1
|
ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು. |
2
|
ಆದದರಿಂದ ಭೂಮಿಯು ತೆಗೆದು ಹಾಕಲ್ಪಟ್ಟರೂ ಬೆಟ್ಟಗಳು ಸಮುದ್ರದ ಮಧ್ಯಕ್ಕೆ ಒಯ್ಯ ಲ್ಪಟ್ಟರೂ |
3
|
ಅದರ ನೀರುಗಳು ಘೋಷಿಸಿ ಕದಲಿದರೂ ಅದರ ಉಬ್ಬರದಿಂದ ಬೆಟ್ಟಗಳು ಅಲ್ಲಾಡಿದರೂ ನಾವು ಭಯಪಡೆವು. ಸೆಲಾ. |
4
|
ಒಂದು ನದಿ ಅದೆ; ಅದರ ಕಾಲುವೆಗಳು ದೇವರ ಪಟ್ಟಣವನ್ನೂ ಮಹೋನ್ನತನ ಗುಡಾರಗಳ ಪರಿಶುದ್ಧ ಸ್ಥಳವನ್ನೂ ಸಂತೋಷಪಡಿಸುತ್ತವೆ. |
5
|
ದೇವರು ಅದರ ಮಧ್ಯದಲ್ಲಿ ಇದ್ದಾನೆ; ಅದು ಕದಲದು; ದೇವರು ಹೊತ್ತಾರೆಯಲ್ಲಿ ಅದಕ್ಕೆ ಸಹಾಯ ಮಾಡುವನು. |
6
|
ಅನ್ಯ ಜನಾಂಗವು ಘೋಷಿಸಿತು, ರಾಜ್ಯಗಳು ಕದಲಿದವು; ಆತನು ತನ್ನ ಧ್ವನಿಯನ್ನೆತ್ತಿ ಕೂಗಿದಾಗ ಭೂಮಿಯು ಕರಗಿತು. |
7
|
ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ. |
8
|
ಬನ್ನಿರಿ, ಕರ್ತನ ಕಾರ್ಯಗಳನ್ನು ದೃಷ್ಟಿಸಿರಿ. ಆತನು ಭೂಮಿಯಲ್ಲಿ ಎಂಥಾ ನಾಶನಗಳನ್ನು ನಡಿಸಿದ್ದಾನೆ; |
9
|
ಯುದ್ಧಗಳನ್ನು ಭೂಮಿಯ ಅಂತ್ಯದ ವರೆಗೆ ನಿಲ್ಲಿಸಿ ಬಿಲ್ಲನ್ನು ಮುರಿದು ಭಲ್ಲೆಯನ್ನು ಕಡಿದು ತುಂಡುಮಾಡಿ ರಥಗಳನ್ನು ಬೆಂಕಿಯಿಂದ ಸುಡುತ್ತಾನೆ. |
10
|
ಶಾಂತ ವಾಗಿರ್ರಿ, ನಾನೇ ದೇವರಾಗಿದ್ದೇನೆಂದು ತಿಳುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ನಾನು ಹೆಚ್ಚಿಸಲ್ಪಡುವೆನು. |
11
|
ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ. |
Psalms 46:1 Kannada Language Bible Words basic statistical display
COMING SOON ...