಧವಾಗಿ ಮಾತಾಡಿದ್ದಾರೆ. |
3
|
ಹಗೆಯ ಮಾತು ಗಳಿಂದ ಅವರು ನನ್ನನ್ನು ಸುತ್ತಿಕೊಂಡು ನನಗೆ ವಿರೋಧವಾಗಿ ಕಾರಣವಿಲ್ಲದೆ ಯುದ್ಧಮಾಡಿದ್ದಾರೆ. |
4
|
ನನ್ನ ಪ್ರೀತಿಗೆ ಬದಲಾಗಿ ನನ್ನನ್ನು ಎದುರಿಸುತ್ತಾರೆ; ಆದರೆ ನಾನು ಪ್ರಾರ್ಥನೆಯಲ್ಲಿಯೇ ಇದ್ದೇನೆ. |
5
|
ನನ್ನ ಮೇಲಿಗೆ ಬದಲಾಗಿ ಕೇಡನ್ನೂ ಪ್ರೀತಿಗೆ ಬದಲಾಗಿ ಹಗೆಯನ್ನೂ ನನಗೆ ವಿರೋಧ ವಾಗಿ ಮಾಡಿದ್ದಾರೆ. |
6
|
ದುಷ್ಟನನ್ನು ಅವನ ಮೇಲೆ ನೇಮಿಸು; ಸೈತಾನನು ಅವನ ಬಲಗಡೆಯಲ್ಲಿ ನಿಂತುಕೊಳ್ಳಲಿ. |
7
|
ಅವನು ನ್ಯಾಯ ತೀರಿಸಲ್ಪಡುವಾಗ ದುಷ್ಟನೆಂದು ತೀರ್ಪು ಹೊಂದಲಿ. ಅವನ ಪ್ರಾರ್ಥನೆಯು ಪಾಪವಾಗಲಿ. |
8
|
ಅವನ ದಿವಸಗಳು ಸ್ವಲ್ಪವಾಗಿರಲಿ; ಅವನ ಉದ್ಯೋ ಗವನ್ನು ಬೇರೊಬ್ಬನು ತಕ್ಕೊಳ್ಳಲಿ. |
9
|
ಅವನ ಮಕ್ಕಳು ದಿಕ್ಕಿಲ್ಲದವರೂ ಹೆಂಡತಿ ವಿಧವೆಯೂ ಆಗಲಿ. |
10
|
ಅವನ ಮಕ್ಕಳು ಅಲೆದು ಅಲೆದು ಭಿಕ್ಷೆಬೇಡಿ ತಮ್ಮ ಹಾಳು ಸ್ಥಳಗಳೊಳಗಿಂದ ರೊಟ್ಟಿಯನ್ನು ಹುಡುಕಲಿ. |
11
|
ಸಾಲಗಾರನು ಅವನಿಗೆ ಇರುವದನ್ನೆಲ್ಲಾ ದೋಚಿ ಕೊಳ್ಳಲಿ; ಅನ್ಯರು ಅವನ ಕಷ್ಟಾರ್ಜಿತವನ್ನು ಸುಲು ಕೊಳ್ಳಲಿ. |
12
|
ಅವನಿಗೆ ಕರುಣೆ ತೋರಿಸುವವನು ಯಾವನೂ ಇಲ್ಲದೆ ಇರಲಿ; ಇಲ್ಲವೆ ದಿಕ್ಕಿಲ್ಲದ ಅವನ ಮಕ್ಕಳನ್ನು ಕರುಣಿಸುವವನು ಯಾವನೂ ಇಲ್ಲದೆ ಇರಲಿ. |
13
|
ಅವನ ಸಂತಾನವು ನಿರ್ನಾಮವಾಗಲಿ; ಎರಡನೇ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ. |
14
|
ಅವನ ತಂದೆಗಳ ಅಕ್ರಮವು ಕರ್ತನ ಮುಂದೆ ಜ್ಞಾಪಕವಾಗಲಿ; ಅವನ ತಾಯಿಯ ಪಾಪವು ಅಳಿದು ಹೋಗದಿರಲಿ. |
15
|
ಅವು ಯಾವಾಗಲೂ ಕರ್ತನ ಮುಂದೆ ಇರಲಿ; ಆತನು ಅವನ ಜ್ಞಾಪಕವನ್ನು ಭೂಮಿಯೊಳಗಿಂದ ಕಡಿದುಬಿಡಲಿ. |
16
|
ಅವನು ಕರುಣೆ ತೋರಿಸುವದನ್ನು ಮರೆತು ಹೃದಯದಲ್ಲಿ ನೊಂದವ ರನ್ನು ಕೊಲ್ಲುವದಕ್ಕೂ ಬಡವನನ್ನೂ ಕೊರತೆಯುಳ್ಳ ವವನ್ನೂ ಹಿಂಸಿಸಿದನು. |
17
|
ಅವನು ಶಾಪವನ್ನು ಪ್ರೀತಿ ಮಾಡಿದನು; ಅದು ಅವನಿಗೆ ಬರಲಿ. ಆಶೀರ್ವಾದಕ್ಕೆ ಮೆಚ್ಚಲಿಲ್ಲ; ಅದು ಅವನಿಗೆ ದೂರವಾಗಿರಲಿ. |
