1
|
ಪ್ರತಿಯೊಬ್ಬನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವ ರಿಂದ ನೇಮಿಸಲ್ಪಟ್ಟವರು. |
2
|
ಆದದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮಕವನ್ನು ಎದುರಿಸುತ್ತಾನೆ; ಎದುರಿಸುವವರು ಶಿಕ್ಷೆಗೊಳಗಾಗು ವರು. |
3
|
ಕೆಟ್ಟಕೆಲಸ ಮಾಡುವವನಿಗೆ ಅಧಿಕಾರಿಗಳ ಭಯವಿರುವದೇ ಹೊರತು ಒಳ್ಳೇಕೆಲಸ ಮಾಡುವವ ನಿಗೆ ಇರುವದಿಲ್ಲ; ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೋ? ಒಳ್ಳೆಯದನ್ನು ಮಾಡು; ಆಗ ಆ ಅಧಿಕಾರಿಯಿಂದಲೇ ನಿನಗೆ ಹೊಗ ಳಿಕೆಯುಂಟಾಗುವದು. |
4
|
ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ; ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು; ಅವನು ಸುಮ್ಮನೆ ಕೈಯಲ್ಲಿ ಕತ್ತಿಯನ್ನು ಹಿಡಿದಿಲ್ಲ; ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ನಡಿಸುವವನಿಗೆ ದಂಡನೆಯನ್ನು ವಿಧಿಸುತ್ತಾನೆ. |
5
|
ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಿನ ನಿಮಿತ್ತವಾಗಿಯೂ (ಅವನಿಗೆ) ಅಧೀನ ನಾಗುವದು ಅವಶ್ಯ. |
6
|
ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕಂದರೆ ಅವರು ದೇವರ ಉದ್ಯೋಗಿಗಳಾಗಿದ್ದು ಆ ಕೆಲಸ ದಲ್ಲಿಯೇ ನಿರತರಾಗಿರುತ್ತಾರೆ. |
7
|
ಅವರವರಿಗೆ ಸಲ್ಲ ತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕ ವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆ ಯನ್ನು ಸಲ್ಲಿಸಿರಿ. |
8
|
ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮಗೆ ಇರ ಬಾರದು. ಮತ್ತೊಬ್ಬರನ್ನು ಪ್ರೀತಿಸುವವನು ನ್ಯಾಯಪ್ರಮಾಣವನ್ನೆಲ್ಲಾ ನೆರವೇರಿಸಿದ್ದಾನೆ. |
9
|
ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ. |
10
|
ಪ್ರೀತಿಯು ತನ್ನ ನೆರೆಯವನಿಗೆ ಯಾವ ಕೇಡನ್ನೂ ಮಾಡುವದಿಲ್ಲ. ಆದಕಾರಣ ಪ್ರೀತಿ ಯಿಂದಲೇ ನ್ಯಾಯಪ್ರಮಾಣವು ನೆರವೇರುತ್ತದೆ. |
11
|
ಈಗ ನಿದ್ರೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತುಕೊಳ್ಳಿರಿ; ನಾವು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ರಕ್ಷಣೆಯು ಹತ್ತಿರವಾಯಿತು. |
12
|
ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸವಿಾಪವಾಯಿತು; ಆದದರಿಂದ ನಾವು ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ. |
13
|
ದುಂದೌತನ ಕುಡಿಕತನಗಳಲ್ಲಾಗಲಿ ಕಾಮವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚು ಗಳಲ್ಲಿಯಾಗಲಿ ಇರದೆ ಹಗಲು ಹೊತ್ತಿಗೆ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ. |
14
|
ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ. |
Romans 13:6 Kannada Language Bible Words basic statistical display
COMING SOON ...