1
|
ಎಲ್ಲಾ ಜನರೇ, ಇದನ್ನು ಕೇಳಿರಿ; ಭೂಲೋಕದ ನಿವಾಸಿಗಳಿರಾ, ಕೇಳಿರಿ; |
2
|
ಭೂಲೋಕದ ಜನರೇ, ಉಚ್ಚ ನೀಚ ಬಡವ ಬಲ್ಲಿದರೇ, ಕೇಳಿರಿ. |
3
|
ನನ್ನ ಬಾಯಿ ಜ್ಞಾನವನ್ನು ನುಡಿಯುವದು, ನನ್ನ ಹೃದಯದ ಧ್ಯಾನವು ವಿವೇಕವುಳ್ಳದ್ದಾಗಿರುವದು. |
4
|
ನಾನು ಸಾಮ್ಯವನ್ನು ಕಿವಿಗೊಟ್ಟು ಕೇಳಿ ಕಿನ್ನರಿಯನ್ನು ಬಾರಿಸುತ್ತಾ ಅದರ ಗೂಢಾರ್ಥವನ್ನು ಪ್ರಕಟಿಸುವೆನು. |
5
|
ನನ್ನ ದ್ರೋಹವು ನನ್ನನ್ನು ಸುತ್ತಿಕೊಳ್ಳುವಾಗ ಕೇಡಿನ ದಿನಗಳಲ್ಲಿ ನಾನು ಯಾಕೆ ಭಯಪಡಬೇಕು? |
6
|
ಅವರು ತಮ್ಮ ಸಂಪತ್ತಿನಲ್ಲಿ ಭರವಸವಿಟ್ಟು ಅಧಿಕ ಐಶ್ವರ್ಯಗಳಲ್ಲಿ ಹೆಚ್ಚಳಪಡುವರು. |
7
|
ಆದರೆ ಸದಾ ಕಾಲಕ್ಕೂ ಬದುಕಿರುವಂತೆ ಮಾಡಿ ಕೊಳೆಯುವಿಕೆಯನ್ನು ನೋಡದ ಹಾಗೆ ತನ್ನ ಸಹೋದರನನ್ನು ಯಾವ ಮನುಷ್ಯನೂ |
8
|
ಅವನು ದೇವರಿಗೆ ಹಣವನ್ನು (ಈಡು) ಕೊಟ್ಟು ಅದರಿಂದ ವಿಮೋಚಿಸಲಾರನು. |
9
|
ಅವರ ಪ್ರಾಣದ ವಿಮೋಚನೆಯು ಅಮೂಲ್ಯ ವಾಗಿದೆ; ಅದು ಯುಗಯುಗಕ್ಕೂ ನಿಲ್ಲುವದು. |
10
|
ಜ್ಞಾನಿಗಳು ಸಾಯುವರು; ಹುಚ್ಚನು ಪಶುಪ್ರಾಯನು ಕೂಡ ನಾಶವಾಗಿ ಬೇರೆಯವರಿಗೆ ತಮ್ಮ ಆಸ್ತಿಯನ್ನು ಬಿಡುವದನ್ನು ಅವನು ನೋಡುತ್ತಾನೆ. |
11
|
ತಮ್ಮ ಮನೆಗಳು ಯುಗಯುಗಕ್ಕೂ ತಮ್ಮ ನಿವಾಸಗಳು ತಲತಲಾಂತರಕ್ಕೂ ಇರಬೇಕೆಂದು ಅಂತರ್ಯದಲ್ಲಿ ಯೋಚಿಸಿ ಭೂಮಿಗಳಿಗೆ ತಮ್ಮ ಹೆಸರುಗಳನ್ನು ಇಡು ತ್ತಾರೆ. |
12
|
ಮನುಷ್ಯನು ಘನವುಳ್ಳವನಾದರೂ ಸ್ಥಿರವಿಲ್ಲ; ಅವನು ನಾಶವಾಗುವ ಪಶುಗಳ ಹಾಗೆ ಇದ್ದಾನೆ. |
13
|
ಅವರ ಈ ಮಾರ್ಗವು ಅವರ ಹುಚ್ಚುತನ ವಾಗಿದೆ; ಆದರೆ ಅವರ ಸಂತಾನದವರು ಅವರ ಮಾತುಗಳನ್ನು ಮೆಚ್ಚುತ್ತಾರೆ. ಸೆಲಾ. |
14
|
ಅವರು ಕುರಿ ಗಳಂತೆ ಸಮಾಧಿಯಲ್ಲಿ ಹಾಕಲ್ಪಡುತ್ತಾರೆ; ಮರಣವು ಅವರನ್ನು ತಿನ್ನುತ್ತದೆ; ಯಥಾರ್ಥರು ಬೆಳಿಗ್ಗೆ ಅವರ ಮೇಲೆ ಆಳುವರು; ಅವರಿಗೆ ನಿವಾಸವಿರದ ಹಾಗೆ ಸಮಾಧಿಯಲ್ಲಿ ಅವರ ರೂಪವು ಕ್ಷಯಿಸುವದು. |
15
|
ಆದರೆ ದೇವರು ನನ್ನ ಪ್ರಾಣವನ್ನು ಸಮಾಧಿಯ ಬಲದಿಂದ ವಿಮೋಚನೆ ಮಾಡುವನು, ಆತನು ನನ್ನನ್ನು ಅಂಗೀಕರಿಸುವನು. ಸೆಲಾ. |
16
|
ಒಬ್ಬನು ಐಶ್ವರ್ಯವಂತ ನಾದರೆ ಮತ್ತು ಅವನ ಮನೆಯ ಘನವು ದೊಡ್ಡದಾ ದರೆ ಭಯಪಡಬೇಡ. |
17
|
ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗನು; ಅವನ ಘನವು ಅವನ ಹಿಂದೆ ಇಳಿದು ಹೋಗದು. |
18
|
ಅವನು ಬದುಕಿದ್ದಾಗ ತನ್ನ ಪ್ರಾಣವನ್ನು ಸ್ತುತಿಸಿಕೊಂಡಾಗ್ಯೂ ನೀನು ನಿನಗೆ ಒಳ್ಳೇದನ್ನು ಮಾಡಿಕೊಂಡರೆ ಜನರು ನಿನ್ನನ್ನು ಕೊಂಡಾ ಡುವರು. |
19
|
ಅವನು ತನ್ನ ತಂದೆಗಳ ವಂಶದ ಬಳಿಗೆ ಹೋಗುವನು; ಅವರು ಬೆಳಕನ್ನು ಎಂದಿಗೂ ನೋಡು ವದಿಲ್ಲ. |
20
|
ಮನುಷ್ಯನು ಘನತೆಯಲ್ಲಿದ್ದು ವಿವೇಕ ವಿಲ್ಲದವನಾದರೆ ಮಡಿದು ಹೋಗುವ ಪಶುಗಳಿಗೆ ಸಮಾನನಾಗಿದ್ದಾನೆ. |
Psalms 49:1 Kannada Language Bible Words basic statistical display
COMING SOON ...