1
|
ಕರ್ತನನ್ನು ಕೊಂಡಾಡುವದೂ; ಮಹೋನ್ನತನೇ, ನಿನ್ನ ಹೆಸರನ್ನು ಕೀರ್ತಿಸುವದೂ |
2
|
ಬೆಳಿಗ್ಗೆ ನಿನ್ನ ಪ್ರೀತಿ ಕರುಣೆಯನ್ನೂ ಪ್ರತಿ ರಾತ್ರಿ ಯಲ್ಲಿ ನಿನ್ನ ನಂಬಿಗಸ್ತಿಕೆಯನ್ನೂ |
3
|
ಹತ್ತು ತಂತಿ ವೀಣೆ ಯಿಂದಲೂ ವಾದ್ಯದಿಂದಲೂ ಕಿನ್ನರಿಯ ಘನ ಸ್ವರ ದಿಂದಲೂ ತಿಳಿಸುವದು ಒಳ್ಳೇದು. |
4
|
ಕರ್ತನೇ, ನಿನ್ನ ಕ್ರಿಯೆಯಿಂದ ನನ್ನನ್ನು ಸಂತೋಷ ಪಡಿಸಿದ್ದೀ. ನಿನ್ನ ಕೈಕೆಲಸಗಳಲ್ಲಿ ನಾನು ಜಯ ಧ್ವನಿಗೈಯುತ್ತೇನೆ. |
5
|
ಕರ್ತನೇ, ನಿನ್ನ ಕೆಲಸಗಳು ಎಷ್ಟೋ ದೊಡ್ಡವು! ನಿನ್ನ ಯೋಚನೆಗಳು ಬಹಳ ಆಳವಾಗಿವೆ. |
6
|
ಇದನ್ನು ಪಶುಪ್ರಾಯದವನಾದ ಮೂರ್ಖನು ಅರಿಯನು. ಇಲ್ಲವೆ ಹುಚ್ಚನು ತಿಳಿಯನು. |
7
|
ದುಷ್ಟರು ಚಿಗುರುವದು ಮತ್ತು ಅಕ್ರಮಗಾರರು ವೃದ್ಧಿಯಾಗು ವದು ಅವರು ಎಂದೆಂದಿಗೂ ನಿರ್ಮೂಲವಾಗುವದ ಕ್ಕಾಗಿಯೇ. |
8
|
ಆದರೆ ಕರ್ತನೇ, ಎಂದೆಂದಿಗೂ ನೀನು ಉನ್ನತನಾಗಿದ್ದೀ; |
9
|
ಇಗೋ, ಓ ಕರ್ತನೇ, ನಿನ್ನ ಶತ್ರು ಗಳು, ಓ ಕರ್ತನೇ, ಇಗೋ, ನಿನ್ನ ಶತ್ರುಗಳು ನಾಶವಾಗುವರು; ಅಕ್ರಮ ಮಾಡುವವರೆಲ್ಲರು ಚದರಿ ಹೋಗುವರು. |
10
|
ಆದರೆ ನೀನು ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಹಾಗೆ ಎತ್ತುವಿ; ಹೊಸ ಎಣ್ಣೆಯಿಂದ ಅಭಿಷಿಕ್ತ ನಾಗುವೆನು. |
11
|
ನನ್ನ ಕಣ್ಣು ಸಹ ನನ್ನ ವಿರೋಧಿಗಳ ಮೇಲೆ ದೃಷ್ಟಿಸುವದು; ನನಗೆ ವಿರೋಧವಾಗಿ ಏಳುವ ದುರ್ಮಾರ್ಗಿಗಳನ್ನು ಕುರಿತು ನನ್ನ ಇಷ್ಟದಂತೆ ನನ್ನ ಕಿವಿಗಳು ಕೇಳುವವು. |
12
|
ನೀತಿವಂತನು ಖರ್ಜೂರ ಮರದ ಹಾಗೆ ಚಿಗುರುವನು; ಲೆಬನೋನಿ ನಲ್ಲಿರುವ ದೇವದಾರಿನ ಹಾಗೆ ಬೆಳೆಯುವನು. |
13
|
ಅವರು ಕರ್ತನ ಆಲಯದಲ್ಲಿ ನೆಡಲ್ಪಟ್ಟು ನಮ್ಮ ದೇವರ ಅಂಗಳಗಳಲ್ಲಿ ವೃದ್ಧಿಯಾಗುವರು. |
14
|
ಮುದಿ ಪ್ರಾಯದಲ್ಲಿಯೂ ಫಲ ಫಲಿಸುವರು. ಅವರು ಪುಷ್ಟಿಯಾಗಿ ವೃದ್ಧಿಯಾಗುವರು. |
15
|
ಕರ್ತನು ಯಥಾರ್ಥನೂ ನನ್ನ ಬಂಡೆಯೂ ಆಗಿದ್ದಾನೆ; ಆತನಲ್ಲಿ ಅನೀತಿ ಇರುವದಿಲ್ಲ. |
Psalms 92:1 Kannada Language Bible Words basic statistical display
COMING SOON ...