ಅವುಗಳನ್ನು ಸಂಪಾದಿಸಿದವರು ಅವುಗಳನ್ನು ಕೊಂದು ತಮ್ಮನ್ನು ನಿರಪರಾಧಿಗಳೆಂದೆಣಿಸುತ್ತಾರೆ; ಅವುಗಳನ್ನು ಮಾರುವ ವರು--ನಾನು ಐಶ್ವರ್ಯವಂತನಾದೆನು, ಕರ್ತನಿಗೆ ಸ್ತೋತ್ರ ಎಂದನ್ನುತ್ತಾರೆ; ಅವರ ಸ್ವಂತ ಕುರುಬರು ಅವುಗಳನ್ನು ಕನಿಕರಿಸುವದಿಲ್ಲ.
ನಾನು ದೇಶದ ನಿವಾಸಿಗಳನ್ನು ಇನ್ನು ಕನಿಕರಿಸುವದೇ ಇಲ್ಲ ಎಂದು ಕರ್ತನು ಅನ್ನುತ್ತಾನೆ; ಆದರೆ ಇಗೋ, ನಾನು ಒಬ್ಬೊ ಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ತನ್ನ ಅರಸನ ಕೈಗೂ ಒಪ್ಪಿಸುವೆನು; ಅವರು ದೇಶವನ್ನು ಹೊಡೆ ಯುವರು; ಅವರ ಕೈಯೊಳಗಿಂದ ನಾನು ಅವರನ್ನು ತಪ್ಪಿಸುವದಿಲ್ಲ.
ಆಗ ಕೊಯ್ಗುರಿಗಳ ಮಂದೆ ಯನ್ನು ಹೌದು, ಬಡವಾದ ಮಂದೆಯನ್ನೇ ಮೇಯಿಸಿದೆನು; ನನಗಾಗಿ ಎರಡು ಕೋಲುಗಳನ್ನು ತಕ್ಕೊಂಡೆನು; ಒಂದಕ್ಕೆ ಸೌಂದರ್ಯ ಎಂದೂ ಮತ್ತೊಂದಕ್ಕೆ ಬಂಧ ಗಳೆಂದೂ ಹೆಸರಿಟ್ಟೆನು; ಹೀಗೆ ಮಂದೆಯನ್ನು ಮೇಯಿ ಸಿದೆನು.
ಆಗ ನಾನು ಅವರಿಗೆ--ನಿಮ್ಮ ಕಣ್ಣುಗಳಲ್ಲಿ ಒಳ್ಳೇದಾಗಿ ತೋರಿದರೆ ನನ್ನ ಸಂಬಳವನ್ನು ಕೊಡಿರಿ, ಇಲ್ಲದಿದ್ದರೆ ಬಿಡಿರಿ ಅಂದೆನು. ಆಗ ಅವರು ನನ್ನ ಸಂಬಳಕ್ಕಾಗಿ ಮೂವತ್ತು ರೂಪಾಯಿಗಳನ್ನು ತೂಕಮಾಡಿದರು.
ಆಗ ಕರ್ತನು ನನಗೆ--ಅದನ್ನು ಕುಂಬಾರನಿಗೆ ಹಾಕು; ನಾನು ಅವರಿಂದ ಬೆಲೆ ಮಾಡಲ್ಪಟ್ಟದ್ದು ಸರಿಯಾದ ಬೆಲೆ ಅಲ್ಲವೋ ಅಂದನು; ಆಗ ನಾನು ಆ ಮೂವತ್ತು ರೂಪಾಯಿಗಳನ್ನು ತಕ್ಕೊಂಡು ಕರ್ತನ ಆಲಯದಲ್ಲಿ ಅವುಗಳನ್ನು ಕುಂಬಾರನಿಗೆ ಹಾಕಿದೆನು.
ಇಗೋ, ನಾನು ದೇಶದಲ್ಲಿ ಒಬ್ಬ ಕುರುಬನನ್ನು ಎಬ್ಬಿಸುವೆನು; ಅವನು ಕೆಟ್ಟು ಹೋಗುವ ವುಗಳನ್ನು ವಿಚಾರಿಸುವದಿಲ್ಲ; ಇಲ್ಲವೆ ಮರಿಯನ್ನು ಅವನು ಹುಡುಕುವದಿಲ್ಲ; ಮುರಿದದ್ದನ್ನು ಅವನು ಗುಣಮಾಡುವದಿಲ್ಲ; ಇನ್ನೂ ನಿಂತಿರುವದನ್ನು ಅವನು ಪೋಷಿಸುವದಿಲ್ಲ; ಆದರೆ ಕೊಬ್ಬಿದವುಗಳ ಮಾಂಸ ವನ್ನು ತಿನ್ನುವನು; ಅವುಗಳ ಗೊರಸುಗಳನ್ನು ಮುರಿದು ಬಿಡುವನು.
ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು.