ಆಮೇಲೆ ಚಿನ್ನದ ಧೂಪದ ಪಾತ್ರೆಯಿದ್ದ ಮತ್ತೊಬ್ಬ ದೂತನು ಬಂದು ಯಜ್ಞವೇದಿಯ ಬಳಿ ಯಲ್ಲಿ ನಿಂತನು; ಸಿಂಹಾಸನದ ಮುಂದೆ ಇದ್ದ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು.
ಮೊದಲನೆಯ ದೂತನು ಊದಿದಾಗ ರಕ್ತದಲ್ಲಿ ಕಲಸಿದ್ದ ಆನೆಕಲ್ಲಿನ ಮಳೆಯೂ ಬೆಂಕಿಯೂ ಭೂಮಿಗೆ ಸುರಿಸಲ್ಪಟ್ಟವು; ಮರಗಳೊಳಗೆ ಮೂರರಲ್ಲಿ ಒಂದು ಭಾಗ ಸುಟ್ಟುಹೋಯಿತು; ಹಸುರು ಹುಲ್ಲೆಲ್ಲಾ ಸುಟ್ಟುಹೋಯಿತು.
ನಾಲ್ಕನೆಯ ದೂತನು ಊದಿದಾಗ ಸೂರ್ಯನ ಮೂರರಲ್ಲಿ ಒಂದು ಭಾಗವೂ ಚಂದ್ರನ ಮೂರರಲ್ಲಿ ಒಂದು ಭಾಗವೂ ನಕ್ಷತ್ರಗಳ ಮೂರರಲ್ಲಿ ಒಂದು ಭಾಗವೂ ಒಡೆಯಲ್ಪಟ್ಟದ್ದರಿಂದ ಮೂರನೇ ಭಾಗವು ಕತ್ತಲಾಯಿತು; ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಇತ್ತು; ರಾತ್ರಿಯು ಹಾಗೆಯೇ ಆ
ಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.