Indian Language Bible Word Collections
Psalms 51:1
Psalms Chapters
Psalms 51 Verses
Books
Old Testament
New Testament
Bible Versions
English
Tamil
Hebrew
Greek
Malayalam
Hindi
Telugu
Kannada
Gujarati
Punjabi
Urdu
Bengali
Oriya
Marathi
Assamese
Books
Old Testament
New Testament
Psalms Chapters
Psalms 51 Verses
1
ಓ ದೇವರೇ, ನನ್ನ ಮೇಲೆ ಕರುಣೆಯಿಡು; ನಿನ್ನ ಪ್ರೀತಿಕರುಣೆಯ ಪ್ರಕಾರ ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ದ್ರೋಹ ಗಳನ್ನು ಅಳಿಸಿಬಿಡು.
2
ನನ್ನ ಅಕ್ರಮದಿಂದ ನನ್ನನ್ನು ಪೂರ್ಣವಾಗಿ ತೊಳೆ; ನನ್ನ ಪಾಪದಿಂದ ನನ್ನನ್ನು ಶುದ್ಧಿಮಾಡು.
3
ನನ್ನ ದ್ರೋಹಗಳನ್ನು ನಾನು ಒಪ್ಪಿ ಕೊಳ್ಳುತ್ತೇನೆ; ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ.
4
ನೀನು ನಿನ್ನ ಮಾತುಗಳಲ್ಲಿ ನೀತಿವಂತ ನಾಗಿಯೂ ನಿನ್ನ ನ್ಯಾಯತೀರ್ವಿಕೆಯಲ್ಲಿ ನಿರ್ಮಲನಾ ಗಿಯೂ ಇದ್ದಿಯಲ್ಲಾ; ನಿನಗೆ ಮಾತ್ರವೇ ವಿರೋಧ ವಾಗಿ ನಾನು ಪಾಪಮಾಡಿ ನಿನ್ನ ದೃಷ್ಟಿಯಲ್ಲಿ ಈ ಕೆಟ್ಟದ್ದನ್ನು ಮಾಡಿದ್ದೇನೆ.
5
ಇಗೋ, ನಾನು ಅಕ್ರ ಮದಲ್ಲಿ ರೂಪಿಸಲ್ಪಟ್ಟೆನು; ಪಾಪದಲ್ಲಿ ನನ್ನ ತಾಯಿ ನನ್ನನ್ನು ಗರ್ಭಧರಿಸಿದಳು.
6
ಇಗೋ, ಅಂತರಂಗದಲ್ಲಿ ನೀನು ಸತ್ಯವನ್ನು ಅಪೇಕ್ಷಿಸುತ್ತೀ; ರಹಸ್ಯದಲ್ಲಿ ನನಗೆ ಜ್ಞಾನವನ್ನು ನೀನು ತಿಳಿಯಮಾಡು.
7
ಹಿಸ್ಸೋಪ್‌ನಿಂದ ನನ್ನನ್ನು ತೊಳೆ; ಆಗ ನಾನು ಶುಚಿಯಾಗುವೆನು. ನನ್ನನ್ನು ತೊಳೆ, ಆಗ ಹಿಮಕ್ಕಿಂತ ಬಿಳುಪಾಗುವೆನು.
8
ನಾನು ಉತ್ಸಾಹವನ್ನೂ ಸಂತೋಷವನ್ನೂ ಕೇಳುವ ಹಾಗೆ ಮಾಡು. ಆಗ ನನ್ನ ಮುರಿದ ಎಲುಬುಗಳು ಆನಂದಿಸುವವು.
9
ನನ್ನ ಪಾಪಗಳನ್ನು ನೋಡದಂತೆ ನೀನು ವಿಮುಖನಾಗು; ನನ್ನ ಅಕ್ರಮಗಳನ್ನೆಲ್ಲಾ ಅಳಿಸಿ ಬಿಡು.
