ಕೆಲವು ಜನರು ಯೆಹೋಷಾಫಾಟನ ಬಳಿಗೆ ಬಂದು, “ಎದೋಮ್ಯರ ದೊಡ್ಡ ಸೈನ್ಯವು ಲವಣಸಮುದ್ರದ ಆಚೆಕಡೆಯಿಂದ ನಿನಗೆ ವಿರುದ್ಧವಾಗಿ ಬರುತ್ತಿದೆ. ಈಗಾಗಲೇ ಅವರು ಹಚೆಚೋನ್ ತಾಮಾರಿನಲ್ಲಿದ್ದಾರೆ” (ಇದನ್ನು ಏಂಗೆದಿ ಎಂತಲೂ ಕರೆಯುತ್ತಾರೆ.) ಎಂದು ಹೇಳಿದರು.
ಅವರು, ‘ನಮಗೆ ಖಡ್ಗ, ಕಾಯಿಲೆ, ಬರ, ಶಿಕ್ಷೆಗಳಿಂದ ಸಂಕಷ್ಟ ಉಂಟಾದರೆ ನಾವು ನಿನ್ನ ಮತ್ತು ನಿನ್ನ ಆಲಯದೆದುರು ನಿಂತು ನಿನಗೆ ಮೊರೆಯಿಡುವಾಗ ನೀನು ನಮ್ಮ ಮೊರೆಯನ್ನು ಕೇಳಿ ನಮಗೆ ಸಹಾಯ ಮಾಡುವೆ. ನಿನ್ನ ಹೆಸರು ಈ ಆಲಯದ ಮೇಲಿದೆ’ ಎಂದು ಹೇಳಿದರು.
“ಈಗ ಅಮ್ಮೋನಿಯರೂ ಮೋವಾಬಿನವರೂ ಸೇಯೀರ್ ಬೆಟ್ಟಪ್ರದೇಶದವರೂ ನಮಗೆ ವಿರೋಧವಾಗಿ ಬಂದಿದ್ದಾರೆ. ಈಜಿಪ್ಟಿನಿಂದ ಇಸ್ರೇಲರು ಹೊರಬಂದಾಗ ಅವರ ದೇಶದೊಳಗಿಂದ ಪ್ರಯಾಣ ಮಾಡಲು ನೀನು ಬಿಡಲಿಲ್ಲ. ಆದ್ದರಿಂದ ಇಸ್ರೇಲರು ಅವರನ್ನು ನಾಶಮಾಡದೆ ಬೇರೆ ಕಡೆಗೆ ತಿರುಗಿದರು.
ನಮ್ಮ ದೇವರೇ, ನೀನೇ ಅವರನ್ನು ಶಿಕ್ಷಿಸು. ನಮಗೆ ವಿರುದ್ಧವಾಗಿ ಬರುತ್ತಿರುವ ಅವರ ದೊಡ್ಡಸೈನ್ಯವನ್ನು ಎದುರಿಸಲು ನಮ್ಮಿಂದಾಗದು. ಏನು ಮಾಡಬೇಕೋ ನಮಗೆ ತಿಳಿಯುತ್ತಿಲ್ಲ. ನಾವು ನಿನ್ನ ಸಹಾಯವನ್ನೇ ಎದುರುನೋಡುತ್ತಿದ್ದೇವೆ” ಎಂದು ಪ್ರಾರ್ಥಿಸಿದನು.
ಸಭೆಯ ಮಧ್ಯದಲ್ಲಿ ನಿಂತುಕೊಂಡು ಯೆಹಜೀಯೇಲನು ಅವರಿಗೆ, “ರಾಜನಾದ ಯೆಹೋಷಾಫಾಟನೇ, ನನ್ನ ಮಾತನ್ನು ಕೇಳು. ಜೆರುಸಲೇಮಿನಲ್ಲಿಯೂ ಯೆಹೂದದ ರಾಜ್ಯದಲ್ಲಿಯೂ ವಾಸಿಸುವ ಸರ್ವಜನರೇ, ನನ್ನ ಮಾತನ್ನು ಕೇಳಿರಿ. ಯೆಹೋವನು ನಿಮಗೆ ಹೀಗೆನ್ನುತ್ತಾನೆ: ‘ಆ ದೊಡ್ಡ ಸೈನ್ಯಕ್ಕೆ ಹೆದರಿ ಚಿಂತೆಗೊಳಗಾಗಬೇಡಿ. ಯಾಕೆಂದರೆ ಯುದ್ಧವು ನಿಮ್ಮದಲ್ಲ, ಅದು ದೇವರದೇ!
