1
|
ದೇವರು ನಮಗೆ ಕರುಣೆಯುಳ್ಳವನಾಗಿದ್ದು ನಮ್ಮನ್ನು ಆಶೀರ್ವದಿಸಲಿ; ಆತನು ತನ್ನ ಮುಖವನ್ನು ನಮ್ಮ ಮೇಲೆ ಪ್ರಕಾಶಿಸಮಾಡಲಿ. ಸೆಲಾ. |
2
|
ಆಗ ನಿನ್ನ ಮಾರ್ಗವೂ ನಿನ್ನ ರಕ್ಷಣೆಯ ಸ್ವಸ್ಥತೆಯೂ, ಭೂಮಿಯಲ್ಲಿ, ಎಲ್ಲಾ ಜನಾಂಗಗಳಿಗೆ ತಿಳಿಯಲ್ಪಡು ವದು. |
3
|
ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ. ಜನರೆಲ್ಲಾ ನಿನ್ನನ್ನು ಕೊಂಡಾಡಲಿ. |
4
|
ಜನಾಂಗಗಳು ಸಂತೋಷಪಟ್ಟು ಉತ್ಸಾಹಕ್ಕಾಗಿ ಹಾಡಲಿ; ನೀನು ಜನರನ್ನು ನೀತಿಯಿಂದ ನ್ಯಾಯತೀರಿಸಿ ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀ. ಸೆಲಾ. |
5
|
ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ; ಜನರೆಲ್ಲಾ ನಿನ್ನನ್ನು ಕೊಂಡಾಡಲಿ. |
6
|
ಆಗ ಭೂಮಿಯು ತನ್ನ ಸಮೃದ್ಧಿಯಾದ ಬೆಳೆಯನ್ನು ಕೊಡುವದು; ದೇವರೇ, ಹೌದು, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸುವನು. |
7
|
ದೇವರು ನಮ್ಮನ್ನು ಆಶೀರ್ವದಿಸುವನು; ಭೂಮಿಯ ಕೊನೆಯ ಭಾಗಗಳು ಆತನಿಗೆ ಭಯಪಡುವವು. |
Psalms 67:6 Kannada Language Bible Words basic statistical display
COMING SOON ...