18
|
ಅವನು ತನ್ನ ವಸ್ತ್ರದಂತೆ ಶಾಪವನ್ನು ಹೊದ್ದುಕೊಂಡನು; ಅದು ನೀರಿನಂತೆ ಅವನ ಅಂತರಂಗದಲ್ಲಿಯೂ ಎಣ್ಣೆಯಂತೆ ಅವನ ಎಲುಬುಗಳಲ್ಲಿಯೂ ಸೇರಲಿ. |
19
|
ಅದು ಅವ ನಿಗೆ ತೊಟ್ಟುಕೊಂಡ ಅಂಗಿಯ ಹಾಗೆಯೂ ಯಾವಾ ಗಲೂ ನಡುವಿಗೆ ಕಟ್ಟುವ ನಡುಕಟ್ಟಿನ ಹಾಗೆಯೂ ಇರಲಿ. |
20
|
ಇದು ನನ್ನ ಪ್ರಾಣಕ್ಕೆ ವಿರೋಧವಾಗಿ ಕೇಡು ಮಾತಾಡುವ ನನ್ನ ಎದುರಾಳಿಗಳಿಗೆ ಕರ್ತನಿಂದ ಪ್ರತಿಫಲವಾಗಿರಲಿ. |
21
|
ಕರ್ತನಾದ ಓ ದೇವರೇ, ನಿನ್ನ ಹೆಸರಿಗೋಸ್ಕರ ನನಗೆ ಸಹಾಯಮಾಡು; ನಿನ್ನ ಕರುಣೆಯು ಒಳ್ಳೇದಾಗಿ ರುವದರಿಂದ ನನ್ನನ್ನು ಬಿಡಿಸು. |
22
|
ನಾನು ದೀನನೂ ಬಡವನೂ ಆಗಿದ್ದೇನೆ. ನನ್ನ ಹೃದಯವು ಅಂತರಂಗದಲ್ಲಿ ಗಾಯಗೊಂಡಿದೆ. |
23
|
ನಾನು ಸಂಜೆಯ ನೆರಳಿನಂತೆ ಗತಿಸಿಹೋಗುತ್ತಿದ್ದೇನೆ; ಮಿಡತೆಯ ಹಾಗೆ ಬಡಿಯಲ್ಪ ಟ್ಟಿದ್ದೇನೆ; |
24
|
ನನ್ನ ಮೊಣಕಾಲುಗಳು ಉಪವಾಸದಿಂದ ಬಲಹೀನವಾಗಿವೆ; ನನ್ನ ಮಾಂಸಕ್ಕೆ ಸಾರವಿಲ್ಲದೆ ಹೋಯಿತು. |
25
|
ನಾನು ಅವರಿಗೆ ನಿಂದೆಯಾಗಿದ್ದೇನೆ; ನನ್ನನ್ನು ನೋಡಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾರೆ. |
26
|
ನನ್ನ ದೇವರಾದ ಓ ಕರ್ತನೇ, ನನಗೆ ಸಹಾಯ ಮಾಡು; ನಿನ್ನ ಕೃಪೆಯ ಪ್ರಕಾರ ನನ್ನನ್ನು ರಕ್ಷಿಸು. |
27
|
ಕರ್ತನೇ, ಇದು ನಿನ್ನ ಕೈ ಎಂದೂ ಇದನ್ನು ನೀನು ಮಾಡಿದ್ದೀ ಎಂದೂ ಅವರು ತಿಳುಕೊಳ್ಳಲಿ. |
28
|
ಅವರು ಶಪಿಸಲಿ; ಆದರೆ ನೀನು ಆಶೀರ್ವದಿಸು; ಅವರು ಎದ್ದು ನಾಚಿಕೆಪಡಲಿ; ಆದರೆ ನಿನ್ನ ಸೇವಕನು ಸಂತೋ ಷಿಸಲಿ. |
29
|
ನನ್ನ ಎದುರಾಳಿಗಳು ಅವಮಾನವನ್ನು ಹೊದ್ದುಕೊಂಡು ತಮ್ಮ ನಾಚಿಕೆಯನ್ನು ಹೊದಿಕೆಯಂತೆ ತೊಟ್ಟುಕೊಳ್ಳಲಿ. |
30
|
ಕರ್ತನನ್ನು ನನ್ನ ಬಾಯಿಯಿಂದ ಬಹಳವಾಗಿ ಕೊಂಡಾಡುವೆನು; ಹೌದು, ಅನೇಕರ ಮಧ್ಯದಲ್ಲಿ ಆತನನ್ನು ಸ್ತುತಿಸುವೆನು. |
31
|
ಬಡವನ ಬಲಪಾರ್ಶ್ವದಲ್ಲಿ ಅವನ ಪ್ರಾಣಕ್ಕೆ ನ್ಯಾಯತೀರಿಸುವ ವರೊಳಗಿಂದ ಅವನನ್ನು ರಕ್ಷಿಸುವದಕ್ಕೆ ಆತನು ನಿಂತುಕೊಳ್ಳುವನು. |