1
|
ಎಲ್ಲಾ ಜನರೇ, ನೀವು ನಿಮ್ಮ ಕೈಗಳನ್ನು ತಟ್ಟಿರಿ; ಜಯಾರ್ಭಟದಿಂದ ದೇವರಿಗೆ ಧ್ವನಿಗೈಯಿರಿ. |
2
|
ಮಹೋನ್ನತನಾದ ಕರ್ತನು ಭಯಂಕ ರನೂ ಭೂಮಿಯ ಮೇಲೆಲ್ಲಾ ಮಹಾಅರಸನೂ ಆಗಿದ್ದಾನೆ. |
3
|
ಜನರನ್ನು ನಮ್ಮ ಕೆಳಗೂ ಜನಾಂಗಗಳನ್ನು ನಮ್ಮ ಪಾದಗಳ ಕೆಳಗೂ ಅಧೀನ ಮಾಡಿದ್ದಾನೆ. |
4
|
ಆತನು ಪ್ರೀತಿಮಾಡುವ ಯಾಕೋಬನ ಘನತೆಯಾದ ನಮ್ಮ ಬಾಧ್ಯತೆಯನ್ನು ಆದುಕೊಳ್ಳುತ್ತಾನೆ--ಸೆಲಾ. |
5
|
ದೇವರು ಮಹಾಧ್ವನಿಯಿಂದ, ಕರ್ತನು ತುತೂ ರಿಯ ಶಬ್ದದಿಂದ, ಮೇಲೆ ಹೋಗಿದ್ದಾನೆ. |
6
|
ದೇವರಿಗೆ ಸ್ತುತಿಗಳನ್ನು ಹಾಡಿರಿ, ಸ್ತುತಿಗಳನ್ನು ಹಾಡಿರಿ; ನಮ್ಮ ಅರಸನಿಗೆ ಸ್ತುತಿಗಳನ್ನು ಹಾಡಿರಿ, ಸ್ತುತಿಗಳನ್ನು ಹಾಡಿರಿ; |
7
|
ದೇವರು ಭೂಮಿಗೆಲ್ಲಾ ಅರಸನು; ತಿಳುವಳಿಕೆಯಿಂದ ಸ್ತುತಿಗಳನ್ನು ಹಾಡಿರಿ. |
8
|
ಅನ್ಯಜನಾಂಗವನ್ನು ಆಳುತ್ತಾನೆ; ತನ್ನ ಪರಿಶುದ್ಧ ಸಿಂಹಾಸನದಲ್ಲಿ ಕೂತಿದ್ದಾನೆ. |
9
|
ಜನರ ಅಧಿಪತಿಗಳು ಅಬ್ರಹಾಮನ ದೇವರ ಪ್ರಜೆಯ ಸಂಗಡ ಕೂಡಿ ಕೊಂಡಿದ್ದಾರೆ; ಭೂಮಿಯ ಗುರಾಣಿಗಳು ದೇವರ ವಶದಲ್ಲಿವೆ; ಆತನು ಬಹಳವಾಗಿ ಹೆಚ್ಚಿಸಲ್ಪಟ್ಟಿದ್ದಾನೆ. |
Psalms 47:1 Kannada Language Bible Words basic statistical display
COMING SOON ...