1
|
ಕರ್ತನನ್ನು ಸ್ತುತಿಸಿರಿ; ಕರ್ತನ ಸೇವಕರೇ; ಸ್ತುತಿಸಿರಿ; ಕರ್ತನ ಹೆಸರನ್ನು ಸ್ತುತಿಸಿರಿ; |
2
|
ಇಂದಿನಿಂದ ಯುಗಯುಗಕ್ಕೂ ಕರ್ತನ ಹೆಸರಿಗೆ ಸ್ತುತಿಯುಂಟಾಗಲಿ. |
3
|
ಸೂರ್ಯೋದಯ ದಿಂದ ಅದರ ಅಸ್ತಮಾನದ ವರೆಗೂ ಕರ್ತನ ಹೆಸರು ಸ್ತುತಿಸಲ್ಪಡತಕ್ಕದ್ದು. |
4
|
ಕರ್ತನು ಎಲ್ಲಾ ಜನಾಂಗಗಳ ಮೇಲೆ ಉನ್ನತವಾದವನು; ಆತನ ಮಹಿಮೆಯು ಆಕಾ ಶಗಳ ಮೇಲೆ ಇದೆ. |
5
|
ನಮ್ಮ ದೇವರಾದ ಕರ್ತನ ಹಾಗೆ ಯಾರಿದ್ದಾರೆ? ಉನ್ನತದಲ್ಲಿ ಆತನು ವಾಸಿಸುತ್ತಾನೆ. |
6
|
ಆಕಾಶದ ಮೇಲೆಯೂ ಭೂಮಿಯ ಮೇಲೆಯೂ ದೃಷ್ಟಿ ಇಡುವದಕ್ಕೆ ಆತನು ತನ್ನನ್ನು ತಗ್ಗಿಸಿಕೊಳ್ಳುತ್ತಾನೆ. |
7
|
ಅಧಿಪತಿಗಳ ಸಂಗಡವೂ ತನ್ನ ಜನರ ಅಧಿಪತಿಗಳ ಸಂಗಡವೂ ಕುಳ್ಳಿರಿಸುವದಕ್ಕೆ, |
8
|
ಧೂಳಿನೊಳಗಿಂದ ದರಿದ್ರನನ್ನು ಏಳಮಾಡಿ ತಿಪ್ಪೆಯೊಳಗಿಂದ ಬಡವನನ್ನು ಎತ್ತುತ್ತಾನೆ. |
9
|
ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ. |
Psalms 113:1 Kannada Language Bible Words basic statistical display
COMING SOON ...