ಕರ್ತನು ಹೀಗೆ ಹೇಳುತ್ತಾನೆ--ಚೀಯೋನಿಗೆ ನಾನು ತಿರಿಗಿ ಕೊಂಡಿದ್ದೇನೆ; ಯೆರೂಸಲೇಮಿನ ಮಧ್ಯದಲ್ಲಿ ವಾಸಿಸು ವೆನು; ಯೆರೂಸಲೇಮು ಸತ್ಯದ ಪಟ್ಟಣವೆಂದೂ ಸೈನ್ಯಗಳ ಕರ್ತನ ಪರ್ವತವು ಪರಿಶುದ್ಧ ಪರ್ವತ ವೆಂದೂ ಕರೆಯಲ್ಪಡುವದು.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇದು ಈ ದಿವಸಗಳಲ್ಲಿ ಉಳಿದ ಈ ಜನರ ಕಣ್ಣುಗಳಿಗೆ ಆಶ್ಚರ್ಯವಾಗಿ ತೋರಿ ದರೂ ಅದು ನನ್ನ ಕಣ್ಣುಗಳಿಗೂ ಸಹ ಆಶ್ಚರ್ಯವಾಗಿ ತೋರುವದೋ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ದೇವಾಲಯವನ್ನು ಕಟ್ಟುವ ಹಾಗೆ ಸೈನ್ಯಗಳ ಕರ್ತನ ಆಲಯದ ಅಸ್ತಿವಾರವು ಹಾಕಲ್ಪಟ್ಟ ದಿವಸದಲ್ಲಿದ್ದ ಪ್ರವಾದಿಗಳ ಬಾಯಿಂದಾದ ಈ ವಾಕ್ಯಗಳನ್ನು ಈ ದಿವಸಗಳಲ್ಲಿ ಕೇಳುವವರೇ, ನಿಮ್ಮ ಕೈಗಳು ಬಲವಾಗಿರಲಿ.
ಈ ದಿವಸಗಳಿಗಿಂತ ಮುಂಚೆ ಮನುಷ್ಯನಿಗೆ ಕೂಲಿ ಇರಲಿಲ್ಲ, ಪಶುಗಳಿಗೆ ಕೂಲಿ ಇರಲಿಲ್ಲ; ಇಲ್ಲವೆ ಹೋಗುವವ ನಿಗೂ ಬರುವವನಿಗೂ ಇಕ್ಕಟ್ಟಿನ ದೆಸೆಯಿಂದ ಸಮಾ ಧಾನವಿರಲಿಲ್ಲ. ನಾನು ಜನರೆಲ್ಲರಲ್ಲಿ ಪ್ರತಿಯೊಬ್ಬನನ್ನು ತನ್ನ ನೆರೆಯವನಿಗೆ ವಿರೋಧವಾಗಿ ಇಟ್ಟಿದ್ದೆನು.
ಬೀಜವುವೃದ್ಧಿಯಾಗುವದು; ದ್ರಾಕ್ಷೇ ಬಳ್ಳಿ ತನ್ನ ಫಲವನ್ನು ಕೊಡುವದು; ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವದು; ಆಕಾಶ ಗಳು ತಮ್ಮ ಮಂಜನ್ನು ಕೊಡುವವು; ಈ ಜನರಲ್ಲಿ ಉಳಿದವರು ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳು ವಂತೆ ಮಾಡುವೆನು.
ಆಗುವದೇನಂದರೆ, ಓ ಯೆಹೂದದ ಮನೆತನದವರೇ, ಇಸ್ರಾಯೇಲಿನ ಮನೆತನದವರೇ, ನೀವು ಜನಾಂಗಗಳಲ್ಲಿ ಶಾಪವಾಗಿದ್ದ ಪ್ರಕಾರ ನಾನು ನಿಮ್ಮನ್ನು ರಕ್ಷಿಸುವೆನು ಮತ್ತು ನೀವು ಆಶೀರ್ವಾದವಾಗಿರುವಿರಿ; ಭಯಪಡಬೇಡಿರಿ; ನಿಮ್ಮ ಕೈಗಳು ಬಲವಾಗಿರಲಿ.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಪಿತೃಗಳು ನನಗೆ ಸಿಟ್ಟು ಎಬ್ಬಿಸಿದಾಗ ನಾನು ನಿಮ್ಮನ್ನು ಶಿಕ್ಷಿಸುವದಕ್ಕೆ ಯೋಚಿಸಿದೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ; ನಾನು ಪಶ್ಚಾತ್ತಾಪ ಪಡಲಿಲ್ಲ.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.