1
|
ಓ ದೇವರೇ, ಕೋಪಿಸಿಕೊಂಡು ನಮ್ಮನ್ನು ತಳ್ಳಿ ಚದರಿಸಿಬಿಟ್ಟಿದ್ದೀ; ಮತ್ತೆ ನಮ್ಮ ಕಡೆಗೆ ತಿರುಗಿಕೋ. |
2
|
ಭೂಮಿಯನ್ನು ನಡುಗಿಸಿ ಸೀಳಿಬಿಟ್ಟಿದ್ದೀ; ಅದರ ಬಿರುಕುಗಳನ್ನು ಸರಿಮಾಡು; ಅದು ಕದಲು ತ್ತದೆ. |
3
|
ನಿನ್ನ ಜನರಿಗೆ ಕಠಿಣವಾದವುಗಳನ್ನು ನೀನು ತೋರಿಸಿದ್ದೀ; ವಿಸ್ಮಯದ ದ್ರಾಕ್ಷಾರಸವನ್ನು ನಮಗೆ ಕುಡಿಸಿದ್ದೀ. |
4
|
ಸತ್ಯದ ನಿಮಿತ್ತ ಧ್ವಜವು ಎತ್ತಲ್ಪಡುವಂತೆ ನಿನಗೆ ಭಯಪಡುವವರಿಗೆ ನೀನು ಅದನ್ನು ಕೊಟ್ಟಿದ್ದೀ. ಸೆಲಾ. |
5
|
ನಿನ್ನ ಪ್ರಿಯರು ಬಿಡುಗಡೆ ಯಾಗುವಂತೆ ನನ್ನ ಪ್ರಾರ್ಥನೆಯನ್ನು ಕೇಳಿ ನಿನ್ನ ಬಲಗೈಯಿಂದ ರಕ್ಷಿಸು. |
6
|
ದೇವರು ತನ್ನ ಪರಿಶುದ್ಧತ್ವದಿಂದ ನುಡಿದಿದ್ದಾನೆ; ನಾನು ಉತ್ಸಾಹಪಡುವೆನು; ಶೆಕೆಮನ್ನು ವಿಭಾಗಿ ಸುವೆನು; ಸುಖೋತಿನ ತಗ್ಗನ್ನು ಅಳೆಯುವೆನು. |
7
|
ಗಿಲ್ಯಾದ್ ಮನಸ್ಸೆ ನನ್ನದು; ಎಫ್ರಾಯಾಮ್ ನನ್ನ ತಲೆಯ ಬಲವಾಗಿದೆ; ಯೆಹೂದನು ನನಗೆ ನ್ಯಾಯ ಕೊಡುವವನು; |
8
|
ಮೋವಾಬ್ ನನ್ನನ್ನು ತೊಳೆಯುವ ಪಾತ್ರೆಯು; ಎದೋಮಿನ ಮೇಲೆ ನನ್ನ ಕೆರವನ್ನು ಎಸೆಯುವೆನು; ಫಿಲಿಷ್ಟಿಯವೇ, ನನ್ನ ನಿಮಿತ್ತ ಜಯಧ್ವನಿ ಮಾಡು. |
9
|
ಬಲವುಳ್ಳ ಪಟ್ಟಣಕ್ಕೆ ನನ್ನನ್ನು ಕರತರುವವನಾರು? ಎದೋಮಿನೊಳಗೆ ನನ್ನನ್ನು ನಡಿಸುವವನಾರು? |
10
|
ಓ ದೇವರೇ, ನಮ್ಮನ್ನು ತಳ್ಳಿಬಿಟ್ಟು ನಮ್ಮ ಸೈನ್ಯಗಳ ಸಂಗಡ ಹೊರಟು ಹೋಗದೆ ಇದ್ದ ದೇವರು ನೀನ ಲ್ಲವೋ? |
11
|
ಇಕ್ಕಟ್ಟಿನಲ್ಲಿ ನಮಗೆ ಸಹಾಯ ಮಾಡು; ಮನುಷ್ಯನ ಸಹಾಯವು ವ್ಯರ್ಥವಾಗಿದೆ. |
12
|
ದೇವ ರಿಂದ ಪರಾಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು. |
Psalms 60:1 Kannada Language Bible Words basic statistical display
COMING SOON ...