1
|
ಕರ್ತನೇ, ನಿನ್ನ ದೇಶಕ್ಕೆ ದಯೆತೋರಿಸಿದ್ದೀ; ಯಾಕೋಬನ್ನು ಸೆರೆಯಿಂದ ಹಿಂದಕ್ಕೆ ಬರ ಮಾಡಿದ್ದೀ. |
2
|
ನಿನ್ನ ಜನರ ಅಕ್ರಮವನ್ನು ಪರಿಹರಿಸಿದ್ದೀ; ಅವರ ಪಾಪವನ್ನೆಲ್ಲಾ ಮುಚ್ಚಿದ್ದೀ ಸೆಲಾ. |
3
|
ನಿನ್ನ ಕೋಪ ವನ್ನೆಲ್ಲಾ ನೀನು ತೆಗೆದುಬಿಟ್ಟಿದ್ದೀ; ನೀನು ಕೋಪದ ಉರಿಯಿಂದ ತಿರುಗಿಕೊಂಡಿದ್ದೀ. |
4
|
ನಮ್ಮ ರಕ್ಷಣೆಯ ಓ ದೇವರೇ, ನಮ್ಮ ಕಡೆಗೆ ತಿರುಗು; ನಮ್ಮ ಮೇಲಿರುವ ನಿನ್ನ ಕೋಪವನ್ನು ತೊಲ ಗಿಸು. |
5
|
ಎಂದೆಂದಿಗೂ ನಮ್ಮ ಮೇಲೆ ಕೋಪಿಸು ವಿಯೋ? ತಲತಲಾಂತರಕ್ಕೂ ನಿನ್ನ ಕೋಪವನ್ನು ಏಳ ಮಾಡುವಿಯೋ? |
6
|
ನಿನ್ನ ಜನರು ನಿನ್ನಲ್ಲಿ ಸಂತೋಷ ಪಡುವ ಹಾಗೆ ನೀನು ತಿರುಗಿ ನಮ್ಮನ್ನು ಉಜ್ಜೀವಿ ಸುವದಿಲ್ಲವೋ? |
7
|
ಓ ಕರ್ತನೇ, ನಿನ್ನ ಕರುಣೆಯನ್ನು ನಮಗೆ ದಯಪಾಲಿಸು. ನಿನ್ನ ರಕ್ಷಣೆಯನ್ನು ನಮಗೆ ಕೊಡು. |
8
|
ಕರ್ತನಾದ ದೇವರು ಏನು ಹೇಳುತ್ತಾನೋ ಅದನ್ನು ಕೇಳುವೆನು; ನಿಶ್ಚಯವಾಗಿ ಜನರಿಗೂ ತನ್ನ ಪರಿಶುದ್ಧ ರಿಗೂ ಸಮಾಧಾನದ ಮಾತು ಹೇಳುವನು; ಇನ್ನು ಬುದ್ಧಿಹೀನತ್ವಕ್ಕೆ ಅವರು ತಿರುಗಿಕೊಳ್ಳದೆ ಇರಲಿ. |
9
|
ನಿಶ್ಚ ಯವಾಗಿ ಘನವು ನಮ್ಮ ದೇಶದಲ್ಲಿ ವಾಸವಾಗಿರುವ ಹಾಗೆ, ಆತನಿಗೆ ಭಯಪಡುವವರಿಗೆ ಆತನ ರಕ್ಷಣೆಯು ಸವಿಾಪವಾಗಿದೆ. |
10
|
ಕೃಪೆಯೂ ಸತ್ಯವೂ ಸಂಧಿಸಿ ಕೊಳ್ಳುತ್ತವೆ; ನೀತಿಯೂ ಸಮಾಧಾನವೂ ಮುದ್ದಿಟ್ಟು ಕೊಳ್ಳುತ್ತವೆ. |
11
|
ಸತ್ಯವು ಭೂಮಿಯಿಂದ ಮೊಳೆಯು ವದು; ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು. |
12
|
ಹೌದು, ಕರ್ತನು ಒಳ್ಳೇದನ್ನು ಮಾಡುವನು. ನಮ್ಮ ಭೂಮಿಯು ಅದರ ಬೆಳೆಯನ್ನು ಕೊಡುವದು. |
13
|
ನೀತಿಯು ಆತನ ಮುಂದೆ ಹೋಗುತ್ತಾ ನಾವು ಆತನ ಹೆಜ್ಜೆಗಳಲ್ಲಿ ನಡೆಯುವಂತೆ ಮಾರ್ಗವನ್ನು ಮಾಡುವದು. |
Psalms 85:1 Kannada Language Bible Words basic statistical display
COMING SOON ...