Indian Language Bible Word Collections
Psalms 99:3
Psalms Chapters
Psalms 99 Verses
Books
Old Testament
New Testament
Bible Versions
English
Tamil
Hebrew
Greek
Malayalam
Hindi
Telugu
Kannada
Gujarati
Punjabi
Urdu
Bengali
Oriya
Marathi
Assamese
Books
Old Testament
New Testament
Psalms Chapters
Psalms 99 Verses
1
|
ಕರ್ತನು ಆಳುತ್ತಾನೆ; ಜನಗಳು ನಡುಗಲಿ; ಆತನು ಕೆರೂಬಿಗಳ ಮಧ್ಯದಲ್ಲಿ ಕೂತಿ ದ್ದಾನೆ; ಭೂಮಿಯು ಕದಲಲಿ. |
2
|
ಕರ್ತನು ಚೀಯೋನಿನಲ್ಲಿ ದೊಡ್ಡವನಾಗಿಯೂ ಎಲ್ಲಾ ಜನಗಳ ಮೇಲೆ ಉನ್ನತನಾಗಿಯೂ ಇದ್ದಾನೆ. |
3
|
ನಿನ್ನ ಭಯಂಕರವಾದ ಹೆಸರನ್ನು ಅವರು ಕೊಂಡಾ ಡಲಿ; ಅದು ಪರಿಶುದ್ಧವಾದದ್ದೇ. |
4
|
ಅರಸನ ಬಲವು ನ್ಯಾಯವನ್ನು ಪ್ರೀತಿ ಮಾಡುತ್ತದೆ; ನೀನು ನೀತಿಯನ್ನು ಸ್ಥಿರಪಡಿಸುತ್ತೀ; ನ್ಯಾಯವನ್ನೂ ನೀತಿಯನ್ನೂ ಯಾಕೋ ಬಿನಲ್ಲಿ ನೀನು ಮಾಡಿದ್ದೀ. |
5
|
ನಮ್ಮ ದೇವರಾದ ಕರ್ತ ನನ್ನು ಉನ್ನತಪಡಿಸಿರಿ; ಆತನ ಪಾದ ಪೀಠದಲ್ಲಿ ಆರಾ ಧಿಸಿರಿ; ಆತನು ಪರಿಶುದ್ಧನೇ. |
6
|
ಆತನ ಯಾಜಕರಲ್ಲಿ ಮೋಶೆಯೂ ಆರೋನನೂ ಆತನ ಹೆಸರನ್ನು ಕರೆಯುವವರಲ್ಲಿ ಸಮುವೇಲನೂ; ಅವರು ಕರ್ತನನ್ನು ಕರೆದಾಗ ಆತನು ಅವರಿಗೆ ಉತ್ತರ ಕೊಟ್ಟನು. |
7
|
ಆತನು ಮೇಘಸ್ತಂಭದಲ್ಲಿಂದ ಅವರ ಸಂಗಡ ಮಾತನಾಡಿದನು; ಆತನ ಸಾಕ್ಷಿಗಳನ್ನೂ ಆತನು ಅವರಿಗೆ ಕೊಟ್ಟ ನಿಯಮಗಳನ್ನೂ ಅವರು ಕೈಕೊಂಡರು. |
8
|
ನಮ್ಮ ದೇವರಾದ ಓ ಕರ್ತನೇ, ನೀನು ಅವರಿಗೆ ಉತ್ತರಕೊಟ್ಟೆ; ಅವರ ಕೃತ್ಯಗಳಿಗೋಸ್ಕರ ನೀನು ಅವ ರಿಗೆ ಮುಯ್ಯಿಗೆ ಮುಯ್ಯಿ ಕೊಡುವಾತನಾಗಿದ್ದರೂ ಅವರನ್ನು ಕ್ಷಮಿಸುವ ದೇವರು ನೀನಾಗಿದ್ದೀ. |
9
|
ನಮ್ಮ ದೇವರಾದ ಕರ್ತನನ್ನು ಉನ್ನತಪಡಿಸಿರಿ; ಆತನ ಪರಿ ಶುದ್ಧ ಪರ್ವತದಲ್ಲಿ ಆರಾಧಿಸಿರಿ; ನಮ್ಮ ದೇವರಾದ ಕರ್ತನು ಪರಿಶುದ್ಧನೇ. |