English Bible Languages

Indian Language Bible Word Collections

Bible Versions

English

Tamil

Hebrew

Greek

Malayalam

Hindi

Telugu

Kannada

Gujarati

Punjabi

Urdu

Bengali

Oriya

Marathi

Assamese

Books

Psalms Chapters

Psalms 61 Verses

1 ಓ ದೇವರೇ, ನನ್ನ ಕೂಗನ್ನು ಕೇಳು; ನನ್ನ ಪ್ರಾರ್ಥನೆಯನ್ನು ಆಲೈಸು.
2 ನನ್ನ ಹೃದಯವು ಕುಂದಿಹೋಗಿರಲಾಗಿ, ಭೂಮಿಯ ಕಡೇ ಭಾಗದಿಂದ ನಿನ್ನನ್ನು ಕೂಗುವೆನು; ನನಗಿಂತ ಎತ್ತರ ವಾದ ಬಂಡೆಗೆ ನನ್ನನ್ನು ನಡಿಸು.
3 ನೀನು ನನಗೆ ಆಶ್ರಯವೂ ಶತ್ರುವಿನಿಂದ ತಪ್ಪಿಸುವ ಬಲವಾದ ಬುರುಜೂ ಆಗಿದ್ದೀ;
4 ನಿನ್ನ ಗುಡಾರದಲ್ಲಿ ನಾನು ಎಂದೆಂದಿಗೂ ವಾಸಿಸುವೆನು; ನಿನ್ನ ರೆಕ್ಕೆಗಳ ಮರೆಯಲ್ಲಿ ಭರವಸವುಳ್ಳವನಾಗಿರುವೆನು. ಸೆಲಾ.
5 ಓ ದೇವರೇ, ನೀನು ನನ್ನ ಹರಕೆಗಳನ್ನು ಕೇಳಿದ್ದೀ; ನಿನ್ನ ಹೆಸರಿಗೆ ಭಯಪಡುವವರಿಗೆ ಸ್ವಾಸ್ಥ್ಯವನ್ನು ಕೊಟ್ಟಂತೆ ನನಗೂ ಕೊಟ್ಟಿದ್ದೀ.
6 ಅರಸನ ಆಯುಷ್ಯ ವನ್ನು ಹೆಚ್ಚಿಸುವಿ; ಅವನ ವರುಷಗಳು ಅನೇಕ ತಲ ತಲಾಂತರಗಳ ಹಾಗೆ ಇರುವವು.
7 ಅವನು ಎಂದಿಗೂ ದೇವರ ಮುಂದೆ ವಾಸಿಸುವನು; ಅವನನ್ನು ಕಾಯು ವದಕ್ಕೆ ಕರುಣೆಯನ್ನೂ ಸತ್ಯವನ್ನೂ ಸಿದ್ಧಮಾಡು.
8 ಹಾಗಾದರೆ ನನ್ನ ಹರಕೆಗಳನ್ನು ದಿನ ದಿನಕ್ಕೆ ಸಲ್ಲಿ ಸುವ ಹಾಗೆ ನಿನ್ನ ಹೆಸರನ್ನು ಎಂದೆಂದಿಗೂ ನಾನು ಕೀರ್ತಿಸುವೆನು.
×

Alert

×