1
|
ಬಾಬೆಲಿನ ನದಿಗಳ ಹತ್ತಿರ ನಾವು ಕೂತುಕೊಂಡು ಹೌದು, ಚೀಯೋ ನನ್ನು ಜ್ಞಾಪಕಮಾಡಿಕೊಂಡಾಗ ನಾವು ಅತ್ತೆವು. |
2
|
ಅದರ ನಡುವೆ ಇರುವ ನೀರವಂಜಿ ಮರಗಳ ಮೇಲೆ ನಮ್ಮ ಕಿನ್ನರಿಗಳನ್ನು ತೂಗಹಾಕಿದೆವು. |
3
|
ಅಲ್ಲಿ ನಮ್ಮನ್ನು ಸೆರೆಹಿಡಿದು ಹಾಳುಮಾಡಿದವರು--ನಮ್ಮ ಸಂತೋಷ ಕ್ಕಾಗಿ ಒಂದು ಹಾಡನ್ನು ಹಾಡಿರಿ ಅಂದರು. |
4
|
ಅನ್ಯದೇಶದಲ್ಲಿ ನಾವು ಕರ್ತನ ಹಾಡನ್ನು ಹಾಡು ವದು ಹೇಗೆ? |
5
|
ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ ನನ್ನ ಬಲಗೈ ಮರೆತುಹೋಗಲಿ. |
6
|
ನಾನು ನಿನ್ನನ್ನು ಜ್ಞಾಪಕಮಾಡಿಕೊಳ್ಳದೆ ಯೆರೂಸ ಲೇಮನ್ನು ನನ್ನ ಮುಖ್ಯ ಸಂತೋಷಕ್ಕಿಂತ ಅದನ್ನು ಹೆಚ್ಚಿಸದಿದ್ದರೆ ನನ್ನ ನಾಲಿಗೆಯು ನನ್ನ ಅಂಗಳಕ್ಕೆ ಹತ್ತಲಿ. |
7
|
ಹಾಳುಮಾಡಿರಿ, ಅದರ ಅಸ್ತಿವಾರದ ವರೆಗೆ ಹಾಳು ಮಾಡಿರಿ ಎಂದು ಹೇಳಿದ ಎದೋಮಿನ ಮಕ್ಕಳನ್ನು ಯೆರೂಸಲೇಮಿನ ದಿವಸದಲ್ಲಿ ಕರ್ತನೇ, ಜ್ಞಾಪಕ ಮಾಡಿಕೋ. |
8
|
ಹಾಳಾಗಲಿಕ್ಕಿರುವ ಬಾಬೆಲಿನ ಮಗಳೇ, ನೀನು ನಮಗೆ ಮಾಡಿದ ಕಾರ್ಯಕ್ಕೆ ಪ್ರತೀಕಾರ ವನ್ನು ನಿನಗೆ ಸಲ್ಲಿಸುವವನು ಧನ್ಯನು. |
9
|
ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು. |
Psalms 137:1 Kannada Language Bible Words basic statistical display
COMING SOON ...