ಆಗ ಮೊದಲನೆಯವನು ಹೊರಟು ತನ್ನ ಪಾತ್ರೆ ಯಲ್ಲಿದ್ದದ್ದನ್ನು ಭೂಮಿಯ ಮೇಲೆ ಹೊಯಿದನು; ಆಗ ಮೃಗದ ಗುರುತನ್ನು ಹೊಂದಿ ಅದರ ವಿಗ್ರಹಕ್ಕೆ ಆರಾಧನೆ ಮಾಡಿದ ಮನುಷ್ಯರ ಮೇಲೆ ಕೊಳೆಯುವ ಘೋರವಾದ ಹುಣ್ಣು ಎದ್ದಿತು.
ಆಮೇಲೆ ಯಜ್ಞವೇದಿಯೊಳಗಿಂದ ಮತ್ತೊಬ್ಬನು--ಹೌದು, ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ ಎಂದು ಹೇಳುವದನ್ನು ನಾನು ಕೇಳಿದೆನು.
ಅವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳ ಆತ್ಮಗಳೇ; ಸರ್ವಶಕ್ತನಾದ ದೇವರ ಮಹಾ ದಿನದಲ್ಲಾಗುವ ಯುದ್ಧಕ್ಕೆ ಭೂಲೋಕದ ಮತ್ತು ಪ್ರಪಂಚದ ಎಲ್ಲಾ ರಾಜರನ್ನು ಕೂಡಿಸುವದಕ್ಕಾಗಿ ಅವರ ಬಳಿಗೆ ಹೋಗುವವು.
ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ನಿರ್ವಾಣನಾಗಿ ತಿರುಗಾಡುವಾಗ ಜನರು ತನ್ನ ನಾಚಿಕೆಯನ್ನು ನೋಡಿಯಾರೆಂದು ಎಚ್ಚರ ವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು.
ಆ ಮಹಾಪಟ್ಟಣವು ಮೂರು ಭಾಗಗಳಾಗಿ ವಿಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು; ಇದಲ್ಲದೆ ಮಹಾಬಾಬೆಲಿಗೆ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಕೊಡು ವಂತೆ ದೇವರ ಮುಂದೆ ಅದು ಜ್ಞಾಪಕಕ್ಕೆ ಬಂತು.
ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಅನೇ ಕಲ್ಲುಗಳು ಸುರಿದವು; ಒಂದೊಂದು ಕಲ್ಲು ಹೆಚ್ಚು ಕಡಿಮೆ ನಾಲ್ಕು ಮಣ ತೂಕವಾಗಿತ್ತು; ಆ ಆನೆಕಲ್ಲುಗಳ ಉಪದ್ರವವು ಬಹಳ ಅತಿದೊಡ್ಡದಾಗಿ ದ್ದದರಿಂದ ಮನುಷ್ಯರು ದೇವರನ್ನು ದೂಷಿಸಿದರು.