ತನ್ನ ಸೇವಕರ ದೊಡ್ಡ ಗುಂಪಿನೊಡನೆ ಜೆರುಸಲೇಮಿಗೆ ಬಂದಳು. ಅನೇಕ ಒಂಟೆಗಳ ಮೇಲೆ ಸಾಂಬಾರ ಪದಾರ್ಥಗಳನ್ನು, ಮುತ್ತುಗಳನ್ನು ಮತ್ತು ಬಹಳ ಬಂಗಾರವನ್ನು ಹೇರಿಸಿಕೊಂಡು ಬಂದಳು. ಅವಳು ಸೊಲೊಮೋನನನ್ನು ಸಂಧಿಸಿ, ತನ್ನ ಮನಸ್ಸಿನಲ್ಲಿದ್ದ ಎಲ್ಲ ಪ್ರಶ್ನೆಗಳನ್ನು ಅವನಿಗೆ ಕೇಳಿದಳು.
ರಾಜನ ಮೇಜಿನ ಮೇಲಿದ್ದ ಆಹಾರವನ್ನೂ ಒಟ್ಟಾಗಿ ಸೇರಿಬರುತ್ತಿದ್ದ ಅವನ ಅಧಿಕಾರಿಗಳನ್ನೂ ಅರಮನೆಯಲ್ಲಿದ್ದ ಸೇವಕರನ್ನೂ ಮತ್ತು ಅವರು ಧರಿಸಿದ್ದ ಉತ್ತಮ ಬಟ್ಟೆಗಳನ್ನೂ ಅವಳು ನೋಡಿದಳು. ಅವನ ಔತಣಕೂಟಗಳನ್ನೂ ಅವನು ಆಲಯದಲ್ಲಿ ಅರ್ಪಿಸುತ್ತಿದ್ದ ಯಜ್ಞಗಳನ್ನೂ ಅವಳು ನೋಡಿದಳು. ಇವುಗಳಿಂದ ಅವಳಿಗೆ ನಿಜವಾಗಿಯೂ “ಉಸಿರುಕಟ್ಟಿಸುವಂತಹ” ವಿಸ್ಮಯವಾಯಿತು.
ನಾನೇ ಬಂದು, ನನ್ನ ಸ್ವಂತ ಕಣ್ಣುಗಳಿಂದ ಆ ಸಂಗತಿಗಳನ್ನು ನೋಡುವವರೆಗೆ ನಾನು ನಂಬಲೇ ಇಲ್ಲ. ಆದರೆ ನಾನು ಕೇಳಿದುದಕ್ಕಿಂತಲೂ ಮಹತ್ವವಾದ ಸಂಗತಿಗಳನ್ನು ಈಗ ನೋಡುತ್ತಿದ್ದೇನೆ. ಜನರು ಹೇಳಿದುದಕ್ಕಿಂತ ಅತ್ಯಂತ ಹೆಚ್ಚಿನ ಜ್ಞಾನವೂ ಐಶ್ವರ್ಯವೂ ನಿನ್ನಲ್ಲಿದೆ.
ನಿನ್ನ ಪತ್ನಿಯರೂ [*ಪತ್ನಿಯರೂ ಇದು ಪುರಾತನ ಗ್ರೀಕ್ ಭಾಷಾಂತರದಲ್ಲಿದೆ. ಹೀಬ್ರೂವಿನ ಪ್ರತಿಯಲ್ಲಿ “ಪುರುಷರು” ಎಂದಿದೆ.] ಅಧಿಕಾರಿಗಳೂ ಧನ್ಯರೇ ಸರಿ! ಯಾಕೆಂದರೆ ಅವರು ನಿನ್ನ ಸೇವೆ ಮಾಡುತ್ತಾ ನಿನ್ನ ಜ್ಞಾನವಾಕ್ಯಗಳನ್ನು ಕೇಳಬಹುದು!
ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ! ನಿನ್ನನ್ನು ಇಸ್ರೇಲಿನ ರಾಜನಾಗಿ ಮಾಡಲು ಆತನು ಸಂತೋಷಪಟ್ಟಿರಬೇಕು. ದೇವರಾದ ಯೆಹೋವನು ಇಸ್ರೇಲನ್ನು ಸದಾ ಪ್ರೀತಿಸುತ್ತಾನೆ. ಆದ್ದರಿಂದಲೇ ಆತನು ನಿನ್ನನ್ನು ರಾಜನನ್ನಾಗಿ ನೇಮಿಸಿದನು. ನೀನು ಕಟ್ಟಳೆಗಳನ್ನು ಅನುಸರಿಸುತ್ತಿರುವೆ ಮತ್ತು ಜನರಿಗೆ ನ್ಯಾಯ ದೊರಕಿಸುತ್ತಿರುವೆ” ಎಂದು ಹೇಳಿದಳು.
