1
|
ನಮ್ಮ ದೇವರ ಪಟ್ಟಣದಲ್ಲಿ ಆತನ ಪರಿಶುದ್ಧ ಪರ್ವತದಲ್ಲಿ ಕರ್ತನು ದೊಡ್ಡ ವನೂ ಬಹಳವಾಗಿ ಸ್ತುತಿಸಲ್ಪಡುವಾತನೂ ಆಗಿದ್ದಾನೆ. |
2
|
ಉತ್ತರದ ಪಾರ್ಶ್ವಗಳಲ್ಲಿ ದೊಡ್ಡ ಅರಸನ ಪಟ್ಟಣವಾದ ಚೀಯೋನ್ ಪರ್ವತವು ರಮಣೀಯವಾ ದದ್ದೂ ಎಲ್ಲಾ ಭೂಮಿಗೆ ಸಂತೋಷಕರವಾದದ್ದೂ ಆಗಿದೆ. |
3
|
ದೇವರು ಅದರ ಅರಮನೆಗಳಲ್ಲಿ ಆಶ್ರಯ ವೆಂದು ಗೊತ್ತಾಗಿದೆ. |
4
|
ಇಗೋ, ಅರಸರುಗಳು ಕೂಡಿಕೊಂಡು ಒಟ್ಟಾಗಿ ಹಾದುಹೋದರು; |
5
|
ಅವರು ಅದನ್ನು ನೋಡಿ ಆಶ್ಚ ರ್ಯಪಟ್ಟರು; ಅವರು ಕಳವಳಪಟ್ಟು ಓಡಿ ಹೋದರು. |
6
|
ಭೀತಿಯೂ ಹೆರುವವಳ ಹಾಗೆ ನೋವೂ ಅಲ್ಲಿ ಅವರನ್ನು ಹಿಡಿಯಿತು. |
7
|
ಮೂಡಣ ಗಾಳಿಯಿಂದ ತಾರ್ಷಿಷ್ ಹಡಗುಗಳನ್ನು ನೀನು ಒಡೆಯುತ್ತೀ. |
8
|
ನಾವು ಹೇಗೆ ಕೇಳಿದೆವೋ ಹಾಗೆಯೇ ಸೈನ್ಯಗಳ ಕರ್ತನ ಪಟ್ಟಣದಲ್ಲಿ, ಅಂದರೆ ನಮ್ಮ ದೇವರ ಪಟ್ಟಣದಲ್ಲಿಯೇ ನೋಡಿದೆವು; ದೇವರು ಅದನ್ನು ಎಂದೆಂದಿಗೂ ಸ್ಥಿರಪಡಿಸುವನು. ಸೆಲಾ. |
9
|
ಓ ದೇವರೇ, ನಿನ್ನ ಪ್ರೀತಿ ಕರುಣೆಯನ್ನು ನಿನ್ನ ಮಂದಿರದ ಮಧ್ಯದಲ್ಲಿ ನಾವು ಸ್ಮರಿಸಿದ್ದೇವೆ. |
10
|
ಓ ದೇವರೇ, ನಿನ್ನ ಹೆಸರಿಗೆ ತಕ್ಕಂತಯೇ ನಿನ್ನ ಸ್ತೋತ್ರವು ಭೂಮಿಯ ಅಂತ್ಯಗಳ ವರೆಗೂ ಅದೆ. ನಿನ್ನ ಬಲಗೈ ನೀತಿಯಿಂದ ತುಂಬಿ ಅದೆ. |
11
|
ನಿನ್ನ ನ್ಯಾಯತೀರ್ವಿಕೆಗಳ ನಿಮಿತ್ತ ಚೀಯೋನ್ ಪರ್ವತವು ಸಂತೋಷಪಡಲಿ; ಯೆಹೂದದ ಕುಮಾರ್ತೆಯರು ಉಲ್ಲಾಸಪಡಲಿ. |
12
|
ಚೀಯೋನನ್ನು ಸುತ್ತಿ ಅವಳ ಸುತ್ತಲು ತಿರುಗಿ ಅದರ ಬುರುಜುಗಳನ್ನು ಲೆಕ್ಕಿಸಿರಿ. |
13
|
ಮುಂದಿನ ತಲಾಂತರಕ್ಕೆ ತಿಳಿಸುವದಕ್ಕೋಸ್ಕರ ಅದರ ಬುರುಜುಗಳ ಮೇಲೆ ಮನಸ್ಸಿಟ್ಟು ಆಕೆಯ ಅರಮನೆಗಳನ್ನು ಲಕ್ಷಿಸಿರಿ. |
14
|
ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವ ರಾಗಿದ್ದಾನೆ. ಆತನು ಮರಣದ ವರೆಗೂ ನಮ್ಮನ್ನು ನಡಿಸುವನು. |
Psalms 48:11 Kannada Language Bible Words basic statistical display
COMING SOON ...