1
|
ಕರ್ತನನ್ನು ನೀವು ಸ್ತುತಿಸಿರಿ, ಕರ್ತನನ್ನು ಆಕಾಶದಿಂದ ನೀವು ಸ್ತುತಿಸಿರಿ; ಉನ್ನತವಾದವುಗಳಲ್ಲಿ ಆತನನ್ನು ಸ್ತುತಿಸಿರಿ. |
2
|
ಆತನ ದೂತರೆಲ್ಲರೇ, ಆತನನ್ನು, ಸ್ತುತಿಸಿರಿ; ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ; |
3
|
ಸೂರ್ಯ ಚಂದ್ರರೇ, ಆತನನ್ನು ಸ್ತುತಿಸಿರಿ; ಹೊಳೆಯುವ ನಕ್ಷತ್ರಗಳೇ, ಆತ ನನ್ನು ಸ್ತುತಿಸಿರಿ. |
4
|
ಆಕಾಶಗಳ ಆಕಾಶಗಳೇ, ಆಕಾಶಗಳ ಮೇಲೆ ಇರುವ ನೀರುಗಳೇ, ಆತನನ್ನು ಸ್ತುತಿಸಿರಿ. |
5
|
ಕರ್ತನ ಹೆಸರನ್ನು ಅವು ಸ್ತುತಿಸಲಿ; ಆತನು ಆಜ್ಞಾ ಪಿಸಲು ಅವು ನಿರ್ಮಿಸಲ್ಪಟ್ಟವು. |
6
|
ಆತನು ಅವುಗಳನ್ನು ಯುಗಯುಗಗಳಿಗೂ ಸ್ಥಾಪಿಸಿದ್ದಾನೆ; ಆಜ್ಞೆಯನ್ನು ಕೊಟ್ಟಿ ದ್ದಾನೆ, ಅದು ವಿಾರಿ ಹೋಗುವದಿಲ್ಲ. |
7
|
ಭೂಮಿಯಿಂದ ಕರ್ತನನ್ನು ಸ್ತುತಿಸಿರಿ; ಎಲ್ಲಾ ಅಗಾಧಗಳೇ, |
8
|
ಬೆಂಕಿಯೇ, ಕಲ್ಮಳೆಯೇ, ಹಿಮವೇ, ಹಬೆಯೇ, ಆತನ ವಾಕ್ಯವನ್ನು ಕೈಕೊಳ್ಳುವ ಬಿರು ಗಾಳಿಯೇ, |
9
|
ಬೆಟ್ಟಗಳೇ, ಎಲ್ಲಾ ಗುಡ್ಡಗಳೇ, ಹಣ್ಣಿನ ಮರಗಳೇ, ಎಲ್ಲಾ ದೇವದಾರುಗಳೇ, |
10
|
ಮೃಗಗಳೇ, ಎಲ್ಲಾ ಪಶುಗಳೇ, ಹರಿದಾಡುವ ಜೀವಜಂತುಗಳೇ ಹಾರುವ ಪಕ್ಷಿಗಳೇ, |
11
|
ಭೂರಾಜರೇ, ಎಲ್ಲಾ ಪ್ರಜೆ ಗಳೇ, ಪ್ರಧಾನರೇ, ಭೂಮಿಯ ಎಲ್ಲಾ ನ್ಯಾಯಾಧಿ ಪತಿಗಳೇ, |
12
|
ಪ್ರಾಯಸ್ಥರೇ, ಕನ್ಯೆಯರೇ, ಮಕ್ಕಳೇ, ಮುದುಕರೇ, |
13
|
ಕರ್ತನ ಹೆಸರನ್ನು ಸ್ತುತಿಸಿರಿ; ಆತನ ಹೆಸರು ಮಾತ್ರ ಶ್ರೇಷ್ಠವಾಗಿದೆ; ಆತನ ಮಹಿಮೆಯು ಭೂಮ್ಯಾಕಾಶಗಳ ಮೇಲೆ ಅದೆ. |
14
|
ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ. |
Psalms 148:1 Kannada Language Bible Words basic statistical display
COMING SOON ...