1
|
ಕರ್ತನೇ, ನಿನ್ನ ಗುಡಾರದಲ್ಲಿ ತಂಗುವವನು ಯಾರು? ನಿನ್ನ ಪರಿಶುದ್ಧ ಪರ್ವತ ದಲ್ಲಿ ವಾಸಮಾಡುವವನು ಯಾರು? |
2
|
ಯಥಾರ್ಥವಾಗಿ ನಡೆದು ನೀತಿಯನ್ನು ನಡಿಸಿ ತನ್ನ ಹೃದಯದಲ್ಲಿ ಸತ್ಯವನ್ನಾಡುವವನೇ. |
3
|
ಅವನು ತನ್ನ ನಾಲಿಗೆಯಿಂದ ಚಾಡಿ ಹೇಳುವದಿಲ್ಲ; ತನ್ನ ನೆರೆಯವನನ್ನು ನಿಂದಿಸು ವದಿಲ್ಲ; |
4
|
ಅವನ ಕಣ್ಣುಗಳಿಗೆ ನೀಚನು ತಿರಸ್ಕರಿಸಲ್ಪ ಟ್ಟಿದ್ದಾನೆ. ಆದರೆ ಕರ್ತನಿಗೆ ಭಯಪಡುವವರನ್ನು ಗೌರವಿಸುತ್ತಾನೆ, ಆಣೆಯಿಂದ ನಷ್ಟವಾದರೂ ಬದಲಾ ಯಿಸದವನು. |
5
|
ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು. |
Psalms 15:1 Kannada Language Bible Words basic statistical display
COMING SOON ...