10
ಓ ದೇವರೇ, ಶುದ್ಧಹೃದಯವನ್ನು ನನ್ನಲ್ಲಿ ಸೃಷ್ಟಿಸು, ಸ್ಥಿರವಾದ ಆತ್ಮವನ್ನು ನನ್ನ ಅಂತರಂಗದಲ್ಲಿ ನೂತನಪಡಿಸು.
11
ನಿನ್ನ ಸಮ್ಮುಖದಿಂದ ನನ್ನನ್ನು ಹೊರಗೆ ಹಾಕಬೇಡ; ನಿನ್ನ ಪರಿಶುದ್ಧಾತ್ಮನನ್ನು ನನ್ನಿಂದ ತೆಗೆದುಕೊಳ್ಳಬೇಡ.
12
ನಿನ್ನ ರಕ್ಷಣೆಯ ಆನಂದವನ್ನು ನನಗೆ ತಿರುಗಿಕೊಡು; ನಿನ್ನ ಸಿದ್ಧಮನಸ್ಸಿನಿಂದ ನನ್ನನ್ನು ಮೇಲೆತ್ತು.
13
ಆಗ ದ್ರೋಹಿಗಳಿಗೆ ನಿನ್ನ ಮಾರ್ಗಗಳನ್ನು ಕಲಿಸುವೆನು; ಪಾಪಾತ್ಮರು ನಿನ್ನ ಕಡೆಗೆ ತಿರುಗುವರು.
14
ಓ ದೇವರೇ, ನನ್ನ ರಕ್ಷಣೆಯ ದೇವರೇ, ರಕ್ತಾಪರಾಧ ದಿಂದ ನೀನು ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ನಿನ್ನ ನೀತಿಯನ್ನು ಗಟ್ಟಿಯಾಗಿ ಹಾಡುವದು.
15
ಓ ಕರ್ತನೇ, ನನ್ನ ತುಟಿಗಳನ್ನು ತೆರೆ; ಆಗ ನನ್ನ ಬಾಯಿ ನಿನ್ನ ಸ್ತೋತ್ರವನ್ನು ಪ್ರಕಟಮಾಡುವದು.
16
ಯಜ್ಞ ವನ್ನು ನೀನು ಇಷ್ಟಪಡುದಿಲ್ಲ. ಇಲ್ಲವಾದರೆ ನಾನು ಅದನ್ನು ಕೊಡುತ್ತಿದ್ದೆನು. ದಹನಬಲಿಯಲ್ಲಿ ನೀನು ಸಂತೋಷಪಡುವದಿಲ್ಲ.
17
ಮುರಿದ ಮನಸ್ಸೇ ದೇವರ ಯಜ್ಞಗಳು. ಓ ದೇವರೇ, ಪಶ್ಚಾತ್ತಾಪದಿಂದ ಜಜ್ಜಿ ಹೋದ ಮನಸ್ಸನ್ನು ನೀನು ತಿರಸ್ಕರಿಸುವದಿಲ್ಲ.
18
ನಿನ್ನ ದಿವ್ಯ ಚಿತ್ತದ ಪ್ರಕಾರ ಚೀಯೋನಿಗೆ ಒಳ್ಳೇದು ಮಾಡು; ಯೆರೂಸಲೇಮಿನ ಗೋಡೆಗಳನ್ನು ಕಟ್ಟು.
19
ಆಗ ನೀತಿಯ ಯಜ್ಞಗಳಲ್ಲಿಯೂ ದಹನ ಬಲಿಯಲ್ಲಿಯೂ ಪೂರ್ಣವಾದ ದಹನಬಲಿಯ ಲ್ಲಿಯೂ ನೀನು ಸಂತೋಷಪಡುವಿ; ಆಗ ನಿನ್ನ ಬಲಿ ಪೀಠದ ಮೇಲೆ ಅವರು ಹೋರಿಗಳನ್ನು ಅರ್ಪಿಸುವರು.