1
|
ನಮಗಲ್ಲ, ಓ ಕರ್ತನೇ, ನಮಗಲ್ಲ, ನಿನ್ನ ಹೆಸರಿಗೆ ಮಾತ್ರ, ನಿನ್ನ ಕರುಣೆಯ ನಿಮಿತ್ತವೂ ನಿನ್ನ ಸತ್ಯದ ನಿಮಿತ್ತವೂ ಘನವುಂಟಾಗಲಿ. |
2
|
ಅವರ ದೇವರು ಎಲ್ಲಿ ಎಂದು ಅನ್ಯ ಜನಾಂಗಗಳು ಯಾಕೆ ಹೇಳಬೇಕು? |
3
|
ನಮ್ಮ ದೇವರು ಪರಲೋಕದಲ್ಲಿದ್ದಾನೆ; ತಾನು ಇಚ್ಚಿಸುವ ದನ್ನೆಲ್ಲಾ ಮಾಡುತ್ತಾನೆ. |
4
|
ಅವರ ವಿಗ್ರಹಗಳು ಬೆಳ್ಳಿಯೂ ಬಂಗಾರವೂ ಮನುಷ್ಯನ ಕೈಕೆಲಸವೂ ಆಗಿವೆ. |
5
|
ಅವುಗಳಿಗೆ ಬಾಯಿ ಉಂಟು; ಮಾತಾಡುವದಿಲ್ಲ; ಕಣ್ಣುಗಳುಂಟು; ನೋಡು ವದಿಲ್ಲ. |
6
|
ಕಿವಿಗಳುಂಟು; ಕೇಳುವದಿಲ್ಲ. ಮೂಗು ಉಂಟು; ಮೂಸುವದಿಲ್ಲ. |
7
|
ಕೈಗಳುಂಟು; ಮುಟ್ಟುವ ದಿಲ್ಲ. ಕಾಲುಗಳುಂಟು; ನಡೆಯುವದಿಲ್ಲ. ತಮ್ಮ ಗಂಟಲಿನಿಂದ ಮಾತನಾಡುವದಿಲ್ಲ, |
8
|
ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಡುವವ ರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ. |
9
|
ಓ ಇಸ್ರಾಯೇಲೇ, ಕರ್ತನಲ್ಲಿ ಭರವಸವಿಡು; ಆತನೇ ಅವರ ಸಹಾಯವೂ ಗುರಾಣಿಯೂ ಆಗಿ ದ್ದಾನೆ. |
10
|
ಆರೋನನ ಮನೆಯವರೇ, ಕರ್ತನಲ್ಲಿ ಭರವಸವಿಡಿರಿ; ಆತನೇ ಅವರ ಸಹಾಯವೂ ಗುರಾ ಣಿಯೂ ಆಗಿದ್ದಾನೆ. |
11
|
ಕರ್ತನಿಗೆ ಭಯಪಡುವವರೇ, ಕರ್ತನಲ್ಲಿ ಭರವಸವಿಡಿರಿ; ಆತನೇ ಅವರ ಸಹಾ ಯವೂ ಗುರಾಣಿಯೂ ಆಗಿದ್ದಾನೆ. |
12
|
ಕರ್ತನು ನಮ್ಮನ್ನು ಜ್ಞಾಪಕಮಾಡಿಕೊಂಡಿದ್ದಾನೆ,ಆತನು ನಮ್ಮನ್ನು ಆಶೀರ್ವದಿಸುವನು; ಇಸ್ರಾಯೇಲಿನ ಮನೆಯನ್ನು ಆಶೀರ್ವದಿಸುವನು; ಆರೋನನ ಮನೆ ಯನ್ನು ಆಶೀರ್ವದಿಸುವನು. |
13
|
ಕರ್ತನಿಗೆ ಭಯ ಪಡುವವರಾದ ಹಿರಿಯರ ಸಂಗಡ ಕಿರಿಯರನ್ನು ಆಶೀರ್ವದಿಸುವನು. |
14
|
ಕರ್ತನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಅಭಿವೃದ್ಧಿ ಮಾಡುವನು. |
15
|
ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಕರ್ತನಿಂದ ನೀವು ಆಶೀರ್ವದಿಸಲ್ಪಟ್ಟವರು. |
16
|
ಆಕಾಶಗಳು ಕರ್ತನವುಗಳೇ. ಆತನು ಭೂಮಿ ಯನ್ನು ನರಪುತ್ರರಿಗೆ ಕೊಟ್ಟಿದ್ದಾನೆ. |
17
|
ಸತ್ತವರೂ ಮೌನಕ್ಕೆ ಇಳಿದವರೆಲ್ಲರೂ ಕರ್ತನನ್ನು ಸ್ತುತಿಸುವ ದಿಲ್ಲ. |
18
|
ನಾವಾದರೋ ಇಂದಿನಿಂದ ಯುಗಯುಗಕ್ಕೂ ಕರ್ತನನ್ನು ಸ್ತುತಿಸುವೆವು. ಕರ್ತನನ್ನು ಸ್ತುತಿಸಿರಿ. |
Psalms 115:1 Kannada Language Bible Words basic statistical display
COMING SOON ...