1
|
ಐದನೆಯ ದೂತನು ಊದಿದಾಗ ಆಕಾಶದಿಂದ ಭೂಮಿಗೆ ಬಿದ್ದ ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ ತಳವಿಲ್ಲದ ತಗ್ಗಿನ ಬೀಗದ ಕೈ ಕೊಡಲ್ಪಟ್ಟಿತು. |
2
|
ಅವನು ಆ ತಳವಿಲ್ಲದ ತಗ್ಗನ್ನು ತೆರೆದಾಗ ಅಲ್ಲಿಂದ ದೊಡ್ಡ ಕುಲುಮೆಯ ಹೊಗೆಯಂತೆ ಆ ತಗ್ಗಿನೊಳಗಿಂದ ಹೊಗೆಯು ಏರಿತು; ಆ ತಗ್ಗಿನ ಹೊಗೆಯ ದೆಸೆಯಿಂದ ಸೂರ್ಯನು ವಾಯು ಮಂಡಲವು ಕತ್ತಲಾದವು. |
3
|
ಹೊಗೆಯೊಳಗಿಂದ ಮಿಡಿತೆಗಳು ಭೂಮಿಯ ಮೇಲೆ ಹೊರಟು ಬಂದವು. ಭೂಮಿಯಲ್ಲಿರುವ ಚೇಳುಗಳಿಗೆ ಬಲವಿರುವ ಪ್ರಕಾರ ಅವುಗಳಿಗೆ ಬಲವು ಕೊಡಲ್ಪಟ್ಟಿತು. |
4
|
ಭೂಮಿಯ ಮೇಲಿರುವ ಹುಲ್ಲನ್ನಾಗಲೀ ಯಾವ ಹಸುರಾದ ದ್ದನ್ನಾಗಲೀ ಯಾವ ಮರವನ್ನಾಗಲೀ ಕೆಡಿಸದೆ ಹಣೆಯಮೇಲೆ ದೇವರ ಮುದ್ರೆಯಿಲ್ಲದ ಮನುಷ್ಯರನ್ನು ಮಾತ್ರ ಬಾಧಿಸಬೇಕೆಂದು ಅವುಗಳಿಗೆ ಅಪ್ಪಣೆಯಾಯಿತು. |
5
|
ಅವರನ್ನು (ಮುದ್ರೆಯಿಲ್ಲದವರನ್ನು) ಕೊಲ್ಲದೆ ಐದು ತಿಂಗಳುಗಳವರೆಗೂ ಯಾತನೆಪಡಿಸಬೇಕೆಂದಾ ಯಿತು. ಅವರಿಗುಂಟಾದ ಯಾತನೆಯು ಮನುಷ್ಯನನ್ನು ಹೊಡೆಯುವ ಚೇಳಿನ ಯಾತನೆಯ ಹಾಗೆ ಇತ್ತು. |
6
|
ಆ ದಿನಗಳಲ್ಲಿ ಮನುಷ್ಯರು ಮರಣವನ್ನು ಹುಡುಕಿ ಅದನ್ನು ಕಾಣದೆ ಇರುವರು; ಸಾಯಬೇಕೆಂದು ಕೋರು ವರು, ಆದರೆ ಮೃತ್ಯುವು ಅವರ ಬಳಿಯಿಂದ ಓಡಿ ಹೋಗುವದು |
7
|
ಆ ಮಿಡಿತೆಗಳ ಆಕಾರಗಳು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ಆಕಾರದಂತೆ ಇದ್ದವು ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳೋ ಎಂಬಂತೆ ಇದ್ದವು; ಅವುಗಳ ಮುಖಗಳು ಮನುಷ್ಯರ ಮುಖಗಳ ಹಾಗೆ ಇದ್ದವು. |
8
|
ಸ್ತ್ರೀಯರ ಕೂದಲಿ ನಂತಿರುವ ಕೂದಲು ಅವುಗಳಿಗೆ ಇತ್ತು; ಅವುಗಳ ಹಲ್ಲುಗಳು ಸಿಂಹದ ಹಲ್ಲುಗಳ ಹಾಗಿದ್ದವು. |
9
|
ಅವುಗಳಿಗೆ ಕಬ್ಬಿಣದ ಕವಚಗಳಂತಿದ್ದ ಕವಚಗಳು ಇದ್ದವು; ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ಅನೇಕ ರಥಾಶ್ವಗಳ ಶಬ್ದದ ಹಾಗೆ ಇತ್ತು. |
10
|
ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ ಆ ಬಾಲಗಳಲ್ಲಿ ಕೊಂಡಿಗಳೂ ಇದ್ದವು; ಮನುಷ್ಯರನ್ನು ಐದು ತಿಂಗಳುಗಳ ವರೆಗೂ ಬಾಧಿಸುವ ಬಲವು ಅವುಗಳಿಗೆ ಇತ್ತು. |
11
|
