Bible Languages

Indian Language Bible Word Collections

Bible Versions

Books

Psalms Chapters

Psalms 22 Verses

Bible Versions

Books

Psalms Chapters

Psalms 22 Verses

1 ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯ ಮಾಡದೆಯೂ ನನ್ನ ಕೂಗಿಗೆ ಕಿವಿ ಗೊಡದೆಯೂ ದೂರವಾಗಿದ್ದೀ.
2 ಓ ನನ್ನ ದೇವರೇ, ಹಗಲಿನಲ್ಲಿ ಕರೆಯುತ್ತೇನೆ; ನೀನು ಉತ್ತರ ಕೊಡುವದಿಲ್ಲ; ರಾತ್ರಿಯಲ್ಲಿಯೂ ನಾನು ಮೌನವಾಗಿರು ವದಿಲ್ಲ.
3 ಆದರೆ ನೀನು ಪರಿಶುದ್ಧನಾಗಿದ್ದೀ; ನೀನು ಇಸ್ರಾಯೇಲಿನ ಸ್ತೋತ್ರಗಳಲ್ಲಿ ವಾಸ ಮಾಡುವಾ ತನು.
4 ನಿನ್ನಲ್ಲಿ ನಮ್ಮ ಪಿತೃಗಳು ಭರವಸವಿಟ್ಟರು; ಅವರು ಭರವಸವಿಟ್ಟದ್ದರಿಂದ ನೀನು ಅವರನ್ನು ತಪ್ಪಿ ಸಿದಿ.
5 ನಿನಗೆ ಅವರು ಮೊರೆ ಇಟ್ಟದ್ದರಿಂದ ತಪ್ಪಿಸ ಲ್ಪಟ್ಟರು; ನಿನ್ನಲ್ಲಿ ಭರವಸವಿಟ್ಟದ್ದರಿಂದ ಅವರು ನಾಚಿಕೆ ಪಡಲಿಲ್ಲ.
6 ನಾನು ಹುಳವೇ, ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟವನೂ ಜನರಿಂದ ತಿರಸ್ಕರಿಸಲ್ಪಟ್ಟವನೂ ಆಗಿದ್ದೇನೆ.
7 ನನ್ನನ್ನು ನೋಡುವವರೆಲ್ಲರು ನನ್ನನ್ನು ಗೇಲಿ ಮಾಡಿ ನಗುವರು, ಅವರು ತುಟಿ ಅಗಲಮಾಡಿ ತಲೆ ಆಡಿಸುತ್ತಾ--
8 ಆತನು ಕರ್ತನ ಮೇಲೆ ಭರವಸ ವಿಟ್ಟಿದ್ದಾನಲ್ಲಾ; ಆತನು ಅವನನ್ನು ತಪ್ಪಿಸಿ ಅವನನ್ನು ಬಿಡಿಸಲಿ; ಆತನು ಅವನಲ್ಲಿ ಸಂತೋಷಪಡುತ್ತಾ ನಲ್ಲಾ ಅನ್ನುತ್ತಾರೆ.
9 ಆದರೆ ನೀನು ಗರ್ಭದಿಂದ ನನ್ನನ್ನು ತೆಗೆದಿ; ನನ್ನ ತಾಯಿಯ ಎದೆಯಲ್ಲಿದ್ದಾಗ ನಾನು ನಿರೀಕ್ಷಿಸುವಂತೆ ಮಾಡಿದಿ.
10 ಹುಟ್ಟಿದಂದಿನಿಂದ ನೀನೇ ನನಗೆ ಆಧಾರ; ನನ್ನ ತಾಯಿಯ ಹೊಟ್ಟೆಯಿಂದ ನನ್ನನ್ನು ಬರಮಾಡಿದ ನನ್ನ ದೇವರು ನೀನೇ ಆಗಿದ್ದೀ.
11 ನನ್ನಿಂದ ದೂರವಾಗಿರಬೇಡ; ಇಕ್ಕಟ್ಟು ಸವಿಾಪ ವಾಗಿದೆ; ನನಗೆ ಸಹಾಯಕನು ಯಾರೂ ಇಲ್ಲ.
12 ಬಹಳ ಹೋರಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವಾದ ಹೋರಿಗಳು ನನ್ನನ್ನು ಮುತ್ತಿ ಕೊಂಡಿವೆ.
13 ಹರಿದು ಬಿಡುವಂಥ ಗರ್ಜಿಸುವ ಸಿಂಹದ ಹಾಗೆ ನನ್ನ ಮೇಲೆ ತಮ್ಮ ಬಾಯಿ ತೆರೆದಿ ದ್ದಾರೆ.
14 ನಾನು ನೀರಿನ ಹಾಗೆ ಹೊಯ್ಯಲ್ಪಟ್ಟಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿವೆ; ನನ್ನ ಹೃದ ಯವು ಮೇಣದ ಹಾಗೆ ನನ್ನ ಕರುಳುಗಳ ಮಧ್ಯದಲ್ಲಿ ಕರಗಿಹೋಗಿದೆ.
15 ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ.