ನಂತರ ಶೆಬದ ರಾಣಿಯು ರಾಜನಿಗೆ ನಾಲ್ಕು ಸಾವಿರದ ಎಂಭತ್ತು ಕಿಲೋಗ್ರಾಂ ಬಂಗಾರವನ್ನು ಕೊಟ್ಟಳು. ಅವಳು ಅವನಿಗೆ ಅನೇಕ ಸಾಂಬಾರ ಪದಾರ್ಥಗಳನ್ನು ಮತ್ತು ರತ್ನಗಳನ್ನು ಕೊಟ್ಟಳು. ಹಿಂದೆಂದೂ ಯಾರೂ ಇಸ್ರೇಲಿಗೆ ತೆಗೆದುಕೊಂಡು ಬಂದಿಲ್ಲದಷ್ಟು ಸಾಂಬಾರ ಪದಾರ್ಥಗಳನ್ನು ಶೆಬದ ರಾಣಿಯು ಸೊಲೊಮೋನನಿಗೆ ಕೊಟ್ಟಳು.
ಸೊಲೊಮೋನನು ಮರವನ್ನು ಆಲಯದ ಮತ್ತು ಅರಮನೆಯ ಆಧಾರಕಂಬಗಳಿಗಾಗಿ ಬಳಸಿದನು. ಅವನು ಹಾಡುಗಾರರಿಗೆ ಬೇಕಾದ ಹಾರ್ಪ್ ವಾದ್ಯಗಳನ್ನು ಮತ್ತು ಲೈರ್ ವಾದ್ಯಗಳನ್ನು ತಯಾರಿಸಲು ಆ ಮರವನ್ನು ಉಪಯೋಗಿಸಿದನು. ಹಿಂದೆಂದೂ ಯಾವ ವ್ಯಕ್ತಿಯೂ ಅಂತಹ ಮರವನ್ನು ಇಸ್ರೇಲಿಗೆ ತಂದಿರಲಿಲ್ಲ ಮತ್ತು ಅಲ್ಲಿಯವರೆಗೆ ಇಸ್ರೇಲಿನ ಯಾವ ವ್ಯಕ್ತಿಯೂ ಅಂತಹ ಮರವನ್ನು ನೋಡಿರಲಿಲ್ಲ.
ಆಗ ರಾಜನಾದ ಸೊಲೊಮೋನನು ಇತರ ದೇಶದ ರಾಜರಿಗೆ ಮರ್ಯಾದೆಗಾಗಿ ನೀಡುವ ಕಾಣಿಕೆಗಳನ್ನು ಶೆಬದ ರಾಣಿಗೂ ಕೊಟ್ಟನು. ಆಕೆಯು ಕೇಳಿದ್ದೆಲ್ಲವನ್ನೂ ಅವನು ನೀಡಿದನು. ಅನಂತರ ರಾಣಿಯು ಸೇವಕರೊಡನೆ ತನ್ನ ದೇಶಕ್ಕೆ ಹಿಂದಿರುಗಿದಳು.
ಅವನು ಬಂಗಾರದ ತಗಡಿನಿಂದ ಮುನ್ನೂರು ಚಿಕ್ಕ ಗುರಾಣಿಗಳನ್ನು ಮಾಡಿಸಿದನು. ಪ್ರತಿಯೊಂದು ಗುರಾಣಿಯಲ್ಲಿ ನಾಲ್ಕು ಪೌಂಡುಗಳಷ್ಟು ಬಂಗಾರವಿತ್ತು. ರಾಜನು ಅವುಗಳನ್ನು “ಲೆಬನೋನಿನ ಅರಣ್ಯ” ಎಂದು ಕರೆಯುವ ಕಟ್ಟಡದಲ್ಲಿಟ್ಟನು.
ಸಿಂಹಾಸನದ ಮೇಲಕ್ಕೆ ಹತ್ತಲು ಅದರಲ್ಲಿ ಆರು ಮೆಟ್ಟಿಲುಗಳಿದ್ದವು. ಸಿಂಹಾಸನದ ಮೇಲ್ಭಾಗವು ವೃತ್ತಾಕಾರವಾಗಿತ್ತು. ಆ ಸಿಂಹಾಸನದ ಎರಡು ಕಡೆಗಳಲ್ಲಿ ಎರಡು ತೋಳುಗಳಿದ್ದವು. ಆ ಸಿಂಹಾಸನದ ತೋಳುಗಳ ಕೆಳಭಾಗದಲ್ಲಿ ಸಿಂಹದ ಚಿತ್ರಗಳಿದ್ದವು.
