Indian Language Bible Word Collections
Psalms 20:1
Psalms Chapters
Psalms 20 Verses
Books
Old Testament
New Testament
Bible Versions
English
Tamil
Hebrew
Greek
Malayalam
Hindi
Telugu
Kannada
Gujarati
Punjabi
Urdu
Bengali
Oriya
Marathi
Assamese
Books
Old Testament
New Testament
Psalms Chapters
Psalms 20 Verses
1
|
ಕರ್ತನು ಇಕ್ಕಟ್ಟಿನ ದಿವಸದಲ್ಲಿ ನಿನ್ನ ಪ್ರಾರ್ಥನೆಯನ್ನು ಕೇಳಲಿ; ಯಾಕೋಬನ ದೇವರ ಹೆಸರು ನಿನ್ನನ್ನು ಕಾಪಾಡಲಿ. |
2
|
ಪರಿಶುದ್ಧ ಸ್ಥಳದೊಳಗಿಂದ ನಿನಗೆ ಸಹಾಯ ಕಳುಹಿಸಲಿ; ಚೀಯೋ ನಿನಿಂದ ನಿನ್ನನ್ನು ಬಲಪಡಿಸಲಿ. |
3
|
ನಿನ್ನ ಅರ್ಪಣೆಗಳನ್ನೆಲ್ಲಾ ಜ್ಞಾಪಕಮಾಡಿ ನಿನ್ನ ದಹನಬಲಿಯನ್ನು ಅಂಗೀಕರಿಸಲಿ. ಸೆಲಾ. |
4
|
ನಿನ್ನ ಸ್ವಂತ ಹೃದಯದ ಪ್ರಕಾರ ನಿನಗೆ ಕೊಡಲಿ; ನಿನ್ನ ಆಲೋ ಚನೆಯನ್ನೆಲ್ಲಾ ಪೂರೈಸಲಿ. |
5
|
ನಾವು ನಿನ್ನ ರಕ್ಷಣೆಯಲ್ಲಿ ಹರ್ಷಿಸಿ ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು; ಕರ್ತನು ನಿನ್ನ ಬಿನ್ನಹಗಳನ್ನೆಲ್ಲಾ ಪೂರೈ ಸಲಿ. |
6
|
ಕರ್ತನು ತನ್ನ ಅಭಿಷಕ್ತನನ್ನು ರಕ್ಷಿಸುತ್ತಾ ನೆಂದೂ ತನ್ನ ಪರಿಶುದ್ಧ ಪರಲೋಕದೊಳಗಿಂದ ತನ್ನ ಬಲಗೈಯ ರಕ್ಷಣಕರವಾದ ಪರಾಕ್ರಮದಿಂದ ಅವನಿಗೆ ಉತ್ತರ ಕೊಡುವನೆಂದೂ ಈಗ ನಾನು ಬಲ್ಲೆನು. |
7
|
ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳ ಲ್ಲಿಯೂ ಭರವಸವಿಡುತ್ತಾರೆ; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರನ್ನು ಜ್ಞಾಪಕಮಾಡುತ್ತೇವೆ. |
8
|
ಅವರು ಬೊಗ್ಗಿ ಬೀಳುತ್ತಾರೆ; ಆದರೆ ನಾವು ಎದ್ದು ನಿಂತುಕೊಳ್ಳುತ್ತೇವೆ. |
9
|
ಕರ್ತನೇ, ರಕ್ಷಿಸು; ನಾವು ಕರೆ ಯುವಾಗ ಅರಸನು ನಮಗೆ ಉತ್ತರ ಕೊಡಲಿ. |