ಸಹೋದರರೇ, (ನ್ಯಾಯಪ್ರಮಾಣವನ್ನು ತಿಳಿದವರಿಗೆ ನಾನು ಹೇಳುವದೇ ನಂದರೆ,) ಒಬ್ಬ ಮನುಷ್ಯನು ಜೀವದಿಂದಿರುವ ತನಕ ಅವನ ಮೇಲೆ ನ್ಯಾಯಪ್ರಮಾಣವು ಪ್ರಭುತ್ವ ಮಾಡುತ್ತ ದೆಂಬದು ನಿಮಗೆ ಗೊತ್ತಿಲ್ಲವೇ?
ಹೀಗಿರಲಾಗಿ ಗಂಡನು ಜೀವದಿಂದಿರುವಾಗ ಆಕೆ ಬೇರೊಬ್ಬನನ್ನು ಮದುವೆ ಮಾಡಿಕೊಂಡರೆ ವ್ಯಭಿ ಚಾರಿಣಿ ಎಂದು ಕರೆಯಲ್ಪಡುವಳು; ಗಂಡನು ಸತ್ತರೆ ಆ ನ್ಯಾಯಪ್ರಮಾಣದಿಂದ ಆಕೆಯು ಬಿಡುಗಡೆಯಾಗಿ ದ್ದಾಳೆ. ಹೀಗೆ ಆಕೆ ಮತ್ತೊಬ್ಬನನ್ನು ಮದುವೆ ಮಾಡಿ ಕೊಂಡರೂ ವ್ಯಭಿಚಾರಿಣಿಯಲ್ಲ.
ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ನ್ಯಾಯಪ್ರಮಾಣದ ಪಾಲಿಗೆ ಸತ್ತಿರಿ. ದೇವರಿಗೆ ಫಲಫಲಿಸುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತುಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ.
ಈಗಲಾದರೋ ನಮ್ಮನ್ನು ಹಿಡುಕೊಂಡಿದ್ದ ನ್ಯಾಯಪ್ರಮಾಣದ ಪಾಲಿಗೆ ನಾವು ಸತ್ತಕಾರಣ ಅದರಿಂದ ವಿಮುಕ್ತರಾಗಿದ್ದೇವೆ; ಹೀಗೆ ನಾವು ಅಕ್ಷರದ ಹಳೇ ರೀತಿಯಲ್ಲಿ ಆತನನ್ನು ಸೇವಿಸದೆ ಆತ್ಮನಿಂದ ಹೊಸ ರೀತಿಯಲ್ಲಿಯೇ ಸೇವಿಸುತ್ತೇವೆ.
ಹಾಗಾದರೆ ನಾವು ಏನು ಹೇಳೋಣ? ನ್ಯಾಯ ಪ್ರಮಾಣವು ಪಾಪವೋ? ಹಾಗೆ ಎಂದಿಗೂ ಅಲ್ಲ; ನ್ಯಾಯಪ್ರಮಾಣದಿಂದಲೇ ಹೊರತು ಪಾಪವೆಂಬದು ಏನೋ ನನಗೆ ಗೊತ್ತಿರಲಿಲ್ಲ. ಯಾಕಂದರೆ--ನೀನು ಆಶಿಸಬಾರದು ಎಂದು ನ್ಯಾಯಪ್ರಮಾಣವು ಹೇಳ ದಿದ್ದರೆ ದುರಾಶೆಯೆಂದರೆ ಏನೋ ನನಗೆ ತಿಳಿಯು ತ್ತಿರಲಿಲ್ಲ.
ಹಾಗಾದರೆ ಹಿತವಾದದ್ದು ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ; ಆದರೆ ಪಾಪವು ಹಿತವಾದದ್ದರ ಮೂಲಕ ನನ್ನಲ್ಲಿ ಮರಣವನ್ನು ಉಂಟುಮಾಡಿದ್ದರಿಂದ ಅದು ಪಾಪವೇ ಎಂದು ಕಾಣಿಸಿಕೊಂಡಿತು. ಹೀಗೆ ಆಜ್ಞೆಯ ಮೂಲಕ ಪಾಪವು ಅತ್ಯಧಿಕವಾದ ಪಾಪವಾಗಿ ತೋರಿಬಂತು.
ಯಾಕಂದರೆ ನನ್ನಲ್ಲಿ ಅಂದರೆ ನನ್ನ ಶರೀರದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದದೆ; ಒಳ್ಳೇದನ್ನು ಮಾಡುವದಕ್ಕೆ ನನಗೇನೋ ಮನಸ್ಸುಂಟು; ಆದರೆ ಅದನ್ನು ಮಾಡುವದು ನನ್ನಿಂದಾಗದು.
ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮವುಂಟೆಂದು ನಾನು ನೋಡುತ್ತೇನೆ; ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರೋಧವಾಗಿ ಕಾದಾಡಿ ನನ್ನನ್ನು ಸೆರೆ ಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ವಶಮಾಡುವಂಥದ್ದಾಗಿದೆ.