ಸೊಲೊಮೋನನ ಬಟ್ಟಲುಗಳು ಮತ್ತು ಲೋಟಗಳು ಬಂಗಾರದಿಂದ ತಯಾರಿಸಲಾಗಿದ್ದವು. “ಲೆಬನೋನಿನ ಅರಣ್ಯ” ಎಂದು ಕರೆಯುವ ಕಟ್ಟಡದಲ್ಲಿದ್ದ ಎಲ್ಲಾ ಆಯುಧಗಳನ್ನು ಅಪ್ಪಟ ಚಿನ್ನದಿಂದ ಮಾಡಿದ್ದರು. ಅರಮನೆಯ ಯಾವ ವಸ್ತುವನ್ನೂ ಬೆಳ್ಳಿಯಿಂದ ಮಾಡಿರಲಿಲ್ಲ. ಜನರು ಬೆಳ್ಳಿಯನ್ನು ಅಮೂಲ್ಯವೆಂದು ಯೋಚಿಸದಷ್ಟು ಬಂಗಾರವು ಸೊಲೊಮೋನನ ಕಾಲದಲ್ಲಿತ್ತು!
ರಾಜನಾದ ಸೊಲೊಮೋನನ ಹತ್ತಿರ ಅನೇಕ ಸರಕು ಸಾಗಣಿಕೆಯ ಹಡಗುಗಳಿದ್ದವು. ಅವನು ಅವುಗಳನ್ನು ಇತರ ದೇಶಗಳಲ್ಲಿನ ವ್ಯಾಪಾರಕ್ಕಾಗಿ ಕಳುಹಿಸುತ್ತಿದ್ದನು. ಇವು ಹೀರಾಮನ ಹಡಗುಗಳು. ಈ ಹಡಗುಗಳು ಬಂಗಾರ, ಬೆಳ್ಳಿ, ದಂತ ಮತ್ತು ಪ್ರಾಣಿಗಳನ್ನು ಹೊಸದಾಗಿ ತುಂಬಿಕೊಂಡು ಮೂರು ವರ್ಷಕ್ಕೊಮ್ಮೆ ಹಿಂದಿರುಗುತ್ತಿದ್ದವು.
ಪ್ರತಿವರ್ಷವೂ ರಾಜನನ್ನು ನೋಡಲು ಜನರು ಬರುತ್ತಿದ್ದರು. ಪ್ರತಿಯೊಬ್ಬನೂ ಕಾಣಿಕೆಯನ್ನು ತರುತ್ತಿದ್ದನು. ಅವರು ಬೆಳ್ಳಿಬಂಗಾರದಿಂದ ಮಾಡಿದ ವಸ್ತುಗಳನ್ನು, ಆಯುಧಗಳನ್ನು, ಉಡುಪುಗಳನ್ನು, ಸಾಂಬಾರ ಪದಾರ್ಥಗಳನ್ನು, ಕುದುರೆಗಳನ್ನು ಮತ್ತು ಹೇಸರಕತ್ತೆಗಳನ್ನು ತರುತ್ತಿದ್ದರು.
ಆದ್ದರಿಂದ ಅಸಂಖ್ಯವಾದ ರಥಗಳೂ ಕುದುರೆಗಳೂ ಸೊಲೊಮೋನನಲ್ಲಿದ್ದವು. ಅವನಲ್ಲಿ ಒಂದು ಸಾವಿರದ ನಾನೂರು ರಥಗಳು ಮತ್ತು ಹನ್ನೆರಡು ಸಾವಿರ ಕುದುರೆಗಳಿದ್ದವು. ಸೊಲೊಮೋನನು ಈ ರಥಗಳಿಗಾಗಿ ವಿಶೇಷವಾದ ನಗರಗಳನ್ನು ಕಟ್ಟಿಸಿದನು. ಆ ನಗರಗಳಲ್ಲಿ ರಥಗಳನ್ನು ಇರಿಸಿದನು. ರಾಜನಾದ ಸೊಲೊಮೋನನು ಕೆಲವು ರಥಗಳನ್ನು ಜೆರುಸಲೇಮಿನಲ್ಲಿ ತನ್ನ ಹತ್ತಿರ ಇಟ್ಟುಕೊಂಡನು.
ಈಜಿಪ್ಟಿನ ಒಂದು ರಥದ ಬೆಲೆಯು ಏಳು ಕಿಲೋಗ್ರಾಂ ಆದರೆ ಒಂದು ಕುದುರೆಯ ಬೆಲೆಯು ಎರಡು ಕಿಲೋಗ್ರಾಂ ಬೆಳ್ಳಿಯಾಗಿತ್ತು. ಸೊಲೊಮೋನನು ಹಿತ್ತಿಯ ಮತ್ತು ಅರಾಮ್ಯ ರಾಜರುಗಳಿಗೆ ಕುದುರೆಗಳನ್ನೂ ರಥಗಳನ್ನೂ ಮಾರಿದನು.