ತಳವಿಲ್ಲದ ತಗ್ಗಿನ ದೂತನು ಅವುಗಳನ್ನಾಳುವ ಅರಸನು; ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರು. |
12
|
ಒಂದು ಆಪತ್ತು ಕಳೆದುಹೋಯಿತು; ಇದಾದ ಮೇಲೆ ಇಗೋ, ಇನ್ನೂ ಎರಡು ಆಪತ್ತುಗಳು ಬರುವದಕ್ಕಿವೆ. |
13
|
ಆರನೆಯ ದೂತನು ಊದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ವೇದಿಗಿದ್ದ ನಾಲ್ಕು ಕೊಂಬು ಗಳಿಂದ ಬಂದ ಧ್ವನಿಯನ್ನು ನಾನು ಕೇಳಿದೆನು. |
14
|
ಅದು ತುತೂರಿಯನ್ನು ಹಿಡಿದಿದ್ದ ಆರನೆಯ ದೂತನಿಗೆ--ಯೂಫ್ರೇಟೀಸ್ ಮಹಾ ನದಿಯಲ್ಲಿ ಬಂಧಿಸಲ್ಪಟ್ಟಿರುವ ನಾಲ್ಕು ಮಂದಿ ದೂತರನ್ನು ಬಿಚ್ಚಿಬಿಡು ಎಂದು ಹೇಳಿತು. |
15
|
ಆಗ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರ ಮಾಡುವ ತಾಸು, ದಿನ, ತಿಂಗಳು ಮತ್ತು ವರುಷಕ್ಕೆ ಸಿದ್ಧವಾಗಿದ್ದ ಆ ನಾಲ್ಕು ದೂತರನ್ನು ಬಿಚ್ಚಿದನು. |
16
|
ಕುದುರೇ ದಂಡಿನವರ ಸಂಖ್ಯೆಯು ಇಪ್ಪತ್ತು ಕೋಟಿ ಎಂದು ನಾನು ಕೇಳಿದೆನು. |
17
|
ನಾನು ದರ್ಶನದಲ್ಲಿ ಕುದುರೆಗಳನ್ನು ಕಂಡೆನು, ಅವುಗಳ ಮೇಲೆ ಕೂತಿದ್ದವರು ಬೆಂಕಿಯ ನೀಲಿಯ ಮತ್ತು ಗಂಧಕದ ಕವಚಗಳನ್ನು ಧರಿಸಿದ್ದರು; ಆ ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತಿದ್ದವು; ಅವುಗಳ ಬಾಯೊಳಗಿಂದ ಬೆಂಕಿ ಹೊಗೆ ಗಂಧಕ ಇವುಗಳು ಹೊರಡುತ್ತಿದ್ದವು. |
18
|
ಅವುಗಳ ಬಾಯಿಂದ ಹೊರಟ ಆ ಬೆಂಕಿ ಹೊಗೆ ಗಂಧಕ ಈ ಮೂರರಿಂದ ಮನುಷ್ಯರಲ್ಲಿ ಮೂರನೇ ಭಾಗವು ಹತವಾಯಿತು. |
19
|
ಅವುಗಳ ಬಲವು ಅವುಗಳ ಬಾಯಲ್ಲಿಯೂ ಬಾಲಗಳಲ್ಲಿಯೂ ಇರುತ್ತದೆ. ಅವುಗಳ ಬಾಲಗಳು ತಲೆಗಳುಳ್ಳವುಗಳಾಗಿ ಸರ್ಪಗಳ ಹಾಗೆ ಇದ್ದವು. ಅವುಗಳಿಂದ ಅವು ಕೇಡನ್ನುಂಟುಮಾಡು ತ್ತವೆ. |
20
|
ಈ ಉಪದ್ರವಗಳಿಂದ ಕೊಲ್ಲಲ್ಪಡದೆ ಉಳಿದ ಮನುಷ್ಯರು ದೆವ್ವಗಳನ್ನೂ ಬಂಗಾರದ ವಿಗ್ರಹಗಳನ್ನೂ ಬೆಳ್ಳಿಯ, ಹಿತ್ತಾಳೆಯ, ಕಲ್ಲಿನ ಮತ್ತು ಮರದ ವಿಗ್ರಹ ಗಳನ್ನೂ ಅಂದರೆ ನೋಡಲಾರದ ಕೇಳಲಾರದ ಇಲ್ಲವೆ ನಡೆಯಲಾರದವುಗಳನ್ನು ಆರಾಧಿಸದಂತೆ ಮಾನ ಸಾಂತರಪಡದೆ ಹೋದರು. |
21
|
ಇದಲ್ಲದೆ ತಾವು ಮಾಡುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳಿ ಗಾಗಿಯೂ ಮಾನಸಾಂತರಪಡಲಿಲ್ಲ. |
Revelation 9:21 Kannada Language Bible Words basic statistical display
COMING SOON ...