16 ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.
17 ನನ್ನ ಎಲು ಬುಗಳನ್ನೆಲ್ಲಾ ಎಣಿಸುತ್ತೇನೆ; ಅವರು ನನ್ನನ್ನು ದೃಷ್ಟಿಸಿ ನೋಡುತ್ತಾರೆ.
18 ನನ್ನ ವಸ್ತ್ರಗಳನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ. ನನ್ನ ಅಂಗಿಗೋಸ್ಕರ ಚೀಟು ಹಾಕುತ್ತಾರೆ.
19 ಆದರೆ ಓ ಕರ್ತನೇ, ನೀನು ನನ್ನಿಂದ ದೂರವಾಗಿರಬೇಡ; ಓ ನನ್ನ ಬಲವೇ, ನನ್ನ ಸಹಾಯಕ್ಕೆ ತ್ವರೆಪಡು.
20 ನನ್ನ ಪ್ರಾಣವನ್ನು ಕತ್ತಿಯಿಂದಲೂ ನನಗೆ ಪ್ರಿಯವಾದದ್ದನ್ನು ನಾಯಿಯ ಬಲದಿಂದಲೂ ಬಿಡಿಸು.
21 ನನ್ನನ್ನು ಸಿಂಹದ ಬಾಯಿಂದ ರಕ್ಷಿಸು; ನನ್ನನ್ನು ಕಾಡುಕೋಣಗಳ ಕೊಂಬುಗಳಿಂದ ತಪ್ಪಿಸಿ ಉತ್ತರ ಕೊಟ್ಟೆಯಲ್ಲಾ.
22 ನಾನು ನಿನ್ನ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು; ಕೂಟದ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.
23 ಕರ್ತನಿಗೆ ಭಯಪಡುವವರೇ, ಆತನನ್ನು ಸ್ತುತಿಸಿರಿ; ಯಾಕೋಬಿನ ಎಲ್ಲಾ ಸಂತಾನದವರೇ, ಆತನನ್ನು ಘನಪಡಿಸಿರಿ; ಇಸ್ರಾಯೇಲಿನ ಎಲ್ಲಾ ಸಂತಾನದವರೇ, ಆತನಿಗೆ ಭಯಪಡಿರಿ.
24 ಸಂಕಟ ಪಡುವವನ ಸಂಕಟ ವನ್ನು ಆತನು ತಿರಸ್ಕರಿಸಲಿಲ್ಲ, ಅಸಹ್ಯಿಸಲಿಲ್ಲ; ತನ್ನ ಮುಖವನ್ನು ಅವನಿಂದ ಮರೆಮಾಡಲಿಲ್ಲ; ಆದರೆ ಅವನು ಮೊರೆಯಿಡಲು ಆತನು ಕೇಳಿದನು.
25 ಮಹಾ ಸಭೆಯಲ್ಲಿ ನಿನ್ನನ್ನು ಕುರಿತು ನನ್ನ ಸ್ತೋತ್ರವು ನಿನಗಿ ರುವದು; ನನ್ನ ಪ್ರಮಾಣಗಳನ್ನು ಆತನಿಗೆ ಭಯಪಡು ವವರ ಮುಂದೆ ಸಲ್ಲಿಸುವೆನು.
26 ದೀನರು ಉಂಡು ತೃಪ್ತಿಯಾಗುವರು; ಕರ್ತನನ್ನು ಹುಡುಕುವವರು ಆತನನ್ನು ಸ್ತುತಿಸುವರು; ನಿಮ್ಮ ಹೃದಯವು ಎಂದೆಂದಿಗೂ ಬದುಕುವದು.
27 ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.
28 ರಾಜ್ಯವು ಕರ್ತನದೇ; ಜನಾಂಗಗಳಲ್ಲಿ ಆಳುವಾತನು ಆತನೇ.
29 ಭೂಮಿಯ ಪುಷ್ಟರೆಲ್ಲರೂ ಉಂಡು ಆರಾಧಿಸುವರು; ತಮ್ಮ ಪ್ರಾಣವನ್ನು ಬದುಕಿಸಲಾರದೆ ಧೂಳಿನಲ್ಲಿ ಇಳಿಯುವವರೆಲ್ಲರೂ ಆತನ ಮುಂದೆ ಅಡ್ಡಬೀಳುವರು.
30 ಒಂದು ಸಂತಾನವು ಆತನನ್ನು ಸೇವಿಸುವದು. ಅದು ಕರ್ತನ ಸಂತತಿ ಎಂದು ಎಣಿಸ ಲ್ಪಡುವದು.
31 ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು.

Psalms 22:31 Kannada Language Bible Words basic statistical display

COMING SOON ...

×

Alert

×