ನೀವು ಈ ಯುದ್ಧದಲ್ಲಿ ಹೋರಾಡುವ ಅವಶ್ಯವಿಲ್ಲ. ನಿಮ್ಮ ಸ್ಥಳಗಳಲ್ಲಿ ಸ್ಥಿರವಾಗಿ ನಿಂತುಕೊಂಡಿರಿ. ಯೆಹೋವನ ರಕ್ಷಣಾಕಾರ್ಯವನ್ನು ನೀವು ನೋಡುವಿರಿ. ಭಯಪಡಬೇಡಿರಿ; ಚಿಂತೆಗೊಳಗಾಗಬೇಡಿರಿ; ಯೆಹೋವನು ನಿಮ್ಮೊಂದಿಗಿದ್ದಾನೆ. ಆದ್ದರಿಂದ ನೀವು ನಾಳೆ ಹೋಗಿ ಆ ಸೈನ್ಯವನ್ನು ಎದುರಿಸಿರಿ’ ” ಎಂದು ಹೇಳಿದನು.
ಮರುದಿನ ಮುಂಜಾನೆ ಯೆಹೋಷಾಫಾಟನ ಸೈನ್ಯವು ತೆಕೋವದ ಅರಣ್ಯಕ್ಕೆ ಹೊರಟಿತು. ಅವರು ಹೊರಡುವ ಮುಂಚೆ ಯೆಹೋಷಾಫಾಟನು ಎದ್ದುನಿಂತು, “ಜೆರುಸಲೇಮಿನವರೇ, ಯೆಹೂದ ಪ್ರಾಂತ್ಯದವರೇ, ನನ್ನ ಮಾತನ್ನು ಕೇಳಿರಿ. ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಡಿರಿ. ಆಗ ನೀವು ಸ್ಥಿರಗೊಳ್ಳುವಿರಿ. ಯೆಹೋವನ ಪ್ರವಾದಿಗಳ ಮೇಲೆ ಭರವಸವಿಡಿರಿ; ಆಗ ನೀವು ಜಯಗಳಿಸುವಿರಿ” ಎಂದು ಹೇಳಿದನು.
ಯೆಹೋಷಾಫಾಟನು ಜನರ ಸಲಹೆಗಳನ್ನು ಕೇಳಿದನು; ಯೆಹೋವನನ್ನು ಸ್ತುತಿಸಲು ಗಾಯಕರನ್ನು ಆರಿಸಿದನು; ಯಾಕೆಂದರೆ ಆತನು ಪರಿಶುದ್ಧನು ಮತ್ತು ಅದ್ಭುತಸ್ವರೂಪನು. ಅವರು ಸೈನ್ಯದ ಮುಂದುಗಡೆಯಲ್ಲಿ ಹೋಗುತ್ತಾ ಆತನಿಗೆ ಸ್ತುತಿಗೀತೆಯನ್ನು ಹಾಡಿದರು. ಆ ಗಾಯಕರು, “ಯೆಹೋವನಿಗೆ ಸ್ತೋತ್ರಮಾಡಿರಿ. ಆತನ ಕರುಣೆಯು ನಿರಂತರವಾದದ್ದು” ಎಂದು ಹಾಡಿದರು.
ಅವರು ಹೀಗೆ ಸ್ತೋತ್ರ ಮಾಡುತ್ತಿರುವಾಗ ಅಮ್ಮೋನಿಯರ ಮೇಲೆಯೂ ಮೋವಾಬ್ಯರ ಮೇಲೆಯೂ ಸೇಯೀರ್ ಬೆಟ್ಟಪ್ರದೇಶದವರ ಮೇಲೆಯೂ ಇತರ ವೈರಿಗಳು ಹಠಾತ್ತನೆ ದಾಳಿ ಮಾಡುವಂತೆ ಯೆಹೋವನು ಮಾಡಿದನು. ಯೆಹೂದವನ್ನು ಆಕ್ರಮಣಮಾಡಲು ಬಂದಿದ್ದ ಅವರೆಲ್ಲರೂ ಸೋತುಹೋದರು.
