1
|
ನಾನು ಎಲ್ಲಾ ಕಾಲಗಳಲ್ಲಿ ಕರ್ತನನ್ನು ಸ್ತುತಿಸುವೆನು; ಆತನ ಸ್ತೋತ್ರವು ಯಾವಾ ಗಲೂ ನನ್ನ ಬಾಯಲ್ಲಿ ಇರುವದು. |
2
|
ನನ್ನ ಪ್ರಾಣವು ಕರ್ತನಲ್ಲಿ ಹೊಗಳಿಕೊಳ್ಳುವದು; ಇದನ್ನು ದೀನರು ಕೇಳಿ ಸಂತೋಷಪಡುವರು. |
3
|
ನನ್ನ ಸಂಗಡ ಕರ್ತ ನನ್ನು ಘನಪಡಿಸಿರಿ. ನಾವು ಒಟ್ಟಾಗಿ ಆತನ ಹೆಸ ರನ್ನು ಘನಪಡಿಸೋಣ. |
4
|
ನಾನು ಕರ್ತನನ್ನು ಹುಡು ಕಿದೆನು; ಆಗ ಆತನು ನನಗೆ ಉತ್ತರಕೊಟ್ಟು ನನ್ನ ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದನು. |
5
|
ಅವರು ಆತನನ್ನು ದೃಷ್ಟಿಸಿ ಪ್ರಕಾಶ ಹೊಂದಿದರು. ಅವರ ಮುಖಗಳು ನಾಚಿಕೆಪಡಲಿಲ್ಲ. |
6
|
ಈ ಬಡವನು ಮೊರೆ ಯಿಡಲು; ಕರ್ತನು ಅದನ್ನು ಕೇಳಿ ಅವನ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವನನ್ನು ರಕ್ಷಿಸಿದನು. |
7
|
ಆತನಿಗೆ ಭಯಪಡುವವರ ಸುತ್ತಲೂ ಕರ್ತನ ದೂತನು ಇಳು ಕೊಂಡು ಅವರನ್ನು ಕಾಪಾಡುತ್ತಾನೆ. |
8
|
ಕರ್ತನು ಒಳ್ಳೆಯವನೆಂದು ರುಚಿಸಿ ನೋಡಿರಿ; ಆತನಲ್ಲಿ ಆಶ್ರ ಯಿಸಿಕೊಳ್ಳುವ ಮನುಷ್ಯನು ಧನ್ಯನು. |
9
|
ಆತನ ಪರಿ ಶುದ್ಧರೇ, ನೀವು ಕರ್ತನಿಗೆ ಭಯಪಡಿರಿ; ಆತನಿಗೆ ಭಯಪಡುವವರಿಗೆ ಏನೂ ಕೊರತೆ ಇಲ್ಲ. |
10
|
ಪ್ರಾಯದ ಸಿಂಹಗಳು ಕೊರತೆಯಾಗಿ ಹಸಿಯುತ್ತವೆ; ಆದರೆ ಕರ್ತನನ್ನು ಹುಡುಕುವವರು ಯಾವ ಒಳ್ಳೆಯ ದಕ್ಕಾದರೂ ಕೊರತೆ ಪಡುವದಿಲ್ಲ. |
11
|
ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಕರ್ತನ ಭಯವನ್ನು ನಿಮಗೆ ಕಲಿಸುವೆನು. |
12
|
ಒಳ್ಳೆಯದನ್ನು ನೋಡುವಂತೆ ದಿವಸಗಳನ್ನು ಪ್ರೀತಿ ಮಾಡಿ, ಜೀವವನ್ನು ಕೋರುವ ಮನುಷ್ಯನು ಯಾರು? |
13
|
ಕೇಡಿನಿಂದ ನಿನ್ನ ನಾಲಿಗೆಯನ್ನೂ ಮೋಸವನ್ನು ನುಡಿಯದ ಹಾಗೆ ನಿನ್ನ ತುಟಿಗಳನ್ನೂ ಕಾಯಿ. |
14
|
ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾ ಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು. |
15
|
ಕರ್ತನ ಕಣ್ಣುಗಳು ನೀತಿವಂತರ ಮೇಲೆಯೂ ಆತನ ಕಿವಿಗಳು ಅವರ ಮೊರೆಯ ಕಡೆಗೂ ಅವೆ. |
16
|
ಕೇಡನ್ನು ಮಾಡುವವರ ಜ್ಞಾಪಕವನ್ನು ಭೂಮಿ ಯೊಳಗಿಂದ ಕಡಿದುಹಾಕುವದಕ್ಕೆ ಕರ್ತನ ಮುಖವು ಅವರಿಗೆ ವಿರೋಧವಾಗಿದೆ. |
17
|
ನೀತಿವಂತರು ಕೂಗು ತ್ತಾರೆ; ಆಗ ಕರ್ತನು ಕೇಳಿ ಅವರ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವರನ್ನು ಬಿಡಿಸುತ್ತಾನೆ. |
18
|
ಮುರಿದ ಹೃದಯದವರಿಗೆ ಕರ್ತನು ಸವಿಾಪವಾಗಿದ್ದಾನೆ; ಜಜ್ಜಿದ ಆತ್ಮವನ್ನು ರಕ್ಷಿಸುತ್ತಾನೆ. |
19
|
ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ. |
20
|
ಆತನ ಎಲುಬು ಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿಯಲ್ಪಡುವದಿಲ್ಲ. |
21
|
ಕೇಡು ದುಷ್ಟನನ್ನು ಕೊಲ್ಲು ವದು; ನೀತಿವಂತನನ್ನು ಹಗೆಮಾಡುವವರು ಹಾಳಾ ಗುವರು. |
22
|
ಕರ್ತನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ; ಆತನಲ್ಲಿ ಭರವಸವಿಡುವವರು ಹಾಳಾಗುವದಿಲ್ಲ. |
Psalms 34:2 Kannada Language Bible Words basic statistical display
COMING SOON ...