ಸಮುದ್ರತೀರದ ನಿವಾಸಿಗಳಾದ ಕೆರೇತ್ಯರ ಜನಾಂಗಕ್ಕೆ ಅಯ್ಯೋ! ಕರ್ತನ ವಾಕ್ಯವು ನಿಮಗೆ ವಿರೋಧವಾಗಿದೆ; ಓ ಕಾನಾನೇ, ಫಿಲಿಷ್ಟಿಯರ ದೇಶವೇ, ನಿವಾಸಿಯೇ ಇಲ್ಲದ ಹಾಗೆ ನಿನ್ನನ್ನು ನಾಶಮಾಡುವೆನು.
ತೀರವು ಯೆಹೂದದ ಮನೆತನದವರ ಉಳಿದವರಿಗೆ ಆಗುವದು; ಅದರ ಮೇಲೆ ಮೇಯಿಸುವರು; ಅಷ್ಕೆ ಲೋನಿನ ಮನೆತನಗಳಲ್ಲಿ ಸಾಯಂಕಾಲ ಅವರು ಮಲಗಿಕೊಳ್ಳುವರು; ಅವರ ದೇವರಾದ ಕರ್ತನು ಅವರನ್ನು ದರ್ಶಿಸಿ ಅವರ ಸೆರೆಯನ್ನು ತಿರುಗಿಸುವನು.
ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು.
ಅದರ ಮಧ್ಯದಲ್ಲಿ ಮಂದೆಗಳೂ ಜನಾಂಗಗಳ ಮೃಗಗಳೆಲ್ಲವೂ ಮಲಗುವವು; ಬಕಪಕ್ಷಿಯೂ ಮುಳ್ಳು ಹಂದಿಯೂ ಅದರ ಮೇಲಿನ ಅವುಗಳ ಹಾಸುಗಳಲ್ಲಿ ಇಳುಕೊಳ್ಳುವವು; ಕಿಟಕಿಗಳಲ್ಲಿ ಹಾಡುವ ಶಬ್ದವಿರುವದು; ಹೊಸ್ತಿಲಗಳಲ್ಲಿ ಹಾಳು ಇರುವದು; ದೇವದಾ ರಿನ ಕೆಲಸವನ್ನು ಬೈಲುಮಾಡುವನು.
ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು.