ನಾನು ಅವರನ್ನು ಬಿಟ್ಟು ಸ್ವಲ್ಪ ಆಚೆಗೆ ಹೋದ ತರುವಾಯ, ನನ್ನ ಪ್ರಾಣಪ್ರಿಯನನ್ನು ಕಂಡೆನು. ನಾನು ಅವನನ್ನು ಹಿಡುಕೊಂಡು ನನ್ನ ತಾಯಿಯ ಮನೆಗೂ ನನ್ನನ್ನು ಹೆತ್ತವಳ ಕೊಠಡಿಗೂ ಅವನನ್ನು ಕರತರುವ ವರೆಗೆ ಹೋಗಗೊಡಿಸಲಿಲ್ಲ.
ಯೆರೂಸಲೇಮಿನ ಕುಮಾರ್ತೆಯರೇ, ನನ್ನ ಪ್ರಿಯನು ಮೆಚ್ಚುವ ವರೆಗೆ ನೀವು ನನ್ನ ಪ್ರೀತಿಯನ್ನು ಎಬ್ಬಿಸಬೇಡಿರಿ, ಎಚ್ಚರಿಸಬೇಡಿರಿ ಎಂದು ಅಡವಿಯ ಜಿಂಕೆಗಳಿಂದಲೂ ದುಪ್ಪಿಗಳಿಂದಲೂ ನಿಮಗೆ ಆಜ್ಞಾಪಿಸುತ್ತೇನೆ.
ಅವನು ಅದರ ಸ್ತಂಭಗಳನ್ನು ಬೆಳ್ಳಿಯಿಂದಲೂ ಕೆಳಗಿನ ಭಾಗವನ್ನು ಬಂಗಾರದಿಂದಲೂ ಹೊದಿಕೆ ಯನ್ನು ಧೂಮ್ರ ವರ್ಣದ ವಸ್ತ್ರದಿಂದಲೂ ಮಾಡಿ ಸಿದನು. ಯೆರೂಸಲೇಮಿನ ಕುಮಾರ್ತೆಯರ ನಿಮಿತ್ತ ಅದರ ಮಧ್ಯದಲ್ಲಿದ್ದದ್ದು ಪ್ರೀತಿಯಿಂದ ಹಾಸಲ್ಪಟ್ಟಿತು.