ಅಮ್ಮೋನಿಯರೂ ಮೋವಾಬ್ಯರೂ ಸೇಯೀರ್ ಬೆಟ್ಟಪ್ರದೇಶದವರೊಂದಿಗೆ ಹೋರಾಡಲಾರಂಭಿಸಿ ಅವರನ್ನು ಕೊಂದು ನಾಶಪಡಿಸಿದರು. ಅವರು ಸೇಯೀರ್ ಬೆಟ್ಟಪ್ರದೇಶದವರನ್ನು ಕೊಂದ ಬಳಿಕ ತಮ್ಮಲ್ಲಿ ತಾವೇ ಒಬ್ಬರನ್ನೊಬ್ಬರು ಕೊಂದರು.
ಯೆಹೋಷಾಫಾಟನೂ ಅವನ ಸೈನಿಕರೂ ಬಂದು ಸತ್ತವರ ದೇಹದಿಂದ ಬೆಲೆಬಾಳುವ ವಸ್ತುಗಳನ್ನು ಸೂರೆ ಮಾಡಿದರು. ಅವರು ಅನೇಕ ಪಶುಗಳನ್ನು, ಐಶ್ವರ್ಯವನ್ನು, ಬಟ್ಟೆಬರೆಗಳನ್ನು ಮತ್ತು ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡರು. ಯೆಹೋಷಾಫಾಟನು ಮತ್ತು ಅವನ ಜನರು ಹೊತ್ತುಕೊಂಡು ಹೋಗಲಾರದಷ್ಟು ವಸ್ತುಗಳಿದ್ದವು; ಅವುಗಳನ್ನು ಶೇಖರಿಸಲು ಮೂರು ದಿವಸಗಳು ಬೇಕಾಯಿತು.
ನಾಲ್ಕನೆಯ ದಿವಸದಲ್ಲಿ ಯೆಹೋಷಾಫಾಟನೂ ಅವನ ಸೈನ್ಯವೂ ಬೆರಾಕ ತಗ್ಗಿನಲ್ಲಿ ಬಂದು ಸೇರಿದರು. ಅಲ್ಲಿ ಯೆಹೋವನಿಗೆ ಸ್ತೋತ್ರ ಮಾಡಿದರು. ಆದ್ದರಿಂದ ಈ ದಿನದವರೆಗೂ ಅದಕ್ಕೆ ಬೆರಾಕ [*ಬೆರಾಕ ಅಂದರೆ ಸ್ತುತಿ.] ತಗ್ಗು ಎಂಬ ಹೆಸರಿದೆ.
ಯೆಹೂದ ದೇಶವನ್ನು ಯೆಹೋಷಾಫಾಟನು ಆಳಿದನು. ಅವನು ಪಟ್ಟವನ್ನೇರಿದಾಗ ಮೂವತ್ತೈದು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಅವನ ತಾಯಿಯ ಹೆಸರು ಅಜೂಬ. ಆಕೆ ಶಿಲ್ಹಿ ಎಂಬಾತನ ಮಗಳು.
ಆಗ ಎಲಿಯೇಜರನು ಯೆಹೋಷಾಫಾಟನ ವಿರುದ್ಧವಾಗಿ ಪ್ರವಾದಿಸಿದನು. ಅವನು ದೋದಾವಾಹುವಿನ ಮಗನು. ಅವನು ಮಾರೇಶ ಎಂಬ ಪಟ್ಟಣದವನಾಗಿದ್ದನು. ಅವನು, “ಯೆಹೋಷಾಫಾಟನೇ, ನೀನು ಅಹಜ್ಯನೊಂದಿಗೆ ಸೇರಿಕೊಂಡಿರುವೆ. ಇದಕ್ಕಾಗಿ ಯೆಹೋವನು ನಿನ್ನ ಕೆಲಸಗಳನ್ನು ನಾಶಮಾಡುವನು” ಎಂದು ಹೇಳಿದನು. ಅವನ ಹಡಗುಗಳು ಸಮುದ್ರದಲ್ಲಿ ಒಡೆದು ಹೋದದ್ದರಿಂದ ಅವುಗಳು ತಾರ್ಷೀಷಿಗೆ ಹೋಗಲಾಗಲಿಲ್ಲ.