1
|
ಓ ಕರ್ತನೇ, ಆಗಾಧಗಳೊಳಗಿಂದ ನಿನಗೆ ಕೂಗುತ್ತೇನೆ. |
2
|
ಕರ್ತನೇ, ನನ್ನ ಸ್ವರವನ್ನು ಕೇಳು; ನಿನ್ನ ಕಿವಿಗಳು ನನ್ನ ವಿಜ್ಞಾಪನೆಗಳ ಮೊರೆಯನ್ನು ಆಲೈಸುತ್ತಾ ಇರಲಿ. |
3
|
ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಓ ಕರ್ತನೇ, ಯಾರು ನಿಲ್ಲುವರು? |
4
|
ಆದರೆ ಜನರು ನಿನಗೆ ಭಯಪಡುವ ಹಾಗೆ ನಿನ್ನಲ್ಲಿ ಕ್ಷಮಾಪಣೆ ಉಂಟು. |
5
|
ಕರ್ತನನ್ನು ನಿರೀಕ್ಷಿಸುತ್ತೇನೆ; ನನ್ನ ಪ್ರಾಣವು ನಿರೀಕ್ಷಿಸುತ್ತದೆ; ಆತನ ವಾಕ್ಯದಲ್ಲಿ ನಿರೀಕ್ಷಿಸುತ್ತೇನೆ. |
6
|
ಉದಯಕ್ಕಾಗಿ ಕಾದುಕೊಳ್ಳುವವ ರಿಗಿಂತ ಹೌದು, ಉದಯಕ್ಕಾಗಿ ಕಾದುಕೊಳ್ಳುವವರಿ ಗಿಂತ ನನ್ನ ಪ್ರಾಣವು ಕರ್ತನಿಗಾಗಿ ನಿರೀಕ್ಷಿಸುತ್ತದೆ. |
7
|
ಇಸ್ರಾಯೇಲು ಕರ್ತನಲ್ಲಿ ನಿರೀಕ್ಷಿಸಲಿ; ಕರ್ತನ ಬಳಿಯಲ್ಲಿ ಕರುಣೆಯೂ ಆತನಲ್ಲಿ ವಿಮೋಚನೆಯೂ ಬಹಳವಾಗಿದೆ. |
8
|
ಆತನು ಇಸ್ರಾಯೇಲನ್ನು ಅದರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವನು. |
Psalms 130:1 Kannada Language Bible Words basic statistical display
COMING SOON ...