ಯೋತಾವುನು ಯೆಹೋವನಿಗೆ ಮೆಚ್ಚಿಕೆಯಾದ ಕಾರ್ಯಗಳನ್ನು ಮಾಡಿದನು. ತನ್ನ ತಂದೆಯಾದ ಉಜ್ಜೀಯನಂತೆ ಅವನೂ ದೇವರಿಗೆ ವಿಧೇಯನಾಗಿ ನಡೆದುಕೊಂಡನು. ಆದರೆ ತನ್ನ ತಂದೆಯು ದೇವಾಲಯವನ್ನು ಪ್ರವೇಶಿಸಿ ಧೂಪಹಾಕಿದಂತೆ ಇವನು ಮಾಡಲಿಲ್ಲ. ಜನರು ಮಾತ್ರ ಕೆಟ್ಟಕಾರ್ಯಗಳಲ್ಲಿಯೇ ಮುಂದುವರೆದರು.
ಯೋತಾವುನು ಅಮ್ಮೋನಿಯರ ಸೈನ್ಯದೊಡನೆ ಕಾದಾಡಿ ಜಯಗಳಿಸಿದನು. ಅವರು ಪ್ರತಿ ವರ್ಷ ಮೂರು ವರ್ಷಗಳ ಕಾಲ ಮೂರು ಸಾವಿರದ ನಾನೂರು ಕಿಲೋಗ್ರಾಂ ತೂಕದ ಬೆಳ್ಳಿ, ಅರವತ್ತೆರಡು ಸಾವಿರ ಬುಷೆಲ್ ಗೋಧಿಯನ್ನೂ, ಅರವತ್ತೆರಡು ಸಾವಿರ ಬುಷೆಲ್ ಜವೆಗೋಧಿಯನ್ನೂ ಯೋತಾವುನಿಗೆ ಕಾಣಿಕೆಯಾಗಿ ಕೊಟ